Homeಮುಖಪುಟಬಿಹಾರ | 'ವಲಸೆ ನಿಲ್ಲಿಸಿ, ಉದ್ಯೋಗ ನೀಡಿ' ಪಾದಯಾತ್ರೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ

ಬಿಹಾರ | ‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’ ಪಾದಯಾತ್ರೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ

- Advertisement -
- Advertisement -

ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ‘ಪಲಾಯನ್ ರೋಕೋ, ನೌಕ್ರಿ ದೋ’ (ವಲಸೆ ನಿಲ್ಲಿಸಿ, ಉದ್ಯೋಗ ನೀಡಿ) ಪಾದಯಾತ್ರೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಸೇರಿಕೊಂಡಿದ್ದಾರೆ. ಎನ್‌ಎಸ್‌ಯುಐ ರಾಷ್ಟ್ರೀಯ ಉಸ್ತುವಾರಿ ಕನ್ಹಯ್ಯಾ ಕುಮಾರ್ ನೇತೃತ್ವದಲ್ಲಿ ಈ ಯಾತ್ರೆ ಆರಂಭವಾಗಿದೆ. ಬಿಹಾರ

ಬೇಗುಸರಾಯ್ ಪಟ್ಟಣದಲ್ಲಿ ನಡೆದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಕನ್ಹಯ್ಯಾ ಕುಮಾರ್ ಮತ್ತು ಬಿಹಾರ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಜೇಶ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮತ್ತು ಅದರ ವಿದ್ಯಾರ್ಥಿ ಮತ್ತು ಯುವ ಘಟಕಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಕ್ಷಣಾ ಪಡೆಗಳಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. ಬಿಹಾರ

ಪಾಟ್ನಾದಿಂದ ಬೇಗುಸರಾಯ್‌ಗೆ ಪಾದಯಾತ್ರೆಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಜಯ ಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜೇಶ್ ಕುಮಾರ್ ಮತ್ತು ಇತರ ಹಿರಿಯ ಪಕ್ಷದ ನಾಯಕರು ಬರಮಾಡಿಕೊಂಡರು.

ಚುನಾವಣೆ ನಡೆಯಲಿರುವ ಬಿಹಾರಕ್ಕೆ ಈ ವರ್ಷದ  ಜನವರಿಯಿಂದ ರಾಹುಲ್ ಗಾಂಧಿ ಅವರ ಮೂರನೇ ಭೇಟಿ ಇದಾಗಿದೆ. ಬೇಗುಸರಾಯ್ ಕನ್ಹಯ್ಯಾ ಅವರ ತವರು ಜಿಲ್ಲೆಯಾಗಿದ್ದು, ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೇಗುಸರಾಯ್ ಜಿಲ್ಲೆಯ ವಿಧಾನಸಭಾ ಯಾವುದಾದರೂ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿದ ನಂತರ ಪಾಟ್ನಾದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಮತ್ತು ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ರಾಹುಲ್ ಗಾಂಧಿ ಸೋಮವಾರ ಬೇಗುಸರಾಯ್‌ನಲ್ಲಿ ನಡೆಯಲಿರುವ ‘ಪಲಾಯನ್ ರೋಕೋ, ನೌಕ್ರಿ ದೋ’ ಯಾತ್ರೆಯಲ್ಲಿ ಭಾಗವಹಿಸುವಂತೆ ಯುವಕರಿಗೆ ಮನವಿ ಮಾಡಿದ್ದಾರೆ. ಬಿಳಿ ಟಿ-ಶರ್ಟ್‌ಗಳನ್ನು ಧರಿಸಿ ಯಾತ್ರೆಯಲ್ಲಿ ಭಾಗವಹಿಸುವಂತೆ ಅವರು ಕೇಳಿಕೊಂಡಿದ್ದರು.

“ಬಿಹಾರದ ಯುವ ಸ್ನೇಹಿತರೇ, ನಾನು ಏಪ್ರಿಲ್ 7 ರಂದು ‘ಪಲಾಯನ್ ರೋಕೋ, ನೌಕ್ರಿ ದೋ’ ಮೆರವಣಿಗೆಯಲ್ಲಿ ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯಲು ಬೇಗುಸರಾಯ್‌ಗೆ ಬರುತ್ತಿದ್ದೇನೆ. ಉದ್ಯೋಗ ಹುಡುಕಿಕೊಂಡು ಇತರ ರಾಜ್ಯಗಳಿಗೆ ವಲಸೆ ಹೋಗಬೇಕಾದ ಬಿಹಾರದ ಯುವಕರ ದುಃಸ್ಥಿತಿಯನ್ನು ಜಗತ್ತಿಗೆ ತೋರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

“ನೀವೂ ಬಿಳಿ ಟೀ ಶರ್ಟ್ ಧರಿಸಿ ಬನ್ನಿ, ಪ್ರಶ್ನೆಗಳನ್ನು ಕೇಳಿ ಮತ್ತು ನಿಮ್ಮ ಹಕ್ಕುಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಮತ್ತು ಅವರನ್ನು ಅಧಿಕಾರದಿಂದ ಕಿತ್ತುಹಾಕಲು ನಿಮ್ಮ ಧ್ವನಿಯನ್ನು ಎತ್ತಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜೊತೆಗೆ ಬಿಳಿ ಟೀ ಶರ್ಟ್ ಚಳವಳಿಗೆ ಸೇರಲು ಅವರು ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

ಬಿಹಾರವನ್ನು ಅವಕಾಶಗಳ ರಾಜ್ಯವನ್ನಾಗಿ ಮಾಡುವಂತೆ ಅವರು ಇದೇ ವೇಳೆ ಯುವಕರಿಗೆ ಮನವಿ ಮಾಡಿದ್ದಾರೆ.

ಇದರ ನಂತರ ರಾಹುಲ್ ಗಾಂಧಿ ಅವರು ರಾಜ್ಯದ ರಾಜಧಾನಿಯಲ್ಲಿ ‘ಸಂವಿಧಾನ ಉಳಿಸಿ ಸಮ್ಮೇಳನ’ ಮತ್ತು ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ವಲಸೆ ಮತ್ತು ನಿರುದ್ಯೋಗವನ್ನು ಎತ್ತಿ ತೋರಿಸಲು ಮಾರ್ಚ್ 16 ರಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ಮಹಾತ್ಮ ಗಾಂಧಿಯವರ ಭಿತಿಹರ್ವ ಆಶ್ರಮದಿಂದ ಕಾಂಗ್ರೆಸ್ ‘ಪಳಯನ್ ರೋಕೊ, ನೌಕ್ರಿ ದೋ’ ಮೆರವಣಿಗೆಯನ್ನು ಪ್ರಾರಂಭಿಸಿತು. ಕನ್ಹಯ್ಯಾ ಅವರನ್ನು ಬಿಹಾರ ರಾಜಕೀಯದ ಮುನ್ನಲೆಗೆ ತರುವ ಮೂಲಕ, ಕಾಂಗ್ರೆಸ್ ಪಕ್ಷವೂ ಲಾಲು ಪ್ರಸಾದ್ ನೇತೃತ್ವದ ತನ್ನ ಮಿತ್ರ ಪಕ್ಷವಾದ ಆರ್‌ಜೆಡಿಯ ನೆರಳಿನಿಂದ ಹೊರಬರಲು ಪ್ರಯತ್ನಿಸುತ್ತಿದೆ.

ವಾಸ್ತವವಾಗಿ ಕಾಂಗ್ರೆಸ್ ಇಬಿಸಿ ಮತ್ತು ದಲಿತರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂದು ವರದಿಗಳು ಸೂಚಿಸಿವೆ. ಅದರಲ್ಲೂ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದ ಮೂಲಕ ಮುಸ್ಲಿಮರನ್ನು ತಲುಪಲು ಪ್ರಯತ್ನಿಸುತ್ತಿದೆಯಾದರೂ, ಪಕ್ಷದ ಮುಖ್ಯ ಗಮನವು ಇಬಿಸಿಗಳ ಮೇಲೆಯಾಗಿದೆ. ರಾಜ್ಯದ ಜನಸಂಖ್ಯೆಯ ಸುಮಾರು 36.1% ರಷ್ಟು ಇಬಿಸಿಗಳಿದ್ದಾರೆ. ಪಕ್ಷದೊಳಗೆ ಇಬಿಸಿ ಸಮುದಾಯಗಳಿಂದ ಹೆಚ್ಚಿನ ನಾಯಕರನ್ನು ಉತ್ತೇಜಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೆ ಕಾಂಗ್ರೆಸ್ ತನ್ನ ಜಿಲ್ಲಾ ಘಟಕಗಳನ್ನು ಪರಿಷ್ಕರಿಸಿತ್ತು. “ಜಾತಿ ಸಂಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಜಿಲ್ಲಾ ಮುಖ್ಯಸ್ಥರ ಆಯ್ಕೆಯನ್ನು ಮಾಡಲಾಯಿತು” ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...