Homeಮುಖಪುಟಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಬಿಹಾರ: ನಿತೀಶ್ ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು- ಚಿರಾಗ್ ಪಾಸ್ವಾನ್!

ಎಲ್ಲ ಪಕ್ಷಗಳಂತೆ ನಾನೂ ಸಾಧ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಬಯಸಬಹುದಿತ್ತು. ಆದರೆ ಬಿಜೆಪಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುವಂತೆ ಮಾಡುವುದು ನನ್ನ ಚುನಾವಣಾ ಉದ್ದೇಶವಾಗಿತ್ತು

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿಯೊಂದಿಗೆ ಸರ್ಕಾರ ರಚಿಸುವುದಾಗಿ ಹೇಳಿದ್ದ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್, “ಈ ಚುನಾವಣೆಯಲ್ಲಿ ಜೆಡಿಯು ಪಕ್ಷವನ್ನು ಸೋಲಿಸುವುದೇ ನನ್ನ ಗುರಿಯಾಗಿತ್ತು” ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ 137 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದ ಚಿರಾಗ್ ಪಾಸ್ವಾನ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ಆದರೆ ಇವರ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕನಿಷ್ಟ 20 ಕ್ಷೇತ್ರಗಳಲ್ಲಿ ಜೆಡಿಯು ಸೋತಿರುವುದು ಗಮನಾರ್ಹ. ಆದರೆ ಈ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ನಡೆಯಿಂದಾಗಿ ಸುಮಾರು 40 ಸ್ಥಾನಗಳನ್ನು ಜೆಡಿಯು ಕಳೆದುಕೊಂಡಿರಬಹುದು.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

“ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಬೇಕು ಎಂದು ನಾನು ಬಯಸಿದ್ದೆ. ಈ ನಿಟ್ಟಿನಲ್ಲಿ ನನ್ನ ಪಕ್ಷವು ಬೀರಿರುವ ಪರಿಣಾಮ ನನಗೆ ತೃಪ್ತಿಯನ್ನುಂಟು ಮಾಡಿದೆ” ಎಂದು ಎಎನ್‌ಐಗೆ ಹೇಳಿದರು.

‘ಎಲ್ಲ ಪಕ್ಷಗಳಂತೆ ನಾನೂ ಸಾಧ್ಯವಿರುವಷ್ಟು ಸ್ಥಾನಗಳನ್ನು ಗೆಲ್ಲಲು ಬಯಸಬಹುದಿತ್ತು. ಆದರೆ ಬಿಜೆಪಿ ರಾಜ್ಯದಲ್ಲಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮುವಂತೆ ಮಾಡುವುದು ನನ್ನ ಚುನಾವಣಾ ಉದ್ದೇಶವಾಗಿತ್ತು ’ಎಂದರು.

ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ಚಿರಾಗ್ ಪಾಸ್ವಾನ್ ತನ್ನ ಅಭ್ಯರ್ಥಿಗಳನ್ನು ನಿತೀಶ್ ಎದುರು ನಿಲ್ಲಿಸಿರುವುದೇ ಬಿಜೆಪಿಯನ್ನು ಇನ್ನಷ್ಟು ಬಲಪಡಿಸಲು ಎಂದು ಹಲವು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದರು.

2015ರ ಚುನಾವಣೆಯಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಯು ಬಲ ಈ ಚುನಾವಣೆಯಲ್ಲಿ 43 ಸ್ಥಾನಗಳಿಗೆ ಕುಸಿದಿದ್ದರೆ, ಆಗ 53 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಈಗ ತನ್ನ ಗೆಲುವನ್ನು 74ಕ್ಕೆ ಹೆಚ್ಚಿಸಿಕೊಂಡಿದೆ. ನಿತೀಶ್‌ಗೆ ಅಡ್ಡಗಾಲು ಹಾಕಲು ಬಿಜೆಪಿಯೇ ಚಿರಾಗ್‌ ಪಾಸ್ವಾನ್‌ಗೆ ಅವಕಾಶ ಕಲ್ಪಿಸಿತ್ತು ಎಂಬ ಊಹಾಪೋಹಗಳಿಗೆ ಇದು ಪುಷ್ಟಿ ನೀಡಿದೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಪಕ್ಷದ ಹೀನಾಯ ಸೋಲಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಚಿರಾಗ್, ಸೋಲಿನ ವ್ಯಾಖ್ಯೆ ಏನು? ಎಲ್‌ಜೆಪಿ ತನ್ನ ಮತಗಳಿಕೆಯನ್ನು ಹೆಚ್ಚಿಸಿಕೊಂಡಿದೆ ಎಂದು ಉತ್ತರಿಸಿದರು.

ಮಿತ್ರಪಕ್ಷ ಎನ್‌ಡಿಎ ಬಗ್ಗೆ ಜೆಡಿಯು ಅಸಮಾಧಾನಗೊಂಡಿದೆ ಎಂದು ಮಂಗಳವಾರ ಸಂದರ್ಶನದಲ್ಲಿ ಸುಳಿವು ನೀಡಿದ್ದ ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ, ಚಿರಾಗ್ ಪಾಸ್ವಾನ್‌ರನ್ನು ಆರಂಭದಲ್ಲಿಯೇ ಖಂಡಿಸಬೇಕಿತ್ತು ಮತ್ತು ನಿಯಂತ್ರಿಸಬೇಕಿತ್ತು ಎಂದು ಹೇಳಿದ್ದರು.


ಇದನ್ನೂ ಓದಿ: ಟ್ರಂಪ್ ನಿರ್ಗಮನದ ದಿನ ಎಣಿಸಲೆಂದೇ ಒಂದು ವೆಬ್‌ಸೈಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...