Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...