Homeಮುಖಪುಟಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಬಿಹಾರ ಸರ್ಕಾರ

ಮೀಸಲಾತಿ ಹೆಚ್ಚಳ ರದ್ದು: ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಬಿಹಾರ ಸರ್ಕಾರ

- Advertisement -
- Advertisement -

ಹಿಂದುಳಿದ ವರ್ಗಗಳು, ಅತ್ಯಂತ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಲು ಅವಕಾಶ ಕಲ್ಪಿಸುವ ಮೀಸಲಾತಿ (ತಿದ್ದುಪಡಿ) ಕಾಯ್ದೆ-2023 ರದ್ದುಗೊಳಿಸಿರುವ ಪಾಟ್ನಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಿಹಾರದ ನಿತೀಶ್‌ ಕುಮಾರ್‌ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮೀಸಲಾತಿ ವರ್ಗಗಳ ಒಟ್ಟು ಮೀಸಲಾತಿ ಹೆಚ್ಚಿಸುವ ಸಲುವಾಗಿ ಶೇಖಡ 50ರಷ್ಟಿದ ಮೀಸಲಾತಿ ಮಿತಿಯನ್ನು ಶೇ.65ಕ್ಕೆ ಹೆಚ್ಚಿಸಲು 2023ರಲ್ಲಿ ಬಿಹಾರ ವಿಧಾನಸಭೆ ಕಾಯ್ದೆಗೆ ತಿದ್ದುಪಡಿ ತಂದಿತ್ತು.

ತಿದ್ದುಪಡಿ ಮಾಡಲಾದ ಕಾಯ್ದೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ವಂಚಿಸುತ್ತದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ನೀಡಲಾಗಿದ್ದ ತೀರ್ಪಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಮತ್ತು ಸಂವಿಧಾನದ 14, 15 ಮತ್ತು 16ನೇ ವಿಧಿಯಡಿ ಒದಗಿಸಲಾದ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಮುಖ್ಯ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಹರೀಶ್ ಕುಮಾರ್ ಅವರಿದ್ದ ಪಾಟ್ನಾ ಹೈಕೋರ್ಟ್ ವಿಭಾಗೀಯ ಪೀಠವು ಬಿಹಾರ ಮೀಸಲಾತಿ (ತಿದ್ದುಪಡಿ) ಕಾಯ್ದೆ-2023 ಮತ್ತು ಬಿಹಾರ (ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ) ಮೀಸಲಾತಿ (ತಿದ್ದುಪಡಿ) ಕಾಯ್ದೆ-2023 ಅನ್ನು ಬದಿಗೆ ಸರಿಸಿತ್ತು.

ಸರ್ಕಾರಿ ಸೇವೆಯಲ್ಲಿ ತುಲನಾತ್ಮಕವಾಗಿ ಎಸ್‌ಸಿ, ಎಸ್‌ ಟಿ ಮತ್ತು ಹಿಂದುಳಿದ ವರ್ಗಗಳ ಸದಸ್ಯರ ಸಂಖ್ಯೆ ಕಡಿಮೆ ಇದೆ ಎಂಬ ದತ್ತಾಂಶ ಆಧರಿಸಿ ಶಾಸಕಾಂಗ 1991ರ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದಿತ್ತು.

ಅದರಂತೆ ಮೀಸಲಾತಿ ವರ್ಗಗಳ ಒಟ್ಟು ಮೀಸಲಾತಿಯನ್ನು 2023ರಲ್ಲಿ ಶೇ 65ಕ್ಕೆ ಹೆಚ್ಚಿಸಲಾಗಿತ್ತು. ಈ ನಿರ್ಧಾರದಿಂದಾಗಿ ಸಾಮಾನ್ಯ ಅರ್ಹತೆಯ ವರ್ಗದವರಿಗೆ ಇದ್ದ ಅವಕಾಶ ಶೇ. 35ಕ್ಕೆ ಇಳಿದಿತ್ತು.

ಇದನ್ನೂ ಓದಿ : ಉತ್ತರ ಪ್ರದೇಶ| ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ: 100ಕ್ಕೂ ಅಧಿಕ ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...