Homeಮುಖಪುಟಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ- ಮನೋಜ್ ಝಾ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟದ ಎನ್‌ಡಿಎ ಸ್ಪಷ್ಟ ಬಹುಮತಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರವನ್ನು ರಚಿಸಲು ಶಕ್ತವಾಗಿದೆ. ಇಂದು ಬಿಹಾರ ಮುಖ್ಯಮಂತ್ರಿ ಮತ್ತು ಇತರೆ ಅಂಶಗಳನ್ನು ನಿರ್ಧರಿಸಲು ಎನ್‌ಡಿಎ ಸಭೆ ಸೇರಿದೆ. ನಿತೀಶ್‌ ಕುಮಾರ್ ಅವರೇ ಮುಖ್ಯಮಂತ್ರಿ ಎಂಬುದನ್ನು ಬಿಜೆಪಿಯ ಉನ್ನತ ನಾಯಕರು ಸೇರಿದಂತೆ ಬಹುಪಾಲು ನಾಯಕರು ಖಚಿತಪಡಿಸಿದ್ದಾರೆ. ಆದರೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ನಡುವೆ ಆರ್‌ಜೆಡಿ ಮುಖಂಡರಾದ ಮನೋಜ್ ಝಾ ಮಾತನಾಡಿ, “ಕೇವಲ 40 ಸ್ಥಾನ ಪಡೆದ, ಜನಾದೇಶ ಇಲ್ಲದವರು ಹೇಗೆ ಮುಖ್ಯಮಂತ್ರಿ ಆಗಲು ಸಾಧ್ಯ” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಈ ಕುರಿತು ಮನೋಜ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಎಎನ್‌ಐ, “ಕೇವಲ 40 ಸೀಟುಗಳನ್ನು ಗೆದ್ದಿರುವವರು ಹೇಗೆ ಮುಖ್ಯಮಂತ್ರಿಯಾಗಲು ಸಾಧ್ಯ? ಜನಾದೇಶವು ಆತನ ವಿರುದ್ಧವಾಗಿದೆ. ಆತ ನಿರ್ಣಾಮವಾಗುತ್ತಾನೆ ಮತ್ತು ಅದನ್ನು ನಿರ್ಧರಿಸಬೇಕಿದೆ. ಬಿಹಾರವು ಸ್ವಯಂಪ್ರೇರಿತವಾಗಿ ತನ್ನ ಪರ್ಯಾಯವನ್ನು ಕಂಡುಕೊಳ್ಳುತ್ತದೆ. ಇದಕ್ಕೆ ಒಂದು ವಾರ ತೆಗೆದುಕೊಳ್ಳಬಹುದು, ಹತ್ತು ದಿನ ಅಥವಾ 1 ತಿಂಗಳು ತೆಗೆದುಕೊಳ್ಳಬಹುದು. ಆದರೆ ಇದು ಖಂಡಿತ ಸಂಭವಿಸುತ್ತದೆ” ಎಂದು ಹೇಳಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಪಕ್ಷವು ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 75 ಸ್ಥಾನಗಳನ್ನು ಗೆದ್ದುಕೊಂಡಿದೆ. ನಂತರದ ಸ್ಥಾನದಲ್ಲಿ ಬಿಜೆಪಿಯು 74 ಸ್ಥಾನಗಳನ್ನು ಗೆದ್ದುಕೊಂಡಿದೆ. ನಿತೀಶ್‌ ಕುಮಾರ್ ನೇತೃತ್ವದ ಜೆಡಿಯು ಪಕ್ಷವು ಕೇವಲ 43 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಎನ್‌ಡಿಎ ಮೈತ್ರಿ ಪಕ್ಷವು 125 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಬಹುಮತದ ಅಂಚಿಗೆ ಬಂದು ಕೆಳಗಿಳಿದಿತ್ತು. ಇದರ ನಡುವೆ ಬಿಹಾರದಲ್ಲಿ ಎಡ ಪಕ್ಷಗಳಾದ ಸಿಪಿಐ (ಎಂ-ಎಲ್) ಬಹುತೇಕ ಮುಂಚೂಣಿಯ ಪಕ್ಷಗಳಾಗಿ ಹೊರಹೊಮ್ಮಿವೆ. ಇನ್ನು ಓವೈಸಿ ನೇತೃತ್ವದ ಪಕ್ಷವು ಸುಮಾರು 5 ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ಎಡಪಕ್ಷಗಳ ಗೆಲುವು: ಒಂದು ವಿಶ್ಲೇಷಣೆ

ಈ ನಡುವೆ ತೇಜಸ್ವಿ ಯಾದವ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮತ ಮರು ಎಣಿಕೆಗೆ ಒತ್ತಾಯಿಸಿ ಅಭಿಯಾನವನ್ನು ಆರಂಭಿಸಿದ್ದಾರೆ. ಮತ್ತೊಂದು ಕಡೆ ಈ ಬಾರಿ ನಿತೀಶ್‌ ಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಈ ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬೀಳಲಿದ್ದು, ಎನ್‌ಡಿಎ ತನ್ನ ನಿರ್ಧಾರವನ್ನು ಇನ್ನೇನು ಪ್ರಕಟಿಸಲಿದೆ.


ಇದನ್ನೂ ಓದಿ: ಬಿಹಾರ: ’ಧನ್ಯವಾದ ಯಾತ್ರೆ’ ಕೈಗೊಳ್ಳಲಿರುವ ಎಲ್‌ಜೆಪಿಯ ಚಿರಾಗ್ ಪಾಸ್ವಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...