Homeಮುಖಪುಟಬಿಹಾರ | ಜನ ಸುರಾಜ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಶಾಂತ್ ಕಿಶೋರ್

ಬಿಹಾರ | ಜನ ಸುರಾಜ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರಶಾಂತ್ ಕಿಶೋರ್

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಜನ ಸುರಾಜ್ ಪಕ್ಷದ (ಜೆಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಸಿಂಗ್ ಅಲಿಯಾಸ್ ಪಪ್ಪು ಸಿಂಗ್ ಅವರು ಗುರುವಾರ ಬಹಿರಂಗಪಡಿಸಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರು ಜೆಎಸ್‌ಪಿಯ ಸ್ಥಾಪಕರಾಗಿದ್ದಾರೆ. ಬಿಹಾರ | ಜನ ಸುರಾಜ್

ಪ್ರಶಾಂತ್‌ ಕಿಶೋರ್ ಅವರು ತಾನು ಸಿಎಂ ಹುದ್ದೆಯ ಸ್ಪರ್ಧೆಯಲ್ಲಿಲ್ಲ ಎಂದು ಪದೇ ಪದೇ ಹೇಳುತ್ತಲೆ ಬಂದಿದ್ದಾರೆ. ಆದರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಅದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ಪ್ರಶಾಂತ್ ಕಿಶೋರ್ ಅವರು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ‘ಬಿಹಾರ್ ಬದಲೋ ಯಾತ್ರೆ’ಯಲ್ಲಿದ್ದಾರೆ.

ಬದಲಾವಣೆಯ ಅಲೆಯು ಇಡೀ ಬಿಹಾರವನ್ನು ವ್ಯಾಪಿಸುತ್ತಿದೆ ಎಂದು ಪಪ್ಪು ಸಿಂಗ್ ಹೇಳಿಕೊಂಡಿದ್ದು, ಈ ಬದಲಾವಣೆಯನ್ನು ಸುಲಭವಾಗಿ ಕಾಣಬಹುದಾಗಿದೆ, ವಿವಿಧ ಹಳ್ಳಿಗಳ ಜನರು ಜೆಎಸ್‌ಪಿಗೆ ಸೇರುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಜನರು ಕಿಶೋರ್ ಅವರ ನಾಯಕತ್ವದಲ್ಲಿ ನಂಬಿಕೆ ಇಡುತ್ತಿದ್ದಾರೆ. ಜೆಎಸ್‌ಪಿ ರಾಜಕೀಯ ಪಕ್ಷಕ್ಕಿಂತ ಹೆಚ್ಚಾಗಿ ಸಮಾಜವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಚಳುವಳಿಯಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರದಲ್ಲಿ ಮಾತ್ರ ಆಸಕ್ತಿ ಹೊಂದಿವೆ, ಇದುವೆ ರಾಜ್ಯದ ಶೋಚನೀಯ ಸ್ಥಿತಿಗೆ ಕಾರಣ” ಎಂದು ಅವರು ಆರೋಪಿಸಿದ್ದಾರೆ.

ಜೆಡಿ(ಯು) ನಾಯಕರು ಕಳೆದ 20 ವರ್ಷಗಳಿಂದ ಅಧಿಕಾರದಲ್ಲಿದ್ದರೂ ರಾಜ್ಯದಲ್ಲಿ ವಲಸೆ ನಿಂತಿಲ್ಲ ಎಂದು ಹೇಳಿದ ಪಪ್ಪು ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿ (ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರ ಮೇಲೆ ದಾಳಿ ಮಾಡಿದ್ದಾರೆ.

“ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದೆ, ಆದರೆ ಶಿಕ್ಷಣದ ಗುಣಮಟ್ಟ ನಿರಂತರವಾಗಿ ಕುಸಿಯುತ್ತಿದೆ. ಲಾಲು ಆಡಳಿತವನ್ನು ‘ಜಂಗಲ್ ರಾಜ್’ ಎಂದು ನಿತೀಶ್ ಕುಮಾರ್ ಬಣ್ಣಿಸಿದ್ದಾರೆ. ಆದರೆ ಕಳೆದ 15 ವರ್ಷಗಳಿಂದ ಬಿಹಾರದಲ್ಲಿ ‘ಮಹಾಜಂಗಲ್ ರಾಜ್’ ಚಾಲ್ತಿಯಲ್ಲಿದೆ” ಎಂದು ಅವರು ಆರೋಪಿಸಿದ್ದಾರೆ.

ಈ ಮಧ್ಯೆ, ವಿಧಾನಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಿಪಿಐ (ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಪ್ರತಿಪಾದಿಸಿದ್ದಾರೆ.

ಅದಾಗ್ಯೂ, ಈ ಬಗ್ಗೆ ಇತ್ತಿಚೆಗೆ ಪ್ರತಿಕ್ರಿಯಿಸಿದ್ದ ಬಿಹಾರದ ಎಐಸಿಸಿ ಉಸ್ತುವಾರಿ ಕೃಷ್ಣ ಅಲ್ಲವರು ಅವರು, ತೇಜಸ್ವಿ ಇಂಡಿಯಾ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ, ಬದಲಾಗಿ ಅದರ ಸಮನ್ವಯ ಸಮಿತಿಯ ಅಧ್ಯಕ್ಷರು ಮಾತ್ರ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರನ್ನು ತಮ್ಮ ಸಿಎಂ ಅಭ್ಯರ್ಥಿಯಾಗಿ ಘೋಷಿಸುವಂತೆ ಎನ್‌ಡಿಎಗೆ ಪ್ರಶಾಂತ್ ಕಿಶೋರ್ ಅವರು ಸವಾಲು ಹಾಕಿದ್ದಾರೆ. ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಮೈತ್ರಿಕೂಟ ಮತ್ತು ಬಿಜೆಪಿ-ಜೆಡಿ (ಯು) ನೇತೃತ್ವದ ಎನ್‌ಡಿಎ ಜೊತೆಗೆ ಬಿಹಾರದಲ್ಲಿ ಜೆಎಸ್‌ಪಿ ಮೂರನೇ ಪರ್ಯಾಯವಾಗಲಿದೆ ಎಂದು ಪ್ರಶಾಂತ್ ಕಿಶೋರ್‌ ಹೇಳಿದ್ದಾರೆ. ಬಿಹಾರ | ಜನ ಸುರಾಜ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...