Homeಮುಖಪುಟಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ; ಬಿಜೆಪಿ ಸಂಸದ ಮನೋಜ್ ತಿವಾರಿಗೆ ದಂಡ

ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ; ಬಿಜೆಪಿ ಸಂಸದ ಮನೋಜ್ ತಿವಾರಿಗೆ ದಂಡ

- Advertisement -
- Advertisement -

ಹರ್ ಘರ್ ತಿರಂಗ (ಮನೆ ಮನೆಗೆ ಧ್ವಜ) ಜಾಥಾದಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡಿದ ಆರೋಪದ ಮೇಲೆ ಬಿಜೆಪಿ ಎಂಪಿ ಮನೋಜ್ ತಿವಾರಿಗೆ ದೆಹಲಿ ಪೊಲೀಸರು ದಂಡ ವಿಧಿಸಿದ್ದಾರೆ. ಬುಧವಾರ ಕೆಂಪು ಕೋಟೆ ಬಳಿ ನಡೆದ ಬೈಕ್ ರ್ಯಾಲಿಯಲ್ಲಿ ಅವರು ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸರ್ ಚಲನ್ ಕಳಿಸಿದ್ದಾರೆ.

ಘಟನೆಯ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ತಿವಾರಿ ಸುರಕ್ಷತೆ ಪಾಲಿಸದೇ ಇದ್ದುದ್ದಕ್ಕೆ ಕ್ಷಮೆಯಾಚಿಸಿ, ದಂಡ ಕಟ್ಟುವುದಾಗಿ ತಿಳಿಸಿದ್ದಾರೆ.

“ಇಂದು ಕೆಂಪು ಕೋಟೆಯ ಬಳಿ ಹೆಲ್ಮೆಟ್ ಧರಿಸದಿದ್ದಕ್ಕೆ ಕ್ಷಮಿಸಿ. ನಾನು ದೆಹಲಿ ಪೊಲೀಸರ ದಂಡದ ಚಲನ್ ಪಾವತಿಸುತ್ತೇನೆ. ನೀವೆಲ್ಲರೂ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಬೇಡಿ ಎಂದು ಮನವಿ ಮಾಡುತ್ತೇನೆ” ಎಂದು ಮನೋಜ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಹೆಲ್ಮೆಟ್, ಲೈಸೆನ್ಸ್, ನೋಂದಣಿ ಮತ್ತು ಮಾಲಿನ್ಯ ಪ್ರಮಾಣಪತ್ರವಿಲ್ಲದೆ ಬಿಜೆಪಿ ಮುಖಂಡ ಮೋಟಾರ್ ಸೈಕಲ್ ಚಾಲನೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ; ನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...