Homeಮುಖಪುಟಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ಮೇವಾಲಾಲ್ ಚೌಧರಿ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮ ನಡೆದಿವೆ ಎಂದು 2017ರಲ್ಲಿ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

- Advertisement -
- Advertisement -

ಧ್ವಜಾರೋಹಣ ಸಮಾರಂಭದಲ್ಲಿ ರಾಷ್ಟ್ರಗೀತೆಯ ಸಾಲುಗಳನ್ನು ಹೇಳಲು ಹೆಣಗಾಡುತ್ತಿರುವ ಬಿಹಾರದ ನೂತನ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರ ವಿಡಿಯೋವನ್ನು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಈಗಾಗಲೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮೇವಲಾಲ್ ಚೌಧರಿಯನ್ನು ತಮ್ಮ ಸಂಪುಟದಲ್ಲಿ ಸಚಿವರನ್ನಾಗಿ ನೇಮಿಸಿದ್ದಕ್ಕಾಗಿ ಜೆಡಿಯು ಹಲವಾರು ಟೀಕೆಗಳನ್ನು ಎದುರಿಸುತ್ತಿದೆ. ಇದರ ಜೊತೆಗೆ ಈ ವಿಡಿಯೋ ಕೂಡ ಅವರ ಅರ್ಹತೆಯನ್ನು ಪ್ರಶ್ನಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಈ ಘಟನೆಯನ್ನು ಇಟ್ಟುಕೊಂಡು ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಬಿಹಾರ: ಕೇವಲ 40 ಸ್ಥಾನ ಪಡೆದ ಜನಾದೇಶವಿಲ್ಲದವರು ಹೇಗೆ ಸಿಎಂ ಆಗುತ್ತಾರೆ?- RJD ಪ್ರಶ್ನೆ

ಆರ್‌ಜೆಡಿ ಹಂಚಿಕೊಂಡಿರುವ ವೀಡಿಯೋದಲ್ಲಿ, ಧ್ವಜಾರೋಹಣ ಸಮಾರಂಭದಲ್ಲಿ ನೂತನ ಶಿಕ್ಷಣ ಸಚಿವರು ರಾಷ್ಟ್ರಗೀತೆಯ ಸಾಲುಗಳನ್ನು ಮರೆಯುತ್ತಿರುವುದು ಮತ್ತು ತಪ್ಪಾದ ಸಾಲುಗಳನ್ನು ಹಾಡುತ್ತಿರುವುದನ್ನು ನೋಡಬಹುದು.

“ಹಲವಾರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಹಾರ ಶಿಕ್ಷಣ ಸಚಿವ ಮೇವಲಾಲ್ ಚೌಧರಿ ಅವರಿಗೆ ರಾಷ್ಟ್ರಗೀತೆ ಕೂಡ ತಿಳಿದಿಲ್ಲ. ನಿತೀಶ್ ಕುಮಾರ್ ಜೀ, ಸ್ವಲ್ಪವಾದರೂ ಮಾರ್ಯಾದೆ ಉಳಿದಿದೆಯೇ? ಆತ್ಮಸಾಕ್ಷಿಯು ಎಲ್ಲಿ ಹೋಯಿತು?” ಎಂದು ಆರ್‌ಜೆಡಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.

38 ಸೆಕೆಂಡುಗಳ ಈ ವಿಡಿಯೋದ ಕೊನೆಯಲ್ಲಿ, ಅವರು “ಭಾರತ್ ಮಾತಾ ಕಿ ಜೈ” ಮತ್ತು “ವಂದೆ” ಎಂದರೇ ಮಕ್ಕಳು “ಮಾತರಂ” ಎಂದು ಹೇಳುತ್ತಿದ್ದಾರೆ. ಆದರೆ, ಭಾರತದ ಜನಗಣಮನ ರಾಷ್ಟ್ರಗೀತೆಯನ್ನು 52 ಸೆಕೆಂಡುಗಳಲ್ಲಿ ಹಾಡಬೇಕಾಗಿದೆ.

ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು.

ಆದರೂ, ಮೇವಾಲಾಲ್ ಚೌಧರಿ ಅವರು ಪ್ರಾಧ್ಯಾಪಕ ಮತ್ತು ಕಿರಿಯ ವಿಜ್ಞಾನಿಗಳ ಹುದ್ದೆಗಳ ನೇಮಕಾತಿಗಳಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿದ್ದಾರೆ.

ಬಿಹಾರ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ನಿತೀಶ್ ಕುಮಾರ್ “ಅಪರಾಧಿಗಳನ್ನು” ನೇಮಕ ಮಾಡಿದ್ದಾರೆ ಎಂದು ಸರಣಿ ಟ್ವೀಟ್‌ಗಳಲ್ಲಿ ರಾಷ್ಟ್ರೀಯ ಜನತಾದಳದ ತೇಜಶ್ವಿ ಯಾದವ್ ಆರೋಪಿಸಿದ್ದಾರೆ.


ಇದನ್ನೂ ಓದಿ: ಬಿಹಾರ ಮಹಾಘಟಬಂಧನ್‌ನಲ್ಲಿ ಬಿರುಕು: ಚುನಾವಣೆಯ ಸಮಯದಲ್ಲಿ ರಾಹುಲ್ ಪಿಕ್‌ನಿಕ್‌ನಲ್ಲಿದ್ದರು ಎಂದ RJD ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...