Homeಮುಖಪುಟಬಿಹಾರ: ಲಾಲು ಪ್ರಸಾದ್‌ ಯಾದವ್‌ ನೇತೃತ್ವದ RJDಯೊಂದಿಗೆ ವಿಲೀನಗೊಂಡ LJD

ಬಿಹಾರ: ಲಾಲು ಪ್ರಸಾದ್‌ ಯಾದವ್‌ ನೇತೃತ್ವದ RJDಯೊಂದಿಗೆ ವಿಲೀನಗೊಂಡ LJD

ಲಾಲು ಪ್ರಸಾದ್ ಯಾದವ್‌ ಮತ್ತು ಶರದ್‌ ಯಾದವ್‌ 25 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಅವರು ಭಾನುವಾರ ತಮ್ಮ ಲೋಕತಾಂತ್ರಿಕ ಜನತಾ ದಳವನ್ನು (ಎಲ್‌ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳದೊಂದಿಗೆ (ಆರ್‌ಜೆಡಿ) ವಿಲೀನಗೊಳಿಸಿದ್ದಾರೆ. ಉಭಯ ಪಕ್ಷಗಳ ವಿಲೀನವನ್ನು ಘೋಷಿಸಿದ ನಂತರ, ಶರದ್ ಯಾದವ್ ಈ ಕ್ರಮವು ‘ಸಂಯುಕ್ತ ವಿರೋಧ ಪಕ್ಷದ ರಚನೆಯ ಕಡೆಗಿನ ಮೊದಲ ಹೆಜ್ಜೆ’ ಎಂದು ಹೇಳಿದ್ದಾರೆ.

“ಆರ್‌ಜೆಡಿಯೊಂದಿಗೆ ನಮ್ಮ ಪಕ್ಷವನ್ನು ವಿಲೀನಗೊಳಿಸುವುದು ಪ್ರತಿಪಕ್ಷಗಳ ಒಗ್ಗಟ್ಟಿನ ಮೊದಲ ಹೆಜ್ಜೆಯಾಗಿದೆ. ಬಿಜೆಪಿಯನ್ನು ಸೋಲಿಸಲು ಇಡೀ ಪ್ರತಿಪಕ್ಷಗಳು ಭಾರತದಾದ್ಯಂತ ಒಗ್ಗೂಡುವುದು ಅತ್ಯಗತ್ಯ. ಸದ್ಯಕ್ಕೆ, ಏಕೀಕರಣವು ನಮ್ಮ ಆದ್ಯತೆಯಾಗಿದ್ದು, ಅದನ್ನು ಮೊದಲು ಮಾಡುತ್ತೇವೆ. ಅದರ ನಂತರ ಒಗ್ಗಟ್ಟಿನ ಪ್ರತಿಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದರ ಕುರಿತು ಯೋಚಿಸಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಚಂಪಾರಣ್ಯ ಸತ್ಯಾಗ್ರಹ ಸ್ಥಳದಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ 

ಈ ಮಧ್ಯೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಎಲ್‌ಜೆಡಿಯನ್ನು ತಮ್ಮ ಪಕ್ಷದೊಂದಿಗೆ ವಿಲೀನಗೊಳಿಸುವ ಕ್ರಮವನ್ನು ಸ್ವಾಗತಿಸಿದ್ದಾರೆ. ದೇಶದ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಲ್ಲುವಂತೆ ಒತ್ತಾಯಿಸಿದ ಅವರು, “ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಏಕೀಕರಣಕ್ಕೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ” ಎಂದು ಹೇಳಿದ್ದಾರೆ.

ಎರಡೂ ಪಕ್ಷಗಳು ತೆಗೆದುಕೊಂಡ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ, “ಎಲ್‌ಜೆಡಿಯನ್ನು ಆರ್‌ಜೆಡಿಗೆ ವಿಲೀನಗೊಳಿಸುವ ಬಗ್ಗೆ ಶರದ್ ಯಾದವ್ ಅವರು ತೆಗೆದುಕೊಂಡ ನಿರ್ಧಾರ ಜನರ ಬೇಡಿಕೆಯಾಗಿದೆ. ಇದು ಇತರ ವಿರೋಧ ಪಕ್ಷಗಳಿಗೆ ನಮಗೆ ಉತ್ತಮ ಸಮಯ ಎಂಬ ಸಂದೇಶವನ್ನು ನೀಡಿದೆ. 2019 ರಲ್ಲಿ ಒಂದುಗೂಡಬೇಕಿತ್ತು, ಆದರೂ ಇದು ಸರಿಯಾದ ಸಮಯ” ಎಂದು ಅವರು ಹೇಳಿದ್ದಾರೆ.

ಶರದ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಗೆ ಏಕೀಕೃತ ವಿರೋಧ ಪಕ್ಷವನ್ನು ಕಟ್ಟಲು ಎಲ್ಲಾ ಹಿಂದಿನ ಜನತಾ ದಳದ ಬಣಗಳು ಮತ್ತು ಇದೇ ರೀತಿಯ ಸಿದ್ಧಾಂತಗಳನ್ನು ಹೊಂದಿರುವ ಇತರ ಪಕ್ಷಗಳನ್ನು ಮತ್ತೆ ಒಗ್ಗೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಹಾರ: ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಕೈಗಳನ್ನು ಕಟ್ಟಿ ಬಂಧಿಸಿದ ಪೊಲೀಸರು

ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು 2018 ರಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿದ ನಂತರ ಅದರಿಂದ ಹೊರ ಬಂದ ಶರದ್ ಯಾದವ್ ಅವರು LJD ಅನ್ನು ರಚಿಸಿದ್ದರು. LJD ತನ್ನ ಆರಂಭದಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಅದರ ಮುಖ್ಯಸ್ಥ ಆಗಿದ್ದ ಶರದ್ ಯಾದವ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಮಾಧೇಪುರದಿಂದ ತೇಜಸ್ವಿ ಯಾದವ್‌ ನೇತೃತ್ವದ RJD ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.

ಒಕ್ಕೂಟ ಸರ್ಕಾರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಇದ್ದಾಗ ಶರದ್ ಯಾದವ್ ಕ್ಯಾಬಿನೆಟ್ ಸಚಿವರಾಗಿದ್ದರು.

ಲಾಲು ಪ್ರಸಾದ್ ಯಾದವ್‌ ಮತ್ತು ಶರದ್‌ ಯಾದವ್‌ 25 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. 1997 ರಲ್ಲಿ ಲಾಲು ಪ್ರಸಾದ್ ಯಾದವ್ ಆರ್‌ಜೆಡಿ ಸ್ಥಾಪಿಸಿದಾಗ, ಶರದ್ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ಪ್ರಾರಂಭಿಸಿ ಬೇರೆಯಾಗಿದ್ದರು.

ನಂತರ ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಶಿಕ್ಷೆಗೊಳಗಾದರು. ಅವರು 1990 ರ ದಶಕದಲ್ಲಿ ಬಿಹಾರ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಲು ಬೇಕಾಗಿ ‘ಮಂಡಲ್ ಕಮೀಷನ್‌’ ಜಾರಿಗೆ ಹೋರಾಟ ನಡೆಸಿದ್ದರು. ಜೊತೆಗೆ ರಾಷ್ಟ್ರೀಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್‌ಜೆಡಿ-ಆರ್‌ಜೆಡಿ ವಿಲೀನದಿಂದಾಗಿ ಜೂನ್‌ನಲ್ಲಿ ನಡೆಯಲಿರುವ, ಮೇಲ್ಮನೆಗೆ ನಡೆಯುವ ಚುನಾವಣೆಯಲ್ಲಿ ಆರ್‌ಜೆಡಿ ಶರದ್ ಯಾದವ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...