Homeಮುಖಪುಟಬಿಹಾರ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, 11 ಮಂದಿ ಕಾರ್ಮಿಕರ ಸಾವು

ಬಿಹಾರ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ, 11 ಮಂದಿ ಕಾರ್ಮಿಕರ ಸಾವು

- Advertisement -
- Advertisement -

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬೇಲಾ ಕೈಗಾರಿಕಾ ಪ್ರದೇಶದಲ್ಲಿರುವ ನೂಡಲ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡಿದ್ದು, ದುರಂತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ಸುಮಾರು 25 ಮಂದಿ ಇದ್ದರು ಎನ್ನಲಾಗಿದೆ.

ಗಾಯಾಳುಗಳನ್ನು ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಸ್ಫೋಟದ ತೀವ್ರತೆ ಎರಡು ಕಿಲೋಮೀಟರ್‌ಗಳ ವರೆಗೂ ತಲುಪಿತ್ತು ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲಾಗುತ್ತಿದೆ.

ಕೈಗಾರಿಕಾ ಘಟಕದಲ್ಲಿ ಕೆಲವು ಕಾರ್ಮಿಕರು ನೂಡಲ್ಸ್ ತಯಾರಿಕೆಯಲ್ಲಿ ತೊಡಗಿದ್ದಾಗ ಬೆಳಗ್ಗೆ 9.45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಫೋಟದ ಸದ್ದು ಕೇಳಿ ಸಮೀಪದ ಕೈಗಾರಿಕಾ ಘಟಕಗಳ ಜನರು ಸ್ಥಳಕ್ಕೆ ಧಾವಿಸಿದಾಗ ಕನಿಷ್ಠ 15 ಜನರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಇದನ್ನೂ ಓದಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

“ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆ ಮತ್ತು SKMCH ಗೆ ದಾಖಲಿಸಲಾಗಿದೆ. ಬಾಯ್ಲರ್ ಸ್ಫೋಟದಿಂದ ಸಮೀಪದ ಕೈಗಾರಿಕಾ ಘಟಕಗಳ ಇತರ ಕೆಲವು ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಆದರೆ ಪ್ರಾಥಮಿಕವಾಗಿ ಬಾಯ್ಲರ್ ಸ್ಫೋಟವೇ ಘಟನೆಯ ಹಿಂದಿನ ಕಾರಣ ಎಂದು ಹೇಳಲಾಗಿದೆ” ಎಂದು ಹೇಳಿದ್ದಾರೆ.

ಹಿರಿಯ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮುಜಾಫರ್‌ಪುರ ಎಸ್‌ಎಸ್‌ಪಿ ಜಯಂತ್ ಕಾಂತ್ ಅವರು ಮುಂಜಾಗ್ರತಾ ಕ್ರಮವಾಗಿ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಜನರನ್ನು ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಶಾಸಕ ವಿಜೇಂದ್ರ ಚೌಧರಿ, ಮೇಯರ್ ರಾಕೇಶ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬಾಯ್ಲರ್ ಸ್ಫೋಟದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳಿಗೆ ಹಾನಿಯಾಗಿದೆ ಎಂದು ಸ್ಥಳದಲ್ಲಿದ್ದವರು ಹೇಳಿದ್ದಾರೆ. ಸ್ಫೋಟದಿಂದ ಸಮೀಪದ ಅಕ್ಕಿ ತಯಾರಿಕಾ ಘಟಕದ ಮೂವರು ಕಾರ್ಮಿಕರೂ ಗಾಯಗೊಂಡಿದ್ದಾರೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...