HomeUncategorizedಬಿಹಾರ | ಪ್ರಶಾಂತ್ ಕಿಶೋರ್ ಜನ ಸುರಾಜ್ ಪಕ್ಷದೊಂದಿಗೆ ಆರ್‌ಸಿಪಿ ಸಿಂಗ್ ಪಕ್ಷ ವಿಲೀನ

ಬಿಹಾರ | ಪ್ರಶಾಂತ್ ಕಿಶೋರ್ ಜನ ಸುರಾಜ್ ಪಕ್ಷದೊಂದಿಗೆ ಆರ್‌ಸಿಪಿ ಸಿಂಗ್ ಪಕ್ಷ ವಿಲೀನ

- Advertisement -
- Advertisement -

ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್ ಅವರು ಭಾನುವಾರ ಪಾಟ್ನಾದಲ್ಲಿ ನಡೆದ ಸಮಾರಂಭದಲ್ಲಿ ತಾನು ಹೊಸದಾಗಿ ಸ್ಥಾಪಿಸಿದ ಪಕ್ಷವಾದ ಆಪ್ ಸಬ್ಕಿ ಆವಾಜ್ (ಎಎಸ್‌ಎ) ಅನ್ನು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಜನ ಸುರಾಜ್ ಪಕ್ಷದೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ್ದಾರೆ. ಬಿಹಾರ | ಪ್ರಶಾಂತ್ ಕಿಶೋರ್

ಈ ಬೆಳವಣಿಗೆ ಜನ ಸುರಾಜ್ ಪಕ್ಷಕ್ಕೆ ನೈತಿಕ ಉತ್ತೇಜನ ನೀಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 243 ಸ್ಥಾನಗಳಿಗೂ ಸ್ಪರ್ಧಿಸುವುದಾಗಿ ಪಕ್ಷವು ಈಗಾಗಲೇ ಘೋಷಿಸಿದೆ.

ಮಾಜಿ ರಾಜ್ಯಸಭಾ ಸದಸ್ಯರಾಗಿರುವ ಆರ್‌ಸಿಪಿ ಸಿಂಗ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದದವರಾಗಿದ್ದು, ಅವರದೇ ಕುರ್ಮಿ ​​ಜಾತಿಗೆ ಸೇರಿದವರಾಗಿದ್ದಾರೆ. ನಿತೀಶ್ ಅವರ ಜನಪ್ರಿಯತೆ ಕುಸಿಯುತ್ತಿರುವುದರಿಂದ ಸಿಂಗ್ ಅವರನ್ನು ಕುರ್ಮಿ ​​ಸಮುದಾಯದ ಸಂಭಾವ್ಯ ಉದಯೋನ್ಮುಖ ನಾಯಕ ಎಂದು ನೋಡಲಾಗುತ್ತಿದೆ ಎಂದು ವರದಿಗಳು ಹೇಳಿವೆ.

ಜೆಡಿ(ಯು) ವರಿಷ್ಠ ನಿತೀಶ್ ಕುಮಾರ್ ಅವರೊಂದಿಗಿನ ಒಲವು ಕಳೆದುಕೊಂಡ ನಂತರ ತಮ್ಮ ಸಚಿವ ಸ್ಥಾನ ತ್ಯಜಿಸಬೇಕಾಗಿ ಬಂದಿದ್ದ ಆರ್‌ಸಿಪಿಎಸ್ ಸಿಂಗ್, ಅಕ್ಟೋಬರ್ 31, 2024 ರಂದು ಆಪ್ ಸಬ್ಕಿ ಆವಾಜ್ ಅನ್ನು ರಚಿಸಿದ್ದರು. ಮೇ 2023 ರಲ್ಲಿ ನಿತೀಶ್ ಅವರು ಪಕ್ಷ ಬದಲಿಸಿ ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟ ಸೇರಿದ ನಂತರ ಅವರು ಜೆಡಿ(ಯು)ಗೆ ರಾಜೀನಾಮೆ ನೀಡಿದ್ದರು.

ಪ್ರಶಾಂತ್ ಕಿಶೋರ್ ಅವರು ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ‘ವಾಸ್ತವಿಕ ಪರಿಶೀಲನೆ’ಯನ್ನು ಘೋಷಿಸಿದ್ದಾರೆ. “ನಿತೀಶ್ ಅವರ ಸ್ವಂತ ಜಿಲ್ಲೆಯಲ್ಲಿ ಅಭಿವೃದ್ಧಿಯ ನಿಜವಾದ ಸ್ಥಿತಿಯನ್ನು ನಾನು ಬಹಿರಂಗಪಡಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಬಿಹಾರ | ಪ್ರಶಾಂತ್ ಕಿಶೋರ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ ಮತ್ತು ಭಾರತ-ಪಾಕ್ ಯುದ್ಧದ ಕುರಿತು 10 ಪ್ರಶ್ನೆಗಳ ಪಟ್ಟಿ ಮಾಡಿದ ‘ಕೌಂಟರ್ ಕರೆಂಟ್ಸ್’ ನ ಬಿನುದಾ

ಪಹಲ್ಗಾಮ್ ದಾಳಿ ಮತ್ತು ಭಾರತ-ಪಾಕ್ ಯುದ್ಧದ ಕುರಿತು 10 ಪ್ರಶ್ನೆಗಳ ಪಟ್ಟಿ ಮಾಡಿದ ‘ಕೌಂಟರ್ ಕರೆಂಟ್ಸ್’ ನ ಬಿನುದಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...