Homeಮುಖಪುಟಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಮಹಾ ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಬಜರಂಗದಳದ ದುಷ್ಕರ್ಮಿಗಳು “ಲವ್ ಜಿಹಾದ್” ಎಂಬ ವಿಷಯದಲ್ಲಿ ಬುಧವಾರ ಉದ್ರೇಕಕಾರಿ ಟ್ಯಾಬ್ಲೋವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಂಗೇರ್ ಪಟ್ಟಣದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ ಎಂದು ವರದಿಯಾಗಿದೆ. ಈ ವಿವಾದದ ತನಿಖೆಗೆ ಇಬ್ಬರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ವರದಿ ಹೇಳಿದೆ. ಬಿಹಾರ

ಕನಿಷ್ಠ 50 ಟ್ಯಾಬ್ಲೋಗಳನ್ನು ಒಳಗೊಂಡಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಅನ್ನು ಎತ್ತಿ ತೋರಿಸುವ ಟ್ಯಾಬ್ಲೋ ಇತ್ತು ಎಂದು ವರದಿಯಾಗಿದೆ. ವಿವಾದಿತ ಲವ್ ಜಿಹಾದ್ ಟ್ಯಾಬ್ಲೋದಲ್ಲಿ “ಘೋರ ಚಿತ್ರಗಳು” ಮತ್ತು “ಕೋಮುವಾದಿ” ಸಂದೇಶಗಳನ್ನು ಹೊಂದಿರುವ ವೃತ್ತಪತ್ರಿಕೆ ತುಣುಕುಗಳನ್ನು ಪ್ರದರ್ಶಿಲಾಗಿತ್ತು.

ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಹಾದುಹೋದ ನಂತರ, ಮೆರವಣಿಗೆಯು ಮಂಕೇಶ್ವರ ನಾಥ್ ಮಹಾದೇವ ದೇವಸ್ಥಾನದಲ್ಲಿ ಮುಕ್ತಾಯಗೊಂಡಿತು, ಅಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ತಮ್ಮ ಸಂಘಟನೆಯ ಕೃತ್ಯವನ್ನು ಮುಂಗೇರ್‌ನಲ್ಲಿ ಬಜರಂಗದಳ ಸಂಚಾಲಕ ಸೌರಭ್ ಎಸ್ ಸಂಪಣ್ಣ ಸಮರ್ಥಿಸಿಕೊಂಡಿದ್ದು, ಇದು “ಸಾಮಾಜಿಕ ಸಂದೇಶ”ವನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಯಾವುದೇ ಧರ್ಮವನ್ನು ಟ್ಯಾಬ್ಲೋದಲ್ಲಿ ಹೆಸರಿಸಲಾಗಿಲ್ಲ ಅಥವಾ ದಾಳಿ ಮಾಡಲಾಗಿಲ್ಲ. ಮದುವೆಯ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯದ ಕಡೆಗೆ ಜನರ ಗಮನ ಸೆಳೆಯುವುದು ನಮ್ಮ ಉದ್ದೇಶವಾಗಿತ್ತು.” ಎಂದು ಅವರು ಹೇಳಿದ್ದಾರೆ

ಆದಾಗ್ಯೂ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಅದರ ಮಿತ್ರ ಪಕ್ಷ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ಸಂಘಟಕರು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಎರಡು ಧಾರ್ಮಿಕ ನಂಬಿಕೆಗಳ ಸದಸ್ಯರ ನಡುವೆ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ನಡೆಸಲಾಗುತ್ತಿದೆ” ಎಂದು ಆರ್‌ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದ್ದಾರೆ.

ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ನಿತೀಶ್ ಕುಮಾರ್ ಸರ್ಕಾರವನ್ನು ವಿಪಕ್ಷಗಳು ಒತ್ತಾಯಿಸಿವೆ. “ಇಂತಹ ಘಟನೆಗಳನ್ನು ಸಹಿಸಬಾರದು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಮೃತ್ಯುಂಜಯ್ ತಿವಾರಿ ಅವರು ಹೇಳಿದ್ದಾರೆ. ಬಿಹಾರ

ಬಿಹಾರ ಕಾಂಗ್ರೆಸ್ ವಕ್ತಾರ ಜ್ಞಾನ್ ರಂಜನ್ ಗುಪ್ತಾ ಇದೇ ರೀತಿಯ ಆತಂಕಗಳನ್ನು ವ್ಯಕ್ತಪಡಿಸಿದ್ದು, “ಭಾರತದ ಸಂವಿಧಾನವು ಯಾವುದೇ ಧರ್ಮವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಕ್ರಮಣ ಮಾಡಲು ಯಾರಿಗೂ ಅನುಮತಿ ನೀಡುವುದಿಲ್ಲ. ಮೆರವಣಿಗೆಯಲ್ಲಿನ ಬಜರಂಗದಳದ ಪೋಸ್ಟರ್ ಕೆಟ್ಟ ಅಭಿರುಚಿಯಿಂದ ಕೂಡಿತ್ತು” ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಈ ವಿಷಯದ ಸೂಕ್ಷ್ಮತೆಯನ್ನು ಒಪ್ಪಿಕೊಂಡಿದ್ದು, ಆದರೆ ಟ್ಯಾಬ್ಲೋದಲ್ಲಿ ತೆಗೆದುಕೊಳ್ಳಲಾದ ವಿಧಾನವನ್ನು ಟೀಕಿಸಿದೆ. “ಲವ್ ಜಿಹಾದ್ ಬಹಳ ಕಳವಳಕಾರಿ ವಿಷಯವಾಗಿದೆ. ಆದರೆ ಅದರ ಸಾಮಾಜಿಕ ಸಂದೇಶವನ್ನು ಉತ್ತಮ ರೀತಿಯಲ್ಲಿ ತಿಳಿಸಬಹುದಿತ್ತು. ಕೆಲವು ರಕ್ತಸಿಕ್ತ ಚಿತ್ರಗಳ ಬಳಕೆಯನ್ನು ತಪ್ಪಿಸಬಹುದಿತ್ತು” ಎಂದು ಪಕ್ಷದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಈ ನಡುವೆ, ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಅಪರಿಚಿತ ವ್ಯಕ್ತಿಗಳು ಹಿಂದೂ ದೇವತೆಗಳ ವಿಗ್ರಹಗಳನ್ನು ದೇವಸ್ಥಾನದಿಂದ ಹೊರಗೆ ಎಸೆದು ಅರ್ಚಕರ ಗುಡಿಸಲಿಗೆ ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಗಣೇಶ ಮತ್ತು ಕಾರ್ತಿಕೇಯನ ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದ್ದು, ಪರಮಾನಂದಪುರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದ ಘಟನೆ ಬಗ್ಗೆ ತಿಳಿದು ಬಂದಿತ್ತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸದರ್) ರಾಮಕೃಷ್ಣ ಅವರು ಹೇಳಿದ್ದಾರೆ. ಬಿಹಾರ

ಯಾವುದೇ ಹೆಚ್ಚಿನ ಗಲಭೆಗಳನ್ನು ತಡೆಗಟ್ಟಲು, ಪ್ರದೇಶದಲ್ಲಿ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲಾಗಿದೆ ಮತ್ತು ಪೊಲೀಸ್ ಠಾಣೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನವಾಡ ಮತ್ತು ನಳಂದ ಜಿಲ್ಲೆಗಳಿಂದಲೂ ಕೋಮು ಉದ್ವಿಗ್ನತೆ ಘಟನೆಗಳು ವರದಿಯಾಗಿದ್ದು, ನಳಂದದಲ್ಲಿ, ಅಶಾಂತಿಗೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...