Homeಮುಖಪುಟಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭೆಯಲ್ಲಿ ಸೋಮವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 130-0 ಅಂತರದಲ್ಲಿ ಗೆದ್ದಿದ್ದಾರೆ. ಈ ವೇಳೆ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದನ ಬಹಿಷ್ಕರಿಸಿದರು.

ಜೆಡಿಯು, ಆರ್‌ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟವಾದ ಮಹಾಘಟಬಂಧನ್ ತೊರೆದು, ಎನ್‌ಡಿಎ ಒಕ್ಕೂಟಕ್ಕೆ ನಿತೀಶ್ ಜಿಗಿದ ಎರಡು ವಾರಗಳ ನಂತರ ವಿಶ್ವಾಸ ಮತ ಪರೀಕ್ಷೆ ಇಂದು ನಡೆಯಿತು. ಇದೇ ಅಧಿವೇಶನದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಮೂವರು ಶಾಸಕರಾದ ಪ್ರಹ್ಲಾದ್ ಯಾದವ್, ನೀಲಂ ದೇವಿ ಮತ್ತು ಚೇತನ್ ಆನಂದ್ ಎನ್‌ಡಿಎ ಒಕ್ಕೂಟಕ್ಕೆ ಬೆಂಬಲಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ‘ಕಳೆದ 15 ವರ್ಷಗಳಿಂದ ಲಾಲು ಪ್ರಸಾದ್-ರಾಬ್ರಿ ದೇವಿ ಸರ್ಕಾರಗಳು ಬಿಹಾರದ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ’ ಎಂದು ಆರೋಪಿಸಿದರು.

ಮತದಾನದ ಮೊದಲು ಸ್ಪೀಕರ್ ಅವಧ್ ಬಿಹಾರಿ ಚೌಧರಿ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಸಭೆಯು ಅಂಗೀಕರಿಸಿತು. ಉಚ್ಛಾಟನೆಯ ಪರವಾಗಿ 125 ಸದಸ್ಯರು ಮತ ಚಲಾಯಿಸಿದರು. ವಿಶ್ವಾಸಮತಕ್ಕೂ ಮುನ್ನ, ‘ಆಪರೇಷನ್’ ಕಳವಳದ ನಡುವೆ ಕಾಂಗ್ರೆಸ್ ಕಳೆದ ವಾರವೆ ತನ್ನ ಶಾಸಕರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಿತ್ತು. ಆದರೆ, ಆರ್‌ಜೆಡಿಯ ಶಾಸಕರು ತೇಜಸ್ವಿ ಯಾದವ್ ಅವರ ಮನೆಯಲ್ಲಿ ಒಟ್ಟಿಗೆ ಇರಲು ನಿರ್ಧರಿಸಿದ್ದರು. ಬಿಜೆಪಿ ನಾಯಕ ನಿತ್ಯಾನಂದ ರೈ ಕೇಸರಿ ಪಕ್ಷದ ಎಲ್ಲಾ 78 ಶಾಸಕರನ್ನು ನಿರ್ವಹಿಸಿದರು. ಅವರೆಲ್ಲರೂ ಪಾಟ್ನಾದ ಹೋಟೆಲ್‌ನಲ್ಲಿ ಇದ್ದರು. ನಿತೀಶ್ ಕುಮಾರ್ ಅವರ ಜೆಡಿಯು ತನ್ನ 40 ಶಾಸಕರನ್ನು ರಾಜ್ಯ ರಾಜಧಾನಿಯ ಮತ್ತೊಂದು ಹೋಟೆಲ್‌ನಲ್ಲಿ ತಂಗುವಂತೆ ಮಾಡಿತ್ತು.

ವಿಶ್ವಾಸ ಮತಕ್ಕೆ ನಿಮಿಷಗಳ ಮೊದಲು, ಆರ್‌ಜೆಡಿ ನೇತೃತ್ವದ ಪ್ರತಿಪಕ್ಷಗಳು ಸದನದಿಂದ ಹೊರನಡೆದವು. ಜನತಾ ದಳ (ಯುನೈಟೆಡ್) ಮುಖ್ಯಸ್ಥರು ತೇಜಸ್ವಿ ಯಾದವ್ ಅವರ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು.

ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ, ನಿತೀಶ್‌ ಕುಮಾರ್ ಮೊದಲು ಧ್ವನಿ ಮತದ ಮೂಲಕ ಬಹುಮತವನ್ನು ಸಾಬೀತುಪಡಿಸಿದರು. ನಂತರ, ಅವರು ಕೈಯಿಂದ ಮತದಾನಕ್ಕೆ ಒತ್ತಾಯಿಸಿದರು. ಅವರು ವಿಶ್ವಾಸ ಮತವನ್ನು ಗೆದ್ದರು, ಅವರ ಸರ್ಕಾರದ ಪರವಾಗಿ 129 ಮತಗಳನ್ನು ಪಡೆದರು.

ಕಳೆದ ತಿಂಗಳು ಮಿತ್ರಪಕ್ಷ ಆರ್‌ಜೆಡಿಯನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ಪೋಷಕರಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಅವರ ಮೇಲೆ ವಾಗ್ದಾಳಿ ನಡೆಸಿದರು. ‘ಇದಕ್ಕಿಂತ ಮೊದಲು, ಅವರ ತಂದೆ ಮತ್ತು ತಾಯಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು, ಆಗ ಬಿಹಾರದಲ್ಲಿ ಏನಾಯಿತು? ಆ ಸಮಯದಲ್ಲಿ ಯಾರಾದರೂ ರಾತ್ರಿಯಲ್ಲಿ ಹೊರಗೆ ಹೋಗಲು ಧೈರ್ಯ ಮಾಡುತ್ತಾರೆಯೇ? ಯಾವುದೇ ರಸ್ತೆ ಇದೆಯೇ?’ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...