Homeಕರ್ನಾಟಕUnion Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ?...

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮಂಡಿಸಿದ ಕೇಂದ್ರ ಬಜೆಟ್‌ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೂಡಾ, ಕೇಂದ್ರ ಬಜೆಟ್‌ನ ಈ ದಿನ ಕರ್ನಾಟಕಕ್ಕೆ ಕರಾಳ ದಿನ ಎಂದು ಬಣ್ಣಿಸಿದ್ದಾರೆ. Union Budget 2025

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಖಂಡ್ರೆ ಅವರು, “ಬಜೆಟ್‌ನಲ್ಲಿ ಎಂ.ಎಸ್.ಪಿ. (ಕನಿಷ್ಠ ಬೆಂಬಲ ಬೆಲೆ) ಕಾಯ್ದೆ ಕುರಿತು ಯಾವುದೇ ಘೋಷಣೆ ಮಾಡದಿರುವುದು ಅನ್ನದಾತರ ಮೇಲೆ ದೊಡ್ಡ ಅನ್ಯಾಯವಾಗಿದೆ. ರೈತರು ಬೆಳೆದ ಬೆಳೆಗೆ ಖಚಿತ ಬೆಲೆ ನಿರ್ಧಾರವಾಗಬೇಕೆಂಬ ಬಹುದಿನದ ಬೇಡಿಕೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಪ್ರಕೃತಿ ವಿಕೋಪದ ಹೊಡೆತದಿಂದ ತತ್ತರಿಸಿರುವ ರೈತರ ಸಾಲ ಮನ್ನಾ ಕುರಿತು ಯಾವುದೇ ಘೋಷಣೆ ಇಲ್ಲ ಎಂಬುದು ವಿಷಾದನೀಯ” ಎಂದು ಹೇಳಿದ್ದಾರೆ. Union Budget 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಅಸಡ್ಡೆ ತೋರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕದ 7 ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ₹5000 ಕೋಟಿ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಆದರೆ, ಇದನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಈ ಪ್ರದೇಶದ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟಿಲ್ಲ ಎಂಬುದು ದೌರ್ಭಾಗ್ಯಕರ” ಎಂದು ಅವರು ಹೇಳಿದ್ದಾರೆ.

“ಎನ್.ಡಿ.ಎ. ಆಡಳಿತದ 11 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಸಾಕಷ್ಟು ಉಲ್ಭಣಿಸಿದೆ. ಈ ಬಜೆಟ್‌ನಲ್ಲಿ ಯುವಕರ ಕೈಗೆ ಉದ್ಯೋಗ ನೀಡುವ ಯಾವುದೇ ಗಂಭೀರ ಯೋಜನೆ ರೂಪಿಸದಿರುವುದು ಖಂಡನಾರ್ಹ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ, ಬಿಜೆಪಿ ನೇತೃತ್ವದ ಸರ್ಕಾರ ಎನ್.ಡಿ.ಎ.ಯೇತರ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿರುವುದು ಅಕ್ಷಮ್ಯ. ರಾಜ್ಯಗಳ ನಡುವೆ ರಾಜಕೀಯ ವ್ಯತ್ಯಾಸಗಳನ್ನು ಮೆಟ್ಟಿಲು ಮಾಡಿಕೊಳ್ಳುವ ನೀತಿ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ಬೇರೇ ಕಡೆ ಗಂಭೀರ ಯೋಜನೆಗಳನ್ನು ಘೋಷಿಸಿ, ಕರ್ನಾಟಕದ ಭಾಗ್ಯ ತಿರಸ್ಕರಿಸಿರುವುದು ಅಕ್ಷಮ್ಯ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದೆ? – ಸಚಿವ ಕೃಷ್ಣಬೈರೇಗೌಡ

ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರತಿಕ್ರಿಯಿಸಿ, “ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ಕರ್ನಾಟಕದ ಯಾವ ಬೇಡಿಕೆಯೂ ಈಡೇರಿಲ್ಲ. ಕರ್ನಾಟಕಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ರಾಜ್ಯದ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ” ಎಂದು ಹೇಳಿದ್ದಾರೆ.

“ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಹಾಗಾದರೆ, ಕರ್ನಾಟಕದ ನಾವು ಕಡ್ಲೆ ಬೀಜ ತಿನ್ನೋಕೆ ಇರುವುದೆ? ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು ಸಿಕ್ಕಿದೆ. ಇದು ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹ. 11,495 ಕೋಟಿ ಫೈನಾನ್ಸ್ ಕಮೀಷನ್ ಕೊಡಲು ಹೇಳಿತ್ತು. ಬರಲೇ ಬೇಕಾದ ಅನುದಾನ ದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ಪೈಸಾ ಕೂಡ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ್ಕೆ ಏನೂ ನೀಡಿಲ್ಲ.” ಎಂದು ಹೇಳಿದ್ದಾರೆ.

“ಬೆಂಗಳೂರು ದೇಶಕ್ಕೆ ಉದ್ಯೋಗ ಕೊಡುತ್ತಿದೆ. ರಪ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ಕೊಡುತ್ತಿದೆ. ಆದರೂ ಬಜೆಟ್‌ನಲ್ಲಿ ಏನು ಕೊಟ್ಟಿಲ್ಲ. ಯುಪಿ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ, ಕರ್ನಾಟಕ ಕಾಣುತ್ತಿಲ್ಲ. ತೆರಿಗೆ ಕಟ್ಟಿದ ಕನ್ನಡಿಗರು ಕಾಣುತ್ತಿಲ್ಲ. ನಮ್ಮ ರಾಜ್ಯ ಕೇವಲ ದುಡಿಯವ ಆಳಿನ ರೀತಿ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಹಾಗೇ ಸರ್ಕಾರದ ಪರವಾಗಿ ಇದನ್ನ ನಾನು ಖಂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ಗುಜರಾತ್ ಗಲಭೆ ಸಂತ್ರಸ್ತೆ, ಹೋರಾಟಗಾರ್ತಿ ಝಕಿಯಾ ಜಾಫ್ರಿ (86) ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...