Homeಕರೋನಾ ತಲ್ಲಣಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

"ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ.’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಹಠಾತ್ತನೆ ಘೋಷಿಸಲಾದ ರಾಷ್ಟ್ರವಾಪಿ ಲಾಕ್‌ಡೌನ್‌ನಿಂದ ತೀವ್ರ ತೊಂದರೆಗೆ ಒಳಗಾದವರು ಬಿಹಾರ, ಉತ್ತರಪ್ರದೇಶದ ವಲಸೆ ಕಾರ್ಮಿಕರು. ಆಗ ವಲಸೆ ಕಾರ್ಮಿಕರು, ಜನ ಸಾಮಾನ್ಯರು ಆಢಳಿತರೂಢ ಎನ್‌ಡಿಎ ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕಿದ್ದರು. ಆ ಸಮಯದಲ್ಲಿ ಇವರ ಸಹಾಯಕ್ಕೆ ನಿಂತು ತಮ್ಮ ತಮ್ಮ ಸ್ವಂತ ಸ್ಥಳಗಳಿಗೆ ಮರಳಲು ಸಹಾಯ ಮಾಡಿ ನಿಜ ಹೀರೋ ಎನಿಸಿಕೊಂಡಿದ್ದು ನಟ ಸೋನು ಸೂದ್. ಅವರೀಗ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ನಟ ಸೋನು ಸೂದ್ ವಿವರಿಸಿದ್ದು ಹೀಗೆ, “ಬಿಹಾರದ ಜನರು ಸರ್ಕಾರ ಲಾಕ್‌ಡೌನ್ ಸಮಯದಲ್ಲಿ ಅವರಿಗೆ ಏನು ಮಾಡಿತೋ ಅದರಲ್ಲೂ ಏನೋ ಒಳ್ಳೆಯದನ್ನೇ ನೋಡಿರಬೇಕು” ಎಂದು ಹೇಳಿದ್ದಾರೆ.

“ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ. ಜೊತೆಗೆ ತಮ್ಮ ಜೀವನಕ್ಕೆ ಭದ್ರ ಬುನಾದಿ ಬೇಕೆಂದು ಬಯಸುತ್ತಾರೆ” ಎಂದು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) 43 ಸ್ಥಾನಗಳನ್ನು ಗೆದ್ದಿದ್ದರೂ ಸಹ, ಮಿತ್ರಪಕ್ಷ ಬಿಜೆಪಿಯ 74 ಸ್ಥಾನಗಳೊಂದಿಗೆ, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)  125 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿದೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಿಂದ ಬಸ್ಸುಗಳನ್ನು ಬಾಡಿಗೆಗೆ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯ ವಲಸಿಗರು ಅದರಲ್ಲೂ ಮುಖ್ಯವಾಗಿ ಬಿಹಾರ ಮತ್ತು ಉತ್ತರ ಪ್ರದೇಶಕದ ಕಾರ್ಮಿಕರು ತಮ್ಮ ಊರಿಗೆ  ಮರಳಲು ಸೋನು ಸೂದ್ ಸಹಾಯ ಮಾಡಿದ್ದರು. “ನಾನು ಬಿಹಾರದ ಬಹಳಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ನೀವು ಶಿಕ್ಷಣ ಅಥವಾ ಮೂಲಸೌಕರ್ಯ ಸೌಲಭ್ಯಗಳ ಬಗ್ಗೆ ಮಾತನಾಡಿದರೇ ನಿಜಕ್ಕೂ ಅವರು ತೀರಾ ಕೆಟ್ಟ ಸ್ಥಿತಿಯಲ್ಲಿದ್ದಾರೆ” ಎಂದು ನಟ ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ತಿಳಿಸುತ್ತಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಯಾರು ಗೆದ್ದರು ಎಂಬುದು ಮುಖ್ಯವಲ್ಲ, ಐದು ವರ್ಷಗಳ ನಂತರ ನಾವು ಬೇರೆ ಬಿಹಾರವನ್ನು ಹೊಂದಿರಬೇಕು ಎಂಬುದು ಮುಖ್ಯ ಎಂದು ನಾನು ಭಾವಿಸುತ್ತೇನೆ ಮತ್ತು ನಂಬುತ್ತೇನೆ. ಜನರು ತಾವು ಆಯ್ಕೆ ಮಾಡಿದ  ಸರ್ಕಾರದ ಬಗ್ಗೆ ಅವರು ಹೆಮ್ಮೆ ಪಡಬೇಕು” ಎಂದು ತಿಳಿಸಿದರು.

ಕೊರೊನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ನೆರವಿಗೆ ನಿಂತ ಸೋನು ಸೂದ್ ಪ್ರಯತ್ನಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಲು ಲಾಕ್‌ಡೌನ್ ಸಮಯದಲ್ಲಿ ಟೋಲ್-ಫ್ರೀ ಸಹಾಯವಾಣಿಯನ್ನು ಸಹ ಪ್ರಾರಂಭಿಸಿದ್ದರು.


ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...