Homeಕರ್ನಾಟಕಮಂಡ್ಯ| ಪೊಲೀಸರು ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿದ ಬೈಕ್‌; 3 ವರ್ಷದ ಮಗು ಸಾವು

ಮಂಡ್ಯ| ಪೊಲೀಸರು ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿದ ಬೈಕ್‌; 3 ವರ್ಷದ ಮಗು ಸಾವು

- Advertisement -
- Advertisement -

ಟ್ರಾಫಿಕ್ ಪೊಲೀಸರು ಬೈಕ್ ಅಡ್ಡಗಟ್ಟಿದ್ದರಿಂದ ಸವಾರ ಬೆದರಿದ್ದು, ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಭಾನುವಾರ ನಡೆದಿದೆ.

ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ ಎಂದು ಪೋಷಕರು ಹಾಗೂ ಸ್ಥಳೀಯರು ಆರೋಪ ಮಾಡಿದ್ದಾರೆ. ಮಗು ಸತ್ತಿರುವ ಘಟನೆಯು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಗ್ರಾಮದ ಅಶೋಕ್ ಮತ್ತು ವಾಣಿ ಎಂಬುವವರು ಮೂರು ವರ್ಷದ ಹೃತೀಕ್ಷಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸುವುದಕ್ಕಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಬರುತ್ತಿದ್ದರು. ಇದೇ ಸಂದರ್ಭದಲ್ಲಿ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದರು. ಹಠಾತ್ ಆಗಿ ಪೊಲೀಸರು ಬೈಕ್‌ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ಅಪಘಾತದ ಬಳಿಕ ಬಾಲಕಿ ಹೃತೀಕ್ಷ ತಲೆಯ ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಇದರಿಂದ ಆಕೆಯ ತಲೆಗೆ ಭಾರೀ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಾಳೆ.

ಏನಾಗುತ್ತಿದೆ ಎಂದು ಅರಿವಾಗುವ ಮೊದಲೇ ಮಗಳ ಮರಣದಿಂದ ಆಘಾತಕ್ಕೊಳಗಾದ ಪೋಷಕರು, ನಡುರಸ್ತೆಯಲ್ಲೇ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಅವರ ದುಃಖದ ದೃಶ್ಯ ಅಲ್ಲಿ ನೆರೆದಿದ್ದವರ ಕಣ್ಣು ನೀರಾಗುವಂತೆ ಮಾಡಿತ್ತು.

ಮೃತ ಮಗು ಹೃತೀಕ್ಷ

ಮಗಳ ಜೀವ ಹೋಗಿದ್ದಕ್ಕೆ ಪೊಲೀಸರೇ ಕಾರಣ: ಮೃತ ಬಾಲಕಿ ತಂದೆ ಆಕ್ರೋಶ

ಪೊಲೀಸರು ಗಾಡಿ ಅಡ್ಡ ಹಾಕಿದಾಗ, ನಾವು ಅರ್ಜೆಂಟ್​ ಅಲ್ಲಿ ಆಸ್ಪತ್ರೆಗೆ ಹೊರಟೆವು. ಆದರೆ, ಅವರು ನನ್ನ ಬೈಕ್ ಚಾಲನೆ ಮಾಡಲು ಅವಕಾಶ ಕೊಡಲಿಲ್ಲ. ಅವರು ಇದ್ದಕ್ಕಿಂದ್ದಂತಯೇ ಗಾಡಿ ಅಡ್ಡ ಹಾಕಿದ ಪರಿಣಾಮ ನಮ್ಮ ಬೈಕ್ ಸ್ಕಿಡ್ ಆಗಿದೆ. ಬೈಕ್‌ನಿಂದ ಮಗು ಬೀಳುತ್ತಿದ್ದಂತೆಯೇ ಬೇರೆ ವಾಹನ ಬಂದು ಪಾಪು ಮೇಲೆ ಹತ್ತಿದೆ. ನನ್ನ ಮಗಳ ಜೀವ ತಿನ್ನೋಕೆ ಇವರೇ ಕಾರಣ ಸ್ವಾಮಿ. ಅವರಿಗೆ ಬ್ಯಾಂಡೇಜ್ ಹಾಕಿದ್ದೂ ಕಾಣಿಸಿಲ್ವಾ? ಇವರ ದುಡ್ಡನ್ನು ತಿಂದು ಹೋಗ್ತೀವಾ? ನನ್ನ ಮಗಳಿಗೆ ಪರಿಹಾರ ಕೊಡ್ತಾರಂತೆ. ನಾನೇ ಹತ್ತು ಲಕ್ಷ ಕೊಡ್ತೀನಿ; ನೀವು ನನ್ನ ಮಗಳ ತಂದು ಕೊಡ್ತೀರಾ? ನೀವು ನನ್ನ ಮಗಳನ್ನು ತಂದು ಕೊಡ್ತೀರಾ ಎಂದು ಕಣ್ಣೀರಿಟ್ಟಿದ್ದಾರೆ.

ಎರಡು ತಿಂಗಳ ಬಳಿಕ 18 ಜನ ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...