Homeಮುಖಪುಟಬಿಹಾರ | ಅಧಿಕಾರಕ್ಕೇರಿದರೆ ಪಿಂಚಣಿ ಹೆಚ್ಚಿಸುವುದಾಗಿ ತೇಜಸ್ವಿ ಯಾದವ್ ಭರವಸೆ

ಬಿಹಾರ | ಅಧಿಕಾರಕ್ಕೇರಿದರೆ ಪಿಂಚಣಿ ಹೆಚ್ಚಿಸುವುದಾಗಿ ತೇಜಸ್ವಿ ಯಾದವ್ ಭರವಸೆ

- Advertisement -
- Advertisement -

ತಮ್ಮ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪಾವತಿಸುವ ಮೊತ್ತವನ್ನು ಹೆಚ್ಚಿಸುವುದಾಗಿ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಹಾರ

ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲರಿಗೆ ನೀಡುವ ಮೊತ್ತವನ್ನು ತಿಂಗಳಿಗೆ 400 ರೂ.ನಿಂದ 1500 ರೂ.ಗೆ ಹೆಚ್ಚಿಸಲಾಗುವುದು ಎಂದು ತೇಜಸ್ವಿ ಭರವಸೆ ನೀಡಿದ್ದಾರೆ. “ವಿಧಾನಸಭಾ ಚುನಾವಣೆಯ ನಂತರ ನಾವು ಸರ್ಕಾರವನ್ನು ರಚಿಸಿದರೆ, 60 ವರ್ಷಕ್ಕಿಂತ ಮೇಲ್ಪಟ್ಟವರು ಅಥವಾ ಅಂಗವಿಕಲರು ಮತ್ತು ವಿಧವೆಯರಿಗೆ ನೀಡುವ ಸಾಮಾಜಿಕ ಭದ್ರತಾ ಯೋಜನೆಯ ಅನುದಾವನ್ನು ತಿಂಗಳಿಗೆ 1500 ರೂ. ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರವು ಜನರಿಗೆ ಪಾವತಿಸುವ ಮೊತ್ತವು ಅತ್ಯಲ್ಪವಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಯೋಜನೆಗಳಡಿ ಫಲಾನುಭವಿಗಳಿಗೆ ಮಾಸಿಕ 400 ರೂ. ನೀಡುತ್ತಿದೆ ಎಂದು ಹೇಳಿದ್ದಾರೆ. ಬಿಹಾರ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಜನರಿಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ತೇಜಸ್ವಿ ಯಾದವ್ ಇತ್ತಿಚೆಗೆ ಹೇಳಿದ್ದರು. ಅದರ ನಂತರ ಚುನಾವಣಾ ವಿಚಾರವಾಗಿ ಜನರಿಗೆ ನೀಡುತ್ತಿರುವ ಮತ್ತೊಂದು ಭರವಸೆ ಇದಾಗಿದೆ. ಈ ಹಿಂದೆ ಜನರಿಗೆ ಏನೇನು ಭರವಸೆ ನೀಡಿದ್ದೇವೋ ಅದನ್ನು ಈಡೇರಿಸಿದ್ದೇನೆ ಎಂದು ಅವರು ಪುನರುಚ್ಚರಿಸಿದ್ದಾರೆ.

ತಮ್ಮ ಪಕ್ಷವು ಮಹಾಮೈತ್ರಿಕೂಟ ಸರ್ಕಾರದ ಭಾಗವಾಗಿದ್ದಾಗ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಜನರಿಗೆ ಉದ್ಯೋಗಗಳನ್ನು ಒದಗಿಸಿದೆ ಎಂದು ತೇಜಸ್ವಿ ಹೇಳಿಕೊಂಡಿದ್ದಾರೆ. “ನಾವು, ಮಹಾಮೈತ್ರಿ ಸರ್ಕಾರದ ಭಾಗವಾಗಿ, ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ನಮ್ಮ ಭರವಸೆಯನ್ನು ಪೂರ್ತಿ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಂದಿನ ಬಾರಿ ಸರ್ಕಾರವನ್ನು ರಚಿಸಿದರೆ ಅವರ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡುವ ಮೂಲಕ ಜೀವಿಕಾ ದೀದಿಗಳ ಬೆಂಬಲವನ್ನು ಗೆಲ್ಲಲು ಅವರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ತೇಜಸ್ವಿ, “ನಿತೀಶ್ ಅವರು ಜೀವಿಕಾ ದೀದಿಗಳನ್ನು ತಮ್ಮ ಮತದಾರರನ್ನಾಗಿ ಮಾಡಲು ಬಯಸುತ್ತಾರೆ. ಆದರೆ ನಮ್ಮ ಪಕ್ಷವು ಅವರ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...