ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ಮಾಡಿದ್ದಾರೆ. ಆಕೆ ತನ್ನ ಇಚ್ಛೆಯಂತೆ ಮದುವೆಯಾಗಿರುವುದಾಗಿ ಸ್ಥಳೀಯ ನ್ಯಾಯಾಲಯದಲ್ಲಿ ಒಪ್ಪಿಕೊಂಡ ನಂತರ ಈ ಸಾಂಕೇತಿಕ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಲಾಗಿದೆ. ಪೂರ್ಣಿಯಾದ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಚಪಾಯ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಪ್ರಥಮ ವರ್ಷದ ಕಾಲೇಜು … Continue reading ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು