Homeಮುಖಪುಟ9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದ ವ್ಯಕ್ತಿಗೆ ಮರಣದಂಡನೆ

ಆರೋಪಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರು ಮತ್ತು ಇಬ್ಬರು ಕಾರ್ಮಿಕರನ್ನು ಕೊಲೆ ಮಾಡಿದ್ದರು.

- Advertisement -
- Advertisement -

ಗೋರೆಕುಂಟಾ ಗ್ರಾಮದಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಕ್ಕೆ ಸೇರಿದ ಒಂಬತ್ತು ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ನ್ಯಾಯಾಲಯ ಅಪರಾಧಿಗೆ ಮರಣದಂಡನೆ ವಿಧಿಸಿದೆ. ಬಿಹಾರದ ಬೆಗುಸರಾಯ್ ಜಿಲ್ಲೆಯ ನೂರ್ಪುರ್ ಗ್ರಾಮದ ಸಂಜಯ್ ಕುಮಾರ್ ಯಾದವ್ ಎಂಬ 24 ವರ್ಷದ ಯುವಕ ಮೇ 21 ರಂದು ವಾರಂಗಲ್ ಗ್ರಾಮೀಣ ಜಿಲ್ಲೆಯ ಗೀಸುಗೊಂಡ ಮಂಡಲದಲ್ಲಿ 9 ಮಂದಿ ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದರು.

ವಾರಂಗಲ್ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ.ಜಯಕುಮಾರ್ ಅಪರಾಧಿ ಸಂಜಯ್ ಕುಮಾರ್ ಯಾದವ್‌ರನ್ನು ಗಲ್ಲಿಗೇರಿಸಬೇಕು ಎಂದು ತೀರ್ಪು ನೀಡಿದ್ದಾರೆ. ಗೋರೆಕುಂಟಾದ ಗೋಣಿ ಚೀಲ ಉತ್ಪಾದನಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ 56 ವರ್ಷದ ಮಸೂದ್ ಆಲಂ ಅವರ ಇಡೀ ಕುಟುಂಬವನ್ನು ಯಾದವ್ ಕೊಂದಿದ್ದ.

ಯಾದವ್ ಈ ಹಿಂದೆ ಆಂಧ್ರಪ್ರದೇಶದಲ್ಲಿ ಆಲಂ ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದರು. ನಂತರ ಆಕೆಯ ಹತ್ಯೆಯನ್ನು ಮುಚ್ಚಿಹಾಕಲು ಆಲಂ ಮತ್ತು ಅವನ ಕುಟುಂಬದ ಇತರ ಐದು ಸದಸ್ಯರನ್ನು ಕೊಲೆ ಮಾಡಿದ್ದಾರೆ.

ಮೃತ ಆಲಂ ಅವರ ಹೆಂಡತಿ, ಮಗಳು, ಇಬ್ಬರು ಗಂಡು ಮತ್ತು ಮೊಮ್ಮಗಳ ಜೊತೆಗೆ ಕುಟುಂಬಕ್ಕೆ ಸಂಬಂಧವಿಲ್ಲದ ಬಿಹಾರ ಮತ್ತು ಒಬ್ಬರು ತ್ರಿಪುರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಲೆ ಮಾಡಿದ್ದನು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಅಪರಾಧಿ ಯಾದವ್ ಗೋಣಿ ಚೀಲಗಳ ಉತ್ಪಾದನಾ ಘಟಕದಲ್ಲಿ ನಡೆಯುತ್ತಿದ್ದ ಆಲಂ ಅವರ ಹುಟ್ಟುಹಬ್ಬದ ಸಂತೋಷಕೂಟದಲ್ಲಿ ಪಾಲ್ಗೊಂಡಿದ್ದರು. ಆತ ಊಟದಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿ, ಎಲ್ಲರೂ ಪ್ರಜ್ಞೆ ತಪ್ಪಿದ ಬಳಿಕ ಒಬ್ಬೊಬ್ಬರನ್ನೇ ಬಾವಿಗೆ ಎಸೆದಿದ್ದರು. ಇದರಲ್ಲಿ ಆಲಂ ಕುಟುಂಬದ ಜೊತೆಗೆ ಇಬ್ಬರು ಕಾರ್ಮಿಕರು ಇದ್ದರು.

ಪೊಲೀಸರು ಜುಲೈ 28 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರೆ, ನ್ಯಾಯಾಂಗ ಅಧಿಕಾರಿಗಳು ಸೆಪ್ಟೆಂಬರ್ 21 ರಂದು ವಿಚಾರಣೆಯನ್ನು ಪ್ರಾರಂಭಿಸಿದರು. 48 ದಿನಗಳಲ್ಲಿ ಪ್ರಕರಣವನ್ನು ತಾರ್ಕಿಕ ತೀರ್ಮಾನಕ್ಕೆ ತರಲಾಯಿತು. ಪೊಲೀಸರು ಸೆಕ್ಷನ್ ಐಪಿಸಿ 449, 328, 380, 404, 302 ಮತ್ತು 366 ಸಿಆರ್‌ಪಿಸಿ ಮತ್ತು 425 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಅಂತಿಮ ತೀರ್ಪಿಗಾಗಿ ನ್ಯಾಯಾಲಯದ ಆವರಣದಲ್ಲಿ ಹಲವಾರು ಮಂದಿ ಜಮಾಯಿಸಿದ್ದರು.   ನ್ಯಾಯಾಲಯವು ಮರಣದಂಡನೆ ವಿಧಿಸಿದ ವಿಷಯ ತಿಳಿದು ಹರ್ಷ ವ್ಯಕ್ತಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಗಲ್ ಪೊಲೀಸರ ಶ್ರಮ ನಿಜಕ್ಕೂ ಪ್ರಶಂಸನೀಯ. ಪೊಲೀಸರು 67ಕ್ಕೂ ಹೆಚ್ಚು ಸಾಕ್ಷಿಗಳನ್ನು ಒಟ್ಟುಗೂಡಿಸಿದರು. ಎಲ್ಲಾ ಸಾಕ್ಷಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸಿದ್ದರು.  ಮರಣೋತ್ತರ ಪರೀಕ್ಷೆ ವರದಿಗಳು ಮತ್ತು ವಿಧಿವಿಜ್ಞಾನ ವರದಿಗಳು ಮತ್ತು ವೈಜ್ಞಾನಿಕ ಪುರಾವೆಗಳು ಯಾವುದನ್ನು ಪೊಲೀಸರು ಬಿಟ್ಟಿರಲಿಲ್ಲ. ಇದರಿಂದಾಗಿ ಅಪರಾಧಿ ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆ ಸಾಧ್ಯವಾಗಿದೆ.


ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...