ಬಿಹಾರ| ಪಾರ್ಕಿಂಗ್ ವಿಚಾರಕ್ಕೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಐವರಿಗೆ ಗಾಯ

ಮದುವೆ ಸಮಾರಂಭದಲ್ಲಿ ಪಾರ್ಕಿಂಗ್ ವಿಚಾರವಾಗಿ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಗುಂಡೇಟಿಗೆ ಬಲಿಯಾಗಿರುವ ಘಟನೆ ಬಿಹಾರದ ಭೋಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಗಲಾಟೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ 9.30 ರ ಸುಮಾರಿಗೆ ಗರ್ಹಾನಿ ಪೊಲೀಸ್ ಠಾಣೆ ಪ್ರದೇಶದ ಲಹರ್ಪಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಮದುವೆ ಸಮಾರಂಭದಲ್ಲಿ ವಾಹನಗಳನ್ನು ನಿಲ್ಲಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದು, ಗುಂಡು ಹಾರಿಸಲಾಗಿದೆ ಎಂದು … Continue reading ಬಿಹಾರ| ಪಾರ್ಕಿಂಗ್ ವಿಚಾರಕ್ಕೆ ಮದುವೆ ಮನೆಯಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಐವರಿಗೆ ಗಾಯ