Homeಮುಖಪುಟ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಮೈತ್ರಿಕೂಟದ ಪಕ್ಷಗಳಾದ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮತ್ತು ಎಡ ಪಕ್ಷಗಳು ಬಿಹಾರ ವಿಧಾನಸಭಾ ಚುಣಾವಣೆಯ ಪ್ರಣಾಳಿಕೆ ಬಿಡುಗಡೆಗೊಳಿಸಿದೆ

- Advertisement -
- Advertisement -

ಬಿಹಾರದ ”ಮಹಾಘಟಬಂಧನ್” ಮೈತ್ರಿ ಪಕ್ಷಗಳಾದ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮತ್ತು ಎಡ ಪಕ್ಷಗಳು ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಗೊಳಿಸಿದೆ. ಪ್ರಣಾಳಿಕೆಯೂ ಕೃಷಿ ಕಾನೂನುಗಳು ಮತ್ತು ಉದ್ಯೋಗಗಳ ಮೇಲೆ ಕೇಂದ್ರೀಕರಿಸಿದೆ.

ಮೈತ್ರಿಕೂಟವು ಚುನಾವಣೆಯಲ್ಲಿ ಗೆದ್ದರೆ, ಆರ್ಜೆಡಿಯ ತೇಜಶ್ವಿ ಯಾದವ್ ಅವರ ನೇತೃತ್ವದಲ್ಲಿ ಕಳೆದ ತಿಂಗಳು ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ವಿರೋಧಿ ಕಾನೂನುಗಳನ್ನು ಮೊದಲ ವಿಧಾನಸಭಾ ಅಧಿವೇಶನದಲ್ಲಿಯೇ ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಜೆಪಿಯನ್ನು ತೀವ್ರ ತರಾಟೆಗೆ ಪಡೆದ ಸುರ್ಜೆವಾಲಾ, “ಬಿಜೆಪಿ ಮೂರು ಮೈತ್ರಿಗಳ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ, ಒಂದು ಜನತಾದಳ (ಯುನೈಟೆಡ್) ನೊಂದಿಗೆ, ಇನ್ನೊಂದು ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಯೊಂದಿಗೆ ಮತ್ತು ಮೂರನೆಯದು ’ಓವೈಸಿ ಸಾಹೇಬ್’ ನೊಂದಿಗೆ” ಎಂದು ಹೇಳಿದ್ದಾರೆ.

“ಮಹಾಘಟಬಂಧನ್‌‌” ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಶ್ವಿ ಯಾದವ್ ಮಾತನಾಡಿ, ಪ್ರವಾಹದಿಂದ ಎಷ್ಟು ಜನರು ಹಾನಿಗೊಳಗಾಗಿದ್ದಾರೆಂದು ನೋಡಲು ಕೇಂದ್ರ ತಂಡವು ಇಲ್ಲಿಯವರೆಗೆ ರಾಜ್ಯಕ್ಕೆ ಭೇಟಿ ನೀಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಈ ವಾರದ ಆರಂಭದಲ್ಲಿ, “ಮಹಾಘಟಬಂಧನ್” ಮೈತ್ರಿಕೂಟದ ಪಕ್ಷಗಳು ಬಿಹಾರ ವಿಧಾನಸಭೆಯ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದವು. ಬಿಹಾರದಲ್ಲಿ ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ನಡೆಯಲಿದ್ದು, ಫಲಿತಾಂಶಗಳನ್ನು ನವೆಂಬರ್ 10 ರಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...