Homeಮುಖಪುಟಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

- Advertisement -
- Advertisement -

ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಪಾಕಿಸ್ತಾನ ಹೆಸರಿನ ಒಂದು ಗ್ರಾಮವಿದೆ.  ಗ್ರಾಮದ ಜನರಿಗೆ ಗ್ರಾಮದ ಹೆಸರು ಇರಿಸುಮುರಿಸು ಉಂಟಾಗುವಂತೆ ಮಾಡಿದೆ.  ಹೀಗಾಗಿ ಗ್ರಾಮದ ಹೆಸರನ್ನು ಬದಲಾಯಿಸಿ ಬಿರ್ಸಾ ಎಂದು ಮರು ನಾಮಕರಣ ಮಾಡುವಂತೆ ಗ್ರಾಮದ ಜನತೆ ಪಟ್ಟು ಹಿಡಿದಿದ್ದಾರೆ.

ಗ್ರಾಮದ ಜನರ ಪ್ರಕಾರ, ಹಳ್ಳಿಯ ಹೆಸರು ಹೇಳಲು ನಾಚಿಕೆಯಾಗುತ್ತದೆ.  ಗ್ರಾಮದ ಹೆಸರು ಪಾಕಿಸ್ತಾನ ಎಂದು ಹೇಳಲು ಮುಜುಗರವಾಗುತ್ತದೆ.  ಹೀಗಾಗಿ ಗ್ರಾಮದ ಹೆಸರನ್ನು ಬದಲಾಯಿಸಿ, ಬಿರ್ಸಾ ಎಂದು ಮರುನಾಮಕರಣ ಮಾಡಲು ಜಿಲ್ಲಾಧಿಕಾರಿಯವರಿಗೆ ಸಾಮೂಹಿಕವಾಗಿ ಮನವಿ ಪತ್ರ ಬರೆದು ಸಲ್ಲಿಸಿದ್ದೇವೆ.  ಆದರೆ ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಮಾತನಾಡಿ, ಮನವಿ ಪತ್ರ ಕೈಗೆ ಬಂದಿಲ್ಲ. ಗ್ರಾಮಸ್ಥರ ಇಚ್ಛೆಯನುಸಾರ ಗ್ರಾಮದ ಹೆಸರು ಬದಲಾಯಿಸುವುದಾಗಿ ಹೇಳಿದರು.

ಗ್ರಾಮಸ್ಥರು ಹೇಳುವಂತೆ, ಊರಿನ ಹೆಸರು ಪಾಕಿಸ್ತಾನ ಆಗಿರುವುದರಿಂದ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ವಯಸ್ಸಿಗೆ ಬಂದ ಗಂಡು-ಹೆಣ್ಣು ಮಕ್ಕಳಿಗೆ ಮದುವೆಯಾಗುತ್ತಿಲ್ಲ. ಸಂಬಂಧಗಳು ಬರುತ್ತಿಲ್ಲ. ಆದ್ದರಿಂದ ಊರಿನ ಹೆಸರು ಬದಲಾಯಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇನ್ನು ಪೂರ್ಣಿಯಾ ಜಿಲ್ಲೆಯಿಂದ 35 ಕಿ.ಮೀ ದೂರದಲ್ಲಿ ಪಾಕಿಸ್ತಾನ ಗ್ರಾಮವಿದೆ. ಇಲ್ಲಿ ಕೇವಲ ಆದಿವಾಸಿ ಜನರೇ ನೆಲೆಸಿದ್ದು, ಪಾಕಿಸ್ತಾನ ಹೆಸರನ್ನು ಬದಲಾಯಿಸಿ, ಆದಿವಾಸಿಗಳ ದೇವರಾದ ಬಿರ್ಸಾ ಮುಂಡಾ ಹೆಸರು ಮರುನಾಮಕರಣ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ.

ಪತ್ರದಲ್ಲಿ ಪಾಕಿಸ್ತಾನ ಭಾರತದ ಮೇಲೆ ಭಯೋತ್ಪಾದಕರನ್ನು ಬಿಟ್ಟು, ರಕ್ತಪಾತಕ್ಕೆ ಕುಮ್ಮಕ್ಕು ನೀಡುತ್ತಿದೆ. ಭಾರತದ ವಿರುದ್ಧ ವಿಷಕಾರುತ್ತಿರುವ ಪಾಕಿಸ್ತಾನ ಹೆಸರನ್ನು ಗ್ರಾಮದಿಂದ ತೆಗೆದು ಹಾಕಿ ಬಿರ್ಸಾ ಮುಂಡಾ ಎಂದು ಪುನರ್ ನಾಮಕರಣ ಮಾಡುವಂತೆ ಉಲ್ಲೇಖಿಸಿದ್ದಾರೆ.

ಶ್ರೀನಗರ ಬಿಡಿಎ ನಂದನ್ ಕುಮಾರ್ ಮನವಿ ಪತ್ರ ಸ್ವೀಕರಿಸಿ, ಗ್ರಾಮದ ಹೆಸರು ಬದಲಾಯಿಸುವಂತೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದ್ದಾರೆ. ಆದರೆ ಗ್ರಾಮದ ಹೆಸರು ಬದಲಾಯಿಸುವ ಕಾರ್ಯ ನಮ್ಮ ಕಾರ್ಯಕ್ಷೇತ್ರದಡಿ ಬರುವುದಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ರವಾನಿಸುವುದಾಗಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...