Homeಮುಖಪುಟಬಿಹಾರ ರಾಜಕೀಯ ಬಿಕ್ಕಟ್ಟು; 'ಇಧರ್-ಉಧರ್' ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

ಬಿಹಾರ ರಾಜಕೀಯ ಬಿಕ್ಕಟ್ಟು; ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

- Advertisement -
- Advertisement -

ಮಹಾ ಘಟಬಂಧನ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಭಾನುವಾರ ಏಳನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಗೊಂದಲ ಪರಿಹರಿಸುವಂತೆ ರಾಷ್ಟ್ರೀಯ ಜನತಾದಳ ಪಕ್ಷವು ಗಡುವು ನೀಡಿದೆ. ಈ ನಡುವೆ ಸಿಎಂ ನಿತೀಶ್ ಕುಮಾರ್ ರಾಜಭವನದಲ್ಲಿ ಬೀಡು ಬಿಟ್ಟಿದ್ದಾರೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರ್ಪಡೆಗೊಳ್ಳಲು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ಕುರಿತು ಸ್ಪಷ್ಟನೆ ನೀಡುವಂತೆ ನಿತೀಶ್ ಕುಮಾರ್ ಅವರನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಶುಕ್ರವಾರ ಕೇಳಿದೆ. ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ  ಸಂಸದ ಮನೋಜ್ ಝಾ, ‘ಸಂಜೆಯೊಳಗೆ ಬಿಹಾರ ಮುಖ್ಯಮಂತ್ರಿ ಗೊಂದಲವನ್ನು ಪರಿಹರಿಸಬೇಕು’ ಎಂದು ಹೇಳಿದರು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ (ಆರ್) ಮತ್ತು ತೇಜಸ್ವಿ ಯಾದವ್ 2022 ರಲ್ಲಿ ನಿತೀಶ್ ಕುಮಾರ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದರು. ಆರ್‌ಜೆಡಿ ಮೈತ್ರಿಯನ್ನು ಮುಂದುವರಿಸಲು ಸಿದ್ಧವಾಗಿದೆ ಮತ್ತು ಸರ್ಕಾರ ಬೀಳಿಸುವ ಆಟಗಳನ್ನು ಎಂದಿಗೂ ಆಡಲಿಲ್ಲ ಎಂದು ಮನೋಜ್ ಝಾ ಹೇಳಿದ್ದಾರೆ.

‘ಸಂಜೆಯೊಳಗೆ ಗೊಂದಲವನ್ನು ನಿವಾರಿಸಲು ನಾವು ನಿತೀಶ್ ಕುಮಾರ್ ಅವರನ್ನು ವಿನಂತಿಸುತ್ತೇವೆ. ಮೈತ್ರಿ ಬಗ್ಗೆ ಈ ಗೊಂದಲ, ಜನರ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ … ನಮ್ಮ ಕಡೆಯಿಂದ ಇದು ಸ್ಪಷ್ಟವಾಗಿದೆ. ಹಾಗಾಗಿ ಮಾಧ್ಯಮ ವರದಿಗಳಿಂದ ಹೊರಹೊಮ್ಮುವ ಈ ಗೊಂದಲವು ನಮ್ಮನ್ನು ಗೊಂದಲಕ್ಕೀಡುಮಾಡಿದೆ. ನೀವು ನಮ್ಮ ಕಡೆಯಿಂದ ಯಾವುದೇ ಹೇಳಿಕೆ ನೀಡಿಲ್ಲ. ಹಾಗಾಗಿ ನಾನು ವಿನಂತಿಸುತ್ತೇನೆ, ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ. ಮುಖ್ಯಮಂತ್ರಿಯೂ ಮಾಧ್ಯಮ ವರದಿಗಳನ್ನು ವೀಕ್ಷಿಸುತ್ತಾರೆ. ಆರ್‌ಜೆಡಿ ಇಂಥ ಆಟವನ್ನು ಎಂದಿಗೂ ಆಡಲಿಲ್ಲ’ ಎಂದು ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ವರದಿಗಳನ್ನು ನಿರಾಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮನೋಜ್ ಝಾ ಹೇಳಿದ್ದಾರೆ.

ಜೆಡಿಯು ಇಂಡಿಯಾ ಬ್ಲಾಕ್‌ನೊಂದಿಗಿದೆ:

ಈ ನಡುವೆ, ‘ಪಕ್ಷವು ವಿರೋಧ ಪಕ್ಷದೊಂದಿಗೆ ದೃಢವಾಗಿದೆ. ಆದರೆ, ಮೈತ್ರಿ ಮತ್ತು ಸೀಟು ಹಂಚಿಕೆಯ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ಬಯಸುತ್ತದೆ’ ಎಂದು ಜೆಡಿಯು ಉನ್ನತ ಮೂಲಗಳು ಹೇಳಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಿಜೆಪಿ ಮತ್ತು ಅದರ ಬಿಹಾರ ಮಿತ್ರಪಕ್ಷಗಳು ಇಂದು ಜನತಾ ದಳ (ಯುನೈಟೆಡ್) ಮೈತ್ರಿ ಸಾಧ್ಯತೆಗಳನ್ನು ಅನ್ವೇಷಿಸುತ್ತಿದೆ ಎಂದು ಸುಳಿವು ನೀಡಿವೆ.

‘ಬಿಹಾರದ ರಾಜಕೀಯ ಪರಿಸ್ಥಿತಿಯನ್ನು ದೆಹಲಿಯಲ್ಲಿ ಚರ್ಚಿಸಲಾಗಿದ್ದು, ಪರಿಸ್ಥಿತಿಯನ್ನು ವಿಶ್ಲೇಷಿಸಿದ ನಂತರವೇ ಸಮರ್ಥ ನಾಯಕತ್ವವನ್ನು ನಿರ್ಧರಿಸಲಾಗುವುದು… ಬಿಹಾರದಲ್ಲಿ ಸಂಪೂರ್ಣ ಅರಾಜಕತೆ ಮತ್ತು ರಾಜಕೀಯ ಅಸ್ಥಿರತೆ ಇದೆ… ಪಕ್ಷದ ಚುಕ್ಕಾಣಿ ಹಿಡಿಯುವ ನಿರ್ಧಾರ ಪಕ್ಷದ ಎಲ್ಲಾ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ’ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಹೇಳಿದ್ದಾರೆ.

‘ಸ್ವಲ್ಪ ಸಮಯದಲ್ಲಿ ಬದಲಾವಣೆ ಖಚಿತ, ಪಕ್ಷವು ಸಹ ನಿರ್ಧಾರ ತೆಗೆದುಕೊಂಡಿದೆ. ನಿತೀಶ್ ಜಿ ಕೂಡ ಸಿದ್ಧರಾಗಿದ್ದಾರೆ. ಪ್ರಧಾನಿ ಮೋದಿ ಕೂಡ ನಿತೀಶ್ ಜಿಯನ್ನು ಇಷ್ಟಪಡುತ್ತಾರೆ. ಬಿಹಾರದ ಎಲ್ಲಾ 40 ಸ್ಥಾನಗಳನ್ನು ಎನ್ಡಿಎ ಗೆಲ್ಲುತ್ತದೆ. ನಿತೀಶ್ ಜೀ ನಮ್ಮೊಂದಿಗೆ ಸೇರಿಕೊಂಡರೆ. ಎರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ ಎಂದು ನಾನು ಭಾವಿಸುತ್ತೇನೆ. ಬಿಹಾರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ’ ಎಂದು ಅವರು ಹೇಳಿದರು.

ಈ ವಾರದ ಆರಂಭದಲ್ಲಿ, ನಿತೀಶ್ ಕುಮಾರ್ ಅವರು ಕರ್ಪೂರಿ ಠಾಕೂರ್ ಅವರ 100 ನೇ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ರಾಜವಂಶದ ರಾಜಕೀಯದ ಬಗ್ಗೆ ಮಾತನಾಡುವಾಗ ಬಿಹಾರ ಮೈತ್ರಿಯಲ್ಲಿ ಕೋಲಾಹಲವನ್ನು ಉಂಟುಮಾಡಿದರು. ಕೂಡಲೇ, ಲಾಲು ಯಾದವ್ ಅವರ ಪುತ್ರಿ ರೋಶ್ನಿ ಆಚಾರ್ಯ ಎಕ್ಸ್ನಲ್ಲಿ ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಬರೆದಿದ್ದಾರೆ. ಅವರು ನಿತೀಶ್ ಕುಮಾರ್ ಅವರನ್ನು “ಬಡ್ತಮೀಜ್” ಎಂದು ಕರೆದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ; ಬಿಹಾರ ರಾಜಕೀಯ ಬೆಳವಣಿಗೆ: ಮುಖ್ಯಮಂತ್ರಿಯಾಗಿ ನಿತೀಶ್, ಬಿಜೆಪಿಯಿಂದ ಇಬ್ಬರು ಡಿಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...