Homeಮುಖಪುಟಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ.

ಸಿಎಂ ನಿತೀಶ್ ಕುಮಾರ್ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಮಗನ ನಿಶಾಂತ್ ಜೆಡಿಯು ಸೇರ್ಪಡೆಗೊಂಡಿರುವುದು ಗಮನಾರ್ಹ. ಇದರಿಂದ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದರೆ, ರಾಜ್ಯ ಸರ್ಕಾರದಲ್ಲಿ ನಿಶಾಂತ್‌ಗೆ ಅವಕಾಶ ಸಿಗಲಿದೆಯೇ? ಎಂಬ ಚರ್ಚೆ ಶುರುವಾಗಿದೆ.

ಇಂಜಿನಿಯರಿಂಗ್ ಪದವೀದರರಾಗಿರುವ 40 ವರ್ಷದ ನಿಶಾಂತ್ ಕುಮಾರ್ ಪಾಟ್ನಾದ ಜೆಡಿಯು ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸಂಜಯ್ ಜಾ ಅವರಿಂದ ಸದಸ್ಯತ್ವ ಸ್ವೀಕರಿಸಿದರು. ಈ ವೇಳೆ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಮತ್ತು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಚೌಧರಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

ನಿಶಾಂತ್ ಪಕ್ಷದ ಕಚೇರಿಗೆ ಆಗಮಿಸುತ್ತಿದ್ದಂತೆ, ಜೆಡಿಯು ಕಾರ್ಯಕರ್ತರು “ಯುವ ಸೋಚ್, ಮಜ್ಬೂತ್ ಸಂಕಲ್ಪ್” (ಯುವ ಚಿಂತನೆ, ದೃಢ ನಿರ್ಧಾರ) ಎಂಬ ಘೋಷಣೆಗಳನ್ನು ಕೂಗಿದರು. ಅವರ ಈ ಪ್ರವೇಶವು ಪಕ್ಷದೊಳಗೆ ಯುವಕೇಂದ್ರಿತ ಕಾರ್ಯಸೂಚಿಗಳಿಗೆ ಹೆಚ್ಚಿನ ಒತ್ತು ನೀಡಬಹುದು ಎಂಬ ನಿರೀಕ್ಷೆಗಳನ್ನು ಇದು ಪ್ರತಿಬಿಂಬಿಸಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೆಡಿಯು ಸೇರಿದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ನಿಶಾಂತ್, ನಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಾಯಕರು ಮತ್ತು ಬೆಂಬಲಿಗರಿಗೆ ಧನ್ಯವಾದ ಅರ್ಪಿಸಿದರು ಎಂದು ವರದಿ ಉಲ್ಲೇಖಿಸಿದೆ.

“ನಾನು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನೀವೆಲ್ಲರೂ ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಕಳೆದ 20 ವರ್ಷಗಳಲ್ಲಿ ನನ್ನ ತಂದೆ ಮಾಡಿದ ಸಾಧನೆಗಳ ಬಗ್ಗೆ ನಾನು, ಇಡೀ ಬಿಹಾರ ಮತ್ತು ಇಡೀ ದೇಶ ಹೆಮ್ಮೆಪಡುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ನೀಡಿದ ಕೊಡುಗೆಯನ್ನು ರಾಜ್ಯದ ಜನತೆ ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

ನಿತೀಶ್ ಕುಮಾರ್ ರಾಜ್ಯಸಭೆಗೆ ಹೋಗುವ ನಿರ್ಧಾರದ ಬಗ್ಗೆಯೂ ನಿಶಾಂತ್ ಪ್ರಸ್ತಾಪಿಸಿದ್ದು, “ನನ್ನ ತಂದೆಯವರು ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ ಮತ್ತು ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ಮಗನ ಪಕ್ಷದ ಸೇರ್ಪಡೆ ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಹಾಜರಾಗದಿದ್ದರೂ, ನಿಶಾಂತ್ ಅವರ ಅಧಿಕೃತ ಸೇರ್ಪಡೆಯು ಜೆಡಿಯು ಪಾಲಿಗೆ ಒಂದು ಮಹತ್ವದ ಕ್ಷಣವೆಂದು ಪರಿಗಣಿಸಲಾಗಿದೆ. ರಾಜಕೀಯ ವಿಶ್ಲೇಷಕರು ಇದನ್ನು ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಸಂಭಾವ್ಯ ಆರಂಭವೆಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...