Homeಮುಖಪುಟಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ನಿತೀಶ್‌; ಸರ್ಕಾರ ಪತನ

- Advertisement -
- Advertisement -

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಜೊತೆಗಿನ ಮೈತ್ರಿಗೆ ಅಂತ್ಯ ಹಾಡಿದ್ದು, ಅವರು ಇಂದು ಸಂಜೆ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿಗೆ ಬಿಜೆಪಿ ಜೊತೆಗಿನ ಮೈತ್ರಿ ತ್ಯಜಿಸುವ ನಿರ್ಧಾರಕ್ಕೆ ಬರುವ ಮುನ್ನ ನಿತೀಶ್ ಕುಮಾರ್ ಅವರು ತಮ್ಮ ಶಾಸಕರೊಂದಿಗೆ ಸಭೆ ನಡೆಸಿದರು. “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಸಭೆಯ ಮೊದಲು ಎನ್‌ಡಿಟಿವಿಗೆ ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಬಿಜೆಪಿಯ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿದ್ದು, “ಈ ಮೈತ್ರಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗದು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಪಕ್ಷವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿರುವುದು ಇಂದಿನ ಬೆಳವಣಿಗೆಗಳಿಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಅವರು ತಮ್ಮದೇ ಪಕ್ಷದ ಮಾಜಿ ನಾಯಕ ಆರ್‌ಸಿಪಿ ಸಿಂಗ್ ವಿರುದ್ಧ ಹರಿಹಾಯ್ದಿದ್ದಾರೆ. ಅಮಿತ್ ಶಾ ಅವರ ಪರವಾಗಿ ಆರ್‌ಸಿಪಿ ಸಿಂಗ್‌ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ನಂತರದಲ್ಲಿ ಪಕ್ಷವನ್ನು ಸಿಂಗ್‌ ತೊರೆದಿದ್ದಾರೆ.

ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕೂಡ ಬಿಹಾರ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಸಿದೆ. ತೇಜಸ್ವಿ ಯಾದವ್ ಪಕ್ಷದ ನೇತೃತ್ವ ವಹಿಸಿದ್ದಾರೆ. ನಿತೀಶ್ ಕುಮಾರ್‌ಗೆ ತನ್ನ ಬೆಂಬಲವನ್ನು ಔಪಚಾರಿಕವಾಗಿ ಘೋಷಿಸುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ನಿರೀಕ್ಷೆ ಇದೆ.

ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಲು, ಐದು ಅಂಶಗಳು ಕಾರಣವಾದವು ಎಂದು ಕುರಿತು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

  1. ಸ್ಪೀಕರ್‌ ಹಸ್ತಕ್ಷೇಪ

ಬಿಹಾರ ವಿಧಾನಸಭಾ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಕೆಳಗಿಳಿಸಬೇಕು ಎಂದು ನಿತೀಶ್‌ ಕುಮಾರ್ ಬಯಸಿದ್ದರು. ತಮ್ಮ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಎತ್ತುವ ಮೂಲಕ ಸಂವಿಧಾನವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ನಿತೀಶ್‌ ಆರೋಪಿಸಿದ್ದರು. ಸ್ಪೀಕರ್‌ ಸಿನ್ಹಾ ಅವರ ಮೇಲೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅನೇಕ ಸಲ ಅಸಮಾಧಾನ ವ್ಯಕ್ತಪಡಿಸಿದ್ದರು.

2. ಕೇಂದ್ರದಲ್ಲಿ ಸಿಗದ ಸ್ಥಾನಮಾನ

2019ರ ಜೂನ್‌ನಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ತಮ್ಮ ಪಕ್ಷ ಜೆಡಿಯುಗೆ ಒಂದೇ ಒಂದು ಸ್ಥಾನವನ್ನು ನೀಡಿದ ನಂತರ ನಿತಿಶ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆನಂತದಲ್ಲಿ ನಿತೀಶ್‌ ಕುಮಾರ್‌ ಕ್ಯಾಬಿನೇಟ್‌ ವಿಸ್ತರಣೆ ಮಾಡಿ ತಮ್ಮ ಪಕ್ಷದ ಎಂಟು ಮಂದಿಯನ್ನು ಸೇರಿಸಿಕೊಂಡರು. ಬಿಜೆಪಿಗೆ ಒಂದು ಸ್ಥಾನವನ್ನು ನೀಡಿದ್ದರು.

3. ಏಕಕಾಲದ ಚುನಾವಣೆ ಚಿಂತನೆಗೆ ಜೆಡಿಯು ವಿರೋಧ

ರಾಜ್ಯ ಮತ್ತು ಕೇಂದ್ರ ಸರ್ಕಾರದ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಯೋಚನೆಯನ್ನು ಜೆಡಿಯು ಮುಖ್ಯಸ್ಥರು ವಿರೋಧಿಸಿದ್ದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಏಕಕಾಲದಲ್ಲಿ ಚುನಾವಣೆಯನ್ನು ನಡೆಸುವ ಪ್ರಸ್ತಾಪವನ್ನು ಮೋದಿ ಮಾಡಿದ್ದು, ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಜೆಡಿಯು ಪ್ರತಿಪಕ್ಷಗಳ ನಿಲುವನ್ನು ಸ್ವಾಗತಿಸಿರುವುದು ಬಿಜೆಪಿಗೆ ಸಹಿಸಲಾಗಿರಲಿಲ್ಲ.

4.  ಬಿಹಾರದ ಮೇಲೆ ಅಮಿತ್ ಶಾ ಹಿಡಿತ

ನಿತೀಶ್‌ ಕುಮಾರ್ ಅವರು ತಮ್ಮ ಸಂಪುಟಕ್ಕೆ ಬಿಜೆಪಿ ಸಚಿವರನ್ನು ಸೇರಿಸಿಕೊಳ್ಳುವಾಗ ಸವಾಲುಗಳನ್ನು ಎದುರಿಸಿದ್ದರು. ತಮಗೆ ಆಪ್ತರಾಗಿರುವವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಬಿಹಾರದ ಮೇಲೆ ಗೃಹ ಸಚಿವ ಅಮಿತ್ ಶಾ ಹಿಡಿತ ಸಾಧಿಸುತ್ತಿದ್ದರು ಎಂಬ ಆರೋಪಗಳು ಬಂದವು.

ಇದನ್ನೂ ಓದಿರಿ: ನಿತೀಶ್‌ಕುಮಾರ್‌ v/s ಬಿಜೆಪಿ: ಬಿಹಾರದ ಸಿಎಂ ಮುಂದಿವೆ ಮೂರು ಆಯ್ಕೆ!

5. ನಿತೀಶ್‌ಕುಮಾರ್‌ ಮಾತು ಕೇಳದ ಆರ್‌ಸಿಪಿ ಸಿಂಗ್‌

ಜೆಡಿಯು ತೊರೆದ ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್, ಬಿಜೆಪಿ ನಾಯಕರೊಂದಿಗೆ ನೇರವಾಗಿ ವ್ಯವಹರಿಸುತ್ತಿದ್ದದ್ದು ನಿತೀಶ್ ಕುಮಾರ್‌ ಅವರ ಕೋಪಕ್ಕೆ ಕಾರಣವಾಯಿತು. ನಿತೀಶ್ ಅವರ ನಿಲುವಿಗೆ ವಿರುದ್ಧವಾಗಿ ಕೇಂದ್ರದ ಮಂತ್ರಿಯಾಗಿದ್ದರು.

“ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಅಗತ್ಯವೇನು? ನಾವು ಕೇಂದ್ರ ಸಚಿವ ಸಂಪುಟದ ಭಾಗವಾಗುವುದಿಲ್ಲ ಎಂದು ಮುಖ್ಯಮಂತ್ರಿಯವರು 2019ರಲ್ಲಿಯೇ ನಿರ್ಧರಿಸಿದ್ದರು. ಅದನ್ನು ಮೀರಿ ಆರ್‌ಸಿಪಿ ಸಿಂಗ್‌ ಕೇಂದ್ರ ಸರ್ಕಾರದ ಸಚಿವರಾಗಿದ್ದು ಸರಿಯೇ” ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ (ಲಾಲನ್) ಸಿಂಗ್ ಭಾನುವಾರ ಹೇಳಿಕೆ ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...