Homeಮುಖಪುಟಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

- Advertisement -
- Advertisement -

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ ‘ಪತ್ನಿ’ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.

ಉದ್ರಿಕ್ತರು, ಅಧಿಕಾರಿಗಳ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ, ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ ನಂತರ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರು ಗ್ರಾಮಸ್ಥರು ಗಾಯಗೊಂಡಿದ್ದಾರೆ.

ಯುವಕನೋರ್ವ ತನ್ನ ಪತ್ನಿಯ ನಿಧನದ ಹಿನ್ನೆಲೆ ಎರಡು ದಿನಗಳ ಹಿಂದೆ 14 ವರ್ಷದ ಅತ್ತಿಗೆಯನ್ನು ಮದುವೆಯಾಗಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಆತ ತನ್ನ ಹೆಂಡತಿಯಂತೆ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದಾನೆ ಎಂದು ತಿಳಿದ ನಂತರ ಗುರುವಾರ ಮಧ್ಯಾಹ್ನ ಪೊಲೀಸರು ಆತನನ್ನು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ವಿಚಾರಣೆಗಾಗಿ ಕರೆತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಗುರುವಾರ ಸಂಜೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಿತ ಗ್ರಾಮಸ್ಥರು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಿದ್ದು, ಪೊಲೀಸರು ಥಳಿಸಿದ ನಂತರ ಇಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ.  ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದ ಪೋಲಿಸರು ಬಳಿಕ ಗಾಳಿಯಲ್ಲಿ ಗುಂಡುಗಳನ್ನು ಹಾರಿಸಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಿಂದ ಅರಾರಿಯಾ ಎಎಸ್‌ಪಿ ಸೇರಿದಂತೆ 6 ಪೋಲಿಸರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಪೊಲೀಸ್‌ ಠಾಣೆಯೊಳಗಿನ ಸಿಸಿಟಿವಿ ವೀಡಿಯೋ, ಜೈಲಿನ ಸೆಲ್‌ನ ಒಳಗಿನಿಂದ ಯುವಕ ಬಟ್ಟೆಯನ್ನು ಬಳಸಿ ನೇಣು ಬಿಗಿದುಕೊಂಡಿರುವುದನ್ನು ತೋರಿಸಿದೆ. ಸ್ಥಳಕ್ಕೆ ವಿವಿಧ ಠಾಣೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅವ್ಯವಸ್ಥೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ 17 ಜನರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಇತರರನ್ನು ಗುರುತಿಸಲಾಗುತ್ತಿದೆ ಎಂದು ಎಸ್‌ಪಿ ಅಮಿತ್ ರಂಜನ್ ತಿಳಿಸಿದ್ದಾರೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...