Homeಮುಖಪುಟಬಿಹಾರ | ಜೆಡಿಯು ಶಾಸಕಾಂಗದ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆ : ನಾಳೆ ಎನ್‌ಡಿಎ...

ಬಿಹಾರ | ಜೆಡಿಯು ಶಾಸಕಾಂಗದ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆ : ನಾಳೆ ಎನ್‌ಡಿಎ ಸರ್ಕಾರ ರಚನೆ

- Advertisement -
- Advertisement -

ನಿರೀಕ್ಷೆಯಂತೆ ಬಿಹಾರದ ಜೆಡಿ (ಯು) ಶಾಸಕಾಂಗದ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಪಾಟ್ನಾದಲ್ಲಿ ಬುಧವಾರ (ನವೆಂಬರ್ 19) ನಡೆದ ನೂತನ ಶಾಸಕ ಸಭೆಯಲ್ಲಿ ನಿತೀಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಇದೇ ವೇಳೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸಮ್ರಾಟ್ ಚೌಧರಿ ಮತ್ತು ಉಪ ನಾಯಕರಾಗಿ ವಿಜಯ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.

ಜೆಡಿ(ಯು) ಸೇರಿದಂತೆ ಎನ್‌ಡಿಎ ನಾಯಕರು ಮಂಗಳವಾರ (ನವೆಂಬರ್ 18) ಪರಸ್ಪರ ಚರ್ಚೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೆಡಿಯು ಕಾರ್ಯನಿರತ ಅಧ್ಯಕ್ಷ ಸಂಜಯ್ ಜಾ ಮತ್ತು ಮೋದಿ ಸಂಪುಟದಲ್ಲಿ ಪಕ್ಷದ ಪ್ರತಿನಿಧಿಯಾಗಿರುವ ಲಲನ್ ಸಿಂಗ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಜೆಡಿ(ಯು) ಸ್ಥಾನಗಳು ಹೆಚ್ಚಳವಾಗಿರುವುದರಿಂದ ಮತ್ತು ಎಲ್‌ಜೆಪಿ (ರಾಮ್‌ ವಿಲಾಸ್), ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ ಪಕ್ಷಗಳು ಮೈತ್ರಿಕೂಟ ಸೇರ್ಪಡೆಯಾಗಿರುವ ಕಾರಣ ಕಳೆದ ಸರ್ಕಾರಕ್ಕಿಂತ ಹೊಸ ಸರ್ಕಾರ ವಿಭಿನ್ನವಾಗಿ ಕಾಣುವ ಸಾಧ್ಯತೆ ಇದೆ.

ಬಿಜೆಪಿ ಮತ್ತು ಜೆಡಿ(ಯು) ಬಹುತೇಕ ಸಮಾನ ಬಲವನ್ನು ಹೊಂದಿರುವುದು ಇದೇ ಮೊದಲು. 2020ರಲ್ಲಿ ಬಿಜೆಪಿಯ ಸಂಖ್ಯೆಗಳು ಕಡಿಮೆ ಇತ್ತು. 2005ರಲ್ಲಿ ಎರಡೂ ಪಕ್ಷಗಳು ಮೊದಲ ಬಾರಿಗೆ ರಾಜ್ಯ ಚುನಾವಣೆಯಲ್ಲಿ ಒಟ್ಟಾಗಿ ಗೆದ್ದಾಗಿನಿಂದ ಜೆಡಿ(ಯು) ಪ್ರಬಲ ಪಾಲುದಾರವಾಗಿತ್ತು.

ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನವೆಂಬರ್ 20 ರಂದು (ನಾಳೆ) ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...