Homeಮುಖಪುಟಬಿಹಾರದಾದ್ಯಂತ ಧಾರ್ಮಿಕ ‘ಪವಿತ್ರ ಸ್ನಾನ’ದ ವೇಳೆ 37 ಮಕ್ಕಳು ಸೇರಿದಂತೆ 43 ಸಾವು!

ಬಿಹಾರದಾದ್ಯಂತ ಧಾರ್ಮಿಕ ‘ಪವಿತ್ರ ಸ್ನಾನ’ದ ವೇಳೆ 37 ಮಕ್ಕಳು ಸೇರಿದಂತೆ 43 ಸಾವು!

ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಆಚರಿಸುವ ಹಬ್ಬದಲ್ಲಿ ದುರ್ಘಟನೆ

- Advertisement -
- Advertisement -

ಮೂರು ದಿನಗಳ ಕಾಲ ನಡೆಯುವ ‘ಜೀವಿತಪುತ್ರಿಕಾ’ ಹಬ್ಬದ ಆಚರಣೆಯಲ್ಲಿ ಬಿಹಾರದಾದ್ಯಂತ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವ ವೇಳೆ 37 ಮಕ್ಕಳು ಸೇರಿದಂತೆ 46 ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಮೃತಪಟ್ಟ 46 ಮಂದಿಯಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023ರಲ್ಲಿ ರಾಜ್ಯದಲ್ಲಿ ‘ಜೀವಿತಪುತ್ರಿಕ’ ಹಬ್ಬದ ಆಚರಣೆ ವೇಳೆ ಒಟ್ಟು 22 ಮಂದಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸವನ್ನು ಆಚರಿಸುತ್ತಾರೆ. ಮೂರು ದಿನಗಳ ಈ ಉತ್ಸವವು ‘ನಹಯ್ ಖಯ್’ ನೊಂದಿಗೆ ಪ್ರಾರಂಭವಾಗುತ್ತದೆ ಮತ್ತು ಈ ಸಂದರ್ಭದಲ್ಲಿ ಭಕ್ತರು ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ.

ಇದನ್ನೂ ಓದಿ: ‘ಬಿಜೆಪಿ ರಕ್ತದಲ್ಲಿ ಕೋಮುವಾದ ಸೇರಿಕೊಂಡಿರುವ ಹಾಗೆ ಅಂತರ್‌ಕಲಹವೂ ಇದೆ..’; ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬುಧವಾರ ಆಚರಿಸಲಾದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಸಾವುಗಳು ವರದಿಯಾಗಿವೆ. ಇಲ್ಲಿಯವರೆಗೆ ಒಟ್ಟು 43 ಮೃತದೇಹಗಳು ಸಿಕ್ಕಿದ್ದು, ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಬಿಹಾರ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಪೂರ್ವ ಚಂಪಾರಣ್, ಪಶ್ಚಿಮ ಚಂಪಾರಣ್, ಔರಂಗಾಬಾದ್, ನಳಂದಾ, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್‌ಪುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಘಟನೆಗಳು ಸಂಭವಿಸಿವೆ.

ಔರಂಗಾಬಾದ್‌ನಲ್ಲಿ ಎಂಟು, ಕೈಮೂರ್‌ನಲ್ಲಿ ಏಳು, ಪಾಟ್ನಾ, ಸರನ್, ಪೂರ್ವ ಚಂಪಾರಣ್‌ನಲ್ಲಿ ತಲಾ ಐದು, ಪಶ್ಚಿಮ ಚಂಪಾರಣ್‌ನಲ್ಲಿ ಮೂರು, ರೋಹ್ತಾಸ್‌ನಲ್ಲಿ ಮೂವರು, ವೈಶಾಲಿ, ಸಮಸ್ತಿಪುರ್ ಮತ್ತು ಮುಜಾಫರ್‌ಪುರದಲ್ಲಿ ತಲಾ ಇಬ್ಬರು, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ರೂ.4 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...