Homeಮುಖಪುಟಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಪತನದತ್ತ ಬಿಹಾರ ಸರ್ಕಾರ: ಬಿಜೆಪಿ ತೊರೆದು ಆರ್‌ಜೆಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ ಜೆಡಿಯು

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

- Advertisement -
- Advertisement -

ಬಿಹಾರದಲ್ಲಿ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ಪಕ್ಷಗಳ ಮೈತ್ರಿ ನಡುವೆ ಕಾಣಿಸಿಕೊಂಡ ಬಿರುಕು ದೊಡ್ಡದಾಗತೊಡಗಿದೆ. ಜೆಡಿಯು ಶಾಸಕರ ಸಭೆ ಕರೆದಿರುವ ಸಿಎಂ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಹಾರದಲ್ಲಿ ಜೆಡಿಯು ಪಕ್ಷವನ್ನು ಇಬ್ಭಾಗ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿರುವ ಜೆಡಿಯು ರಾಷ್ಟ್ರಿಯ ಅಧ್ಯಕ್ಷ ರಾಜೀವ್ ರಂಜನ್ ಸೂಕ್ತ ಸಮಯದಲ್ಲಿ ಈ ಪಿತೂರಿಗಳನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನೊಂದೆಡೆ ಜೆಡಿಯು ಸದಸ್ಯರು ಮಧ್ಯಂತರ ಚುನಾವಣೆ ಎದುರಿಸಲು ಸಿದ್ದರಿಲ್ಲದ ಕಾರಣ ಬಿಜೆಪಿ ಜೊತೆಗಿನ ಮೈತ್ರಿ ಕಳೆದುಕೊಂಡಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರ ರಚಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ.

ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಜೆಡಿಯು ಮುನಿಸಿಗೆ ಕಾರಣವೇನು?

ಜೆಡಿಯುವಿನಿಂದ ರಾಜ್ಯಸಭಾ ಸದಸ್ಯನಾಗಿದ್ದ ಆರ್‌ಪಿ ಸಿಂಗ್‌ಗೆ ಬಿಜೆಪಿಯು ಜೆಡಿಯು ಪಕ್ಷದ ವಿರೋಧದ ನಡುವೆಯು ಕೇಂದ್ರ ಸಚಿವ ಸ್ಥಾನ ನೀಡಿತ್ತು. ಇದು ಜೆಡಿಯುಗೆ ಇರಿಸು ಮುರಿಸು ತಂದಿತ್ತು. ಹಾಗಾಗಿಯೇ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಸಭಾ ಸ್ಥಾನವನ್ನು ನೀಡದಿರಲು ಜೆಡಿಯು ನಿರ್ಧಿರಿಸಿತ್ತು. ಇದರಿಂದ ಕೆರಳಿದ ಆರ್‌ಪಿ ಸಿಂಗ್ ಜೆಡಿಯು ತೊರೆದರಲ್ಲದೆ ಸಿಎಂ ನಿತೀಶ್ ಕುಮಾರ್ ವಿರುದ್ಧ ಬಹಿರಂಗವಾಗಿ ಟೀಕೆ ನಡೆಸಿದ್ದರು. ನಿತೀಶ್ ಕುಮಾರ್ ಕುಟುಂಬದ ವ್ಯಕ್ತಿಗಳ ವಿರುದ್ಧ ದಾಳಿ ನಡೆಸಿದ್ದರು.

ಬಿಹಾರ ಅಸೆಂಬ್ಲಿ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಕೂಡ ನಿತೀಶ್ ಕುಮಾರ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆಯುವಂತೆ ಜೆಡಿಯು ಆಗ್ರಹಿಸಿತ್ತು. ಆದರೆ ಬಿಜೆಪಿ ಅವರನ್ನೇ ಮುಂದುವರೆಸಿತ್ತು.

ಕೇಂದ್ರ ಸಚಿವ ಸ್ಥಾನಗಳನ್ನು ನೀಡುವಾಗ ಜೆಡಿಯು ಪಕ್ಷವನ್ನು ಕಡೆಗಣಿಸಲಾಗುತ್ತಿದೆ ಎಂಬುದು ಜೆಡಿಯು ಆರೋಪವಾಗಿದೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ವಿರುದ್ಧ ತಿರುಗಿ ಬಿದ್ದಿರುವ ನಿತೀಶ್ ಕುಮಾರ್ ಎನ್‌ಡಿಎ ವತಿಯಿಂದ ನಡೆದ ಹಲವು ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ಬಿಜೆಪಿ ವಿರುದ್ಧ ಟೀಕೆ ಮಾಡುವುದಕ್ಕೆ ಬದಲಾಗಿ ಜೆಡಿಯು ಮುಖಂಡರು ಸರ್ಕಾರದಿಂದ ಹೊರನಡೆಯುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಫಲಿಸುತ್ತದೆ ಎಂಬುದು ಇನ್ನ ಎರಡು ಮೂರು ದಿನಗಳಲ್ಲಿ ತಿಳಿಯಲಿದೆ.

ಇದನ್ನೂ ಓದಿ; ಮಿತ್ರಪಕ್ಷ ಬಿಜೆಪಿ ಜೊತೆ ನಿತೀಶ್‌ ಮುನಿಸು: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...