Homeಮುಖಪುಟಅಪಘಾತದಲ್ಲಿ ನಿಧನ ಹೊಂದಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆದ ಪೊಲೀಸರು: ವಿಡಿಯೋ ವೈರಲ್‌

ಅಪಘಾತದಲ್ಲಿ ನಿಧನ ಹೊಂದಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆದ ಪೊಲೀಸರು: ವಿಡಿಯೋ ವೈರಲ್‌

- Advertisement -
- Advertisement -

ಬಿಹಾರದ ಮುಜಾಫರ್‌ಪುರದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಸಾಗಿಸದೆ ನದಿಗೆ ಎಸೆದಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತ ಆಘಾತಕಾರಿ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ.

ಬಿಹಾರದ ಮುಜಾಫರ್‌ಪುರದ ಫಕುಲಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 22ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಮೇಲೆ ಟ್ರಕ್‌ ಹರಿದ ಪರಿಣಾಮ ಅವರು ಸ್ಥಳದಲ್ಲೇ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಆಸ್ಪತ್ರೆಗೆ ಸಾಗಿಸಿ  ಮರಣೋತ್ತರ ಪರೀಕ್ಷೆ ನಡೆಸಬೇಕಿತ್ತು. ಆದರೆ ಪೊಲೀಸರು ಅಮಾನವೀಯವಾಗಿ  ಮೃತದೇಹವನ್ನು ರಸ್ತೆಯಿಂದ ಎತ್ತಿ ನದಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋವನ್ನು ಸ್ಥಳೀಯರು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ.

ಈ ವೀಡಿಯೋ ವ್ಯಾಪಕವಾಗಿ ವೈರಲ್‌ ಆದ ನಂತರ ಪೊಲೀಸರ ವಿರುದ್ಧ ಟೀಕೆ ವ್ಯಕ್ತವಾಗಿದೆ. ಸೇತುವೆಯಿಂದ ನದಿಗೆ ಎಸೆಯಲು ಪೊಲೀಸ್ ಸಿಬ್ಬಂದಿಗಳು ಕೋಲುಗಳನ್ನು ಬಳಸಿ ರಕ್ತಸಿಕ್ತ ದೇಹವನ್ನು ವಿಲೇವಾರಿ ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ವಿಡಿಯೋ ವೈರಲ್ ಆದ ನಂತರ ಪೊಲೀಸರು ತಡರಾತ್ರಿ ಶವವನ್ನು ನದಿಯಿಂದ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಮೃತನ ಗುರುತು ಇನ್ನು ಕೂಡ ಪತ್ತೆಯಾಗಿಲ್ಲ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ದೇಹದ ಸಣ್ಣ ಭಾಗಗಳನ್ನು ಮಾತ್ರ ತೆಗೆದು ನದಿಯಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮೃತದೇಹದ ಕಾಲುಗಳನ್ನು ಮೇಲಕ್ಕೆತ್ತಿ, ನದಿಗೆ ಎಸೆಯಲು ಸೇತುವೆಯ ಕಂಬಿಯ ಮೇಲೆ ಇಟ್ಟಿರುವುದು ಕಂಡು ಬಂದಿದೆ. ಇನ್ನೋರ್ವ ಪೊಲೀಸ್ ಅದನ್ನು ನದಿಗೆ ತಳ್ಳುವುದು ಕಂಡು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಜಾಫರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತನಿಖೆಯ ನಂತರ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ವಿಡಿಯೋ ವೈರಲ್ ಬಳಿಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ಓದಿ: ಬಿಹಾರದಂತೆ ದೇಶದಾದ್ಯಂತ ಜಾತಿಗಣತಿ ನಡೆಸಬೇಕು; ತೇಜಸ್ವಿ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...