Homeಮುಖಪುಟಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

- Advertisement -
- Advertisement -

ಬಿಹಾರದಲ್ಲಿ ಮುಂದಿನ ಎರಡು, ಮೂರು ತಿಂಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಬೀಳಲಿದೆ ಎಂಬ ಬಿಹಾರದ ಪ್ರತಿಪಕ್ಷ ನಾಯಕ ತೇಜಶ್ವಿ ಪ್ರಸಾದ್ ಯಾದವ್ ಅವರು ಮಾತನ್ನು ಆಡಳಿತಾರೂ ಮೈತ್ರಿ ಸರ್ಕಾರ ತಿರಸ್ಕರಿಸಿದೆ.

ಬದಲಾಗಿ ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತನ್ನ ಕ್ಷೇತ್ರದಿಂದ ಕಾಣೆಯಾಗಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಮೇಲೆ ಆಡಳಿತರೂಢ ಸರ್ಕಾರ ಮುಗಿಬಿದ್ದಿದೆ.

ತೇಜಸ್ವಿ ಯಾದವ್ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ರಾಘೋಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಂದಿನ ಎರಡು, ಮೂರು ತಿಂಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಬೀಳಲಿದೆ ಎಂದಿದ್ದರು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಸ್ವಕ್ಷೇತ್ರದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳದಿರುವುದಕ್ಕೆ ಪಪ್ಪು ಯಾದವ್ ನೇತೃತ್ವದ ಜನ ಅಧಿಕಾರ ಪಕ್ಷ (ಜೆಎಪಿ)ದ ಕಾರ್ಯಕರ್ತರು ಈ ಹಿಂದೆ ತೇಜಸ್ವಿ ಯಾದವ್‌ಗೆ ಕಪ್ಪು ಧ್ವಜಗಳನ್ನು ತೋರಿಸಿದ್ದರು.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ತೇಜಶ್ವಿ ಯಾದವ್ ಹೇಳಿಕೆಗೆ ಸಹಮತ ಸೂಚಿಸಿರು ಆರ್‌ಜೆಡಿಯ ಮಿತ್ರ ಕಾಂಗ್ರೆಸ್, “ಪ್ರತಿಪಕ್ಷ ನಾಯಕರ ಹೇಳಿಕೆ ತೂಕದ ಮಾತಾಗಿದೆ (ಒಪಪ್ಪುವಂತಹ ಮಾತು) ಎಂದಿದೆ. ಜೊತೆಗೆ ಎನ್‌ಡಿಎಯ ಹಲವು ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದು, ಅವರು ಸರ್ಕಾರದ ಕಾರ್ಯವೈಖರಿ ಬಗ್ಗೆ ಸಂತಸಹೊಂದಿಲ್ಲ ಎಂದು ಪಕ್ಷದ ಮುಖಂಡ ಕುಂತಲ್ ಕೃಷ್ಣ ಹೇಳಿದ್ದಾರೆ.

ಆದರೂ, ಆಡಳಿತಾರೂ ಜೆಡಿಯು ಆರ್‌ಜೆಡಿಯ ತೇಜಸ್ವಿ ಯಾದವ್ ಅವರ ಮಾತನ್ನು ತಳ್ಳಿಹಾಕಿದೆ. “ವಿಶ್ವದ ಯಾವುದೇ ಶಕ್ತಿಯು ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಅವರ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ. ತೇಜಶ್ವಿ ಯಾದವ್ ಕೆಲವು ಜೆಡಿಯು ಶಾಸಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅನೇಕ ಆರ್‌ಜೆಡಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಸಮಯದಲ್ಲಿ ನಾವು ಇದಕ್ಕಿಂತ ಹೆಚ್ಚಿನದು ಏನ್ನೂ ಹೇಳುವುದಿಲ್ಲ” ಎಂದು ಜೆಡಿಯು ಪರಿಷತ್ ಸದಸ್ಯ ಉಪೇಂದ್ರ ಕುಶ್ವಾಹ ಹೇಳಿದ್ದಾರೆ.

ಬಿಜೆಪಿ ನಾಯಕ ಮತ್ತು ಪಕ್ಷದ ವಕ್ತಾರ ಪ್ರೇಮ್ ರಂಜನ್ ಪಟೇಲ್, ತೇಜಶ್ವಿ ಯಾದವ್ ಮೊದಲು ತಮ್ಮ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಮಾಡಿಕೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. “ತೇಜಶ್ವಿ ಯಾದವ್‌ಗೆ ಬಿಹಾರದ ಜನರೊಂದಿಗೆ ಅಥವಾ ಅವನ ಸ್ವಂತ ಕ್ಷೇತ್ರದ ಜನರೊಂದಿಗೆ ಯಾವುದೇ ಸಂಬಂಧವಿಲ್ಲ. ಶಾಸಕರು ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ ಕೂಡ ಆ ಕ್ಷೇತ್ರದಲ್ಲಿ ಜನರು ಹಾಕಿದ್ದರು. ಜನರಿಗೆ ಅಗತ್ಯವಿದ್ದಾಗ, ಅವರು ಹೋಗಲಿಲ್ಲ. ಈಗ ಬಂದು ಎರಡು ಮೂರು ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಈ ಕನಸು ಕನಸಾಗಿ ಉಳಿಯುತ್ತದೆ ”ಎಂದು ಪ್ರೇಮ್ ರಂಜನ್ ಪಟೇಲ್ ಹೇಳಿದ್ದಾರೆ.


ಇದನ್ನೂ ಓದಿ: ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...