Homeಮುಖಪುಟಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ

ಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಆಧಾರ್ ಕಾರ್ಡ್‌ ಅನ್ನು ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ ಅನುಸಾರ, 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌  ಪರಿಗಣಿಸಲು ಬಿಹಾರ ಚುನಾವಣಾ ಅಧಿಕಾರಿಗೆ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸೂಚನೆ ನೀಡಿದೆ ಎಂದು ವರದಿಯಾಗಿದೆ.

ಆಧಾರ್ ಕಾರ್ಡನ್ನು ಗುರುತಿನ ಪುರಾವೆಯಾಗಿ ಮಾತ್ರ ಸ್ವೀಕರಿಸಲಾಗುತ್ತದೆ ಮತ್ತು ಬಳಸಲಾಗುತ್ತದೆ. ಆಧಾರ್ ಕಾಯ್ದೆಯ ಸೆಕ್ಷನ್ 9 ರ ಪ್ರಕಾರ ಅದು ಪೌರತ್ವದ ಪುರಾವೆ ಅಲ್ಲ ಎಂಬುವುದನ್ನು ಇಸಿಐ ಇದೇ ವೇಳೆ ಸ್ಪಷ್ಟಪಡಿಸಿದೆ.

“ಜನತಾ ಪ್ರಾತಿನಿಧ್ಯ ಕಾಯ್ದೆ 1950ರ ಸೆಕ್ಷನ್ 23(4) ಈಗಾಗಲೇ ವ್ಯಕ್ತಿಯ ಗುರುತನ್ನು ರುಜುವಾತು ಮಾಡಲು ಪರಿಗಣಿಸಲಾಗದ ದಾಖಲೆಗಳಲ್ಲಿ ಆಧಾರ್ ಕಾರ್ಡನ್ನೂ ಪಟ್ಟಿ ಮಾಡಿದೆ” ಎಂದು ಅದು ಇಸಿಐ ಹೇಳಿದೆ.

ತನ್ನ ಸೂಚನೆಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳು, ಚುನಾವಣಾ ಅಧಿಕಾರಿಗಳು ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳು ಸೇರಿದಂತೆ ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರಿಗೆ ಇಸಿಐ ತಿಳಿಸಿದೆ.

“ಈ ನಿರ್ದೇಶನಕ್ಕೆ ಅನುಗುಣವಾಗಿ ಆಧಾರ್ ಅನ್ನು ಅನುಸರಿಸದಿರುವುದು ಅಥವಾ ಸ್ವೀಕರಿಸಲು ನಿರಾಕರಿಸುವ ಯಾವುದೇ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಇಸಿಐ ಎಚ್ಚರಿಸಿದೆ.

ಸುದೀರ್ಘ ಕಾನೂನು ಸಮರದ ಬಳಿಕ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗೆ ದಾಖಲೆಯಾಗಿ ಆಧಾರ್ ಕಾರ್ಡನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 8ರಂದು ಆದೇಶ ನೀಡಿದೆ. ಇದು ಬಿಹಾರದ ಮತದಾರರಿಗೆ ಸಿಕ್ಕ ದೊಡ್ಡ ಗೆಲುವು ಎಂದೇ ಪರಿಗಣಿಸಲಾಗಿದೆ.

ಮತದಾರರ ಪಟ್ಟಿಯ ಪರಿಷ್ಕರಣೆಗೆ ಈ ಹಿಂದೆ 11 ದಾಖಲೆಗಳನ್ನು ಚುನಾವಣಾ ಆಯೋಗ ಪಟ್ಟಿ ಮಾಡಿತ್ತು. ಈಗ 12ನೇ ದಾಖಲೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಸೂಚಿಸಿದೆ.

ನೇಪಾಳದ ನೆಪೋ ಕಿಡ್ಸ್ vs ಯುವ ಶಕ್ತಿ: ವ್ಯವಸ್ಥೆ ಬದಲಾವಣೆಯ ಹೋರಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...