ತಮ್ಮ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪಾವತಿಸುವ ಮೊತ್ತವನ್ನು ಹೆಚ್ಚಿಸುವುದಾಗಿ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಹಾರ
ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲರಿಗೆ ನೀಡುವ ಮೊತ್ತವನ್ನು ತಿಂಗಳಿಗೆ 400 ರೂ.ನಿಂದ 1500 ರೂ.ಗೆ ಹೆಚ್ಚಿಸಲಾಗುವುದು ಎಂದು ತೇಜಸ್ವಿ ಭರವಸೆ ನೀಡಿದ್ದಾರೆ. “ವಿಧಾನಸಭಾ ಚುನಾವಣೆಯ ನಂತರ ನಾವು ಸರ್ಕಾರವನ್ನು ರಚಿಸಿದರೆ, 60 ವರ್ಷಕ್ಕಿಂತ ಮೇಲ್ಪಟ್ಟವರು ಅಥವಾ ಅಂಗವಿಕಲರು ಮತ್ತು ವಿಧವೆಯರಿಗೆ ನೀಡುವ ಸಾಮಾಜಿಕ ಭದ್ರತಾ ಯೋಜನೆಯ ಅನುದಾವನ್ನು ತಿಂಗಳಿಗೆ 1500 ರೂ. ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರವು ಜನರಿಗೆ ಪಾವತಿಸುವ ಮೊತ್ತವು ಅತ್ಯಲ್ಪವಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಯೋಜನೆಗಳಡಿ ಫಲಾನುಭವಿಗಳಿಗೆ ಮಾಸಿಕ 400 ರೂ. ನೀಡುತ್ತಿದೆ ಎಂದು ಹೇಳಿದ್ದಾರೆ. ಬಿಹಾರ
ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಜನರಿಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ತೇಜಸ್ವಿ ಯಾದವ್ ಇತ್ತಿಚೆಗೆ ಹೇಳಿದ್ದರು. ಅದರ ನಂತರ ಚುನಾವಣಾ ವಿಚಾರವಾಗಿ ಜನರಿಗೆ ನೀಡುತ್ತಿರುವ ಮತ್ತೊಂದು ಭರವಸೆ ಇದಾಗಿದೆ. ಈ ಹಿಂದೆ ಜನರಿಗೆ ಏನೇನು ಭರವಸೆ ನೀಡಿದ್ದೇವೋ ಅದನ್ನು ಈಡೇರಿಸಿದ್ದೇನೆ ಎಂದು ಅವರು ಪುನರುಚ್ಚರಿಸಿದ್ದಾರೆ.
ತಮ್ಮ ಪಕ್ಷವು ಮಹಾಮೈತ್ರಿಕೂಟ ಸರ್ಕಾರದ ಭಾಗವಾಗಿದ್ದಾಗ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಜನರಿಗೆ ಉದ್ಯೋಗಗಳನ್ನು ಒದಗಿಸಿದೆ ಎಂದು ತೇಜಸ್ವಿ ಹೇಳಿಕೊಂಡಿದ್ದಾರೆ. “ನಾವು, ಮಹಾಮೈತ್ರಿ ಸರ್ಕಾರದ ಭಾಗವಾಗಿ, ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ನಮ್ಮ ಭರವಸೆಯನ್ನು ಪೂರ್ತಿ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.
ಆರ್‌ಜೆಡಿ ಮುಂದಿನ ಬಾರಿ ಸರ್ಕಾರವನ್ನು ರಚಿಸಿದರೆ ಅವರ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡುವ ಮೂಲಕ ಜೀವಿಕಾ ದೀದಿಗಳ ಬೆಂಬಲವನ್ನು ಗೆಲ್ಲಲು ಅವರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ತೇಜಸ್ವಿ, “ನಿತೀಶ್ ಅವರು ಜೀವಿಕಾ ದೀದಿಗಳನ್ನು ತಮ್ಮ ಮತದಾರರನ್ನಾಗಿ ಮಾಡಲು ಬಯಸುತ್ತಾರೆ. ಆದರೆ ನಮ್ಮ ಪಕ್ಷವು ಅವರ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು
ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು


