ಮದ್ಯ ನಿಷೇಧ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಬಿಡುಗಡೆ ಮಾಡಲು ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಶುಕ್ರವಾರ ಪೊಲೀಸ್ ಠಾಣೆ ಮೇಲೆ ಗುಂಪೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಬಿಹಾರ
ಬಿಹಾರ ನಿಷೇಧ ಮತ್ತು ಅಬಕಾರಿ ಕಾಯ್ದೆಯಡಿಯಲ್ಲಿ ಏಪ್ರಿಲ್ 2016 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ.
“ನಿಷೇಧ ಕಾನೂನು ಉಲ್ಲಂಘನೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿ ದಂಡ್ಖೋರಾ ಪೊಲೀಸ್ ಠಾಣೆಯ ಮೇಲೆ ಗುಂಪು ದಾಳಿ ನಡೆಸಿದೆ” ಎಂದು ಕತಿಹಾರ್ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.
ಗುಂಪು ಪೊಲೀಸ್ ಠಾಣೆಯ ಆವರಣಕ್ಕೆ ನುಗ್ಗಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿತು ಎಂದು ಶರ್ಮಾ ಅವರು ಹೇಳಿದ್ದಾರೆ.
ಘಟನೆಯಲ್ಲಿ ಐದು ಪೊಲೀಸರು ಗಾಯಗೊಂಡಿದ್ದಾರೆ ಎಂದು ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ ಎಂದು ಪಿಟಿಐ ಉಲ್ಲೇಖಿಸಿದ್ದಾರೆ. ಗುಂಪನ್ನು ಚದುರಿಸಲು ಮತ್ತು ಆತ್ಮರಕ್ಷಣೆಗಾಗಿ ಪೊಲೀಸ್ ಅಧಿಕಾರಿಗಳು ಗುಂಡು ಹಾರಿಸಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.
“ಉದ್ರಿಕ್ತ ಜನಸಮೂಹವು ಬಂಧಿತ ವ್ಯಕ್ತಿಯನ್ನು ಪೊಲೀಸ್ ಲಾಕಪ್‌ನಿಂದ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದು, ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬಿಹಾರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ
ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ