Homeಮುಖಪುಟಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

ಬೈಎಲೆಕ್ಷನ್‌: ಜೆಡಿಎಸ್‌‌ನಿಂದ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕೆ; ಕಾಂಗ್ರೆಸ್‌, ಬಿಜೆಪಿ ಟಿಕೆಟ್‌ ಯಾರಿಗೆ?

- Advertisement -
- Advertisement -

ಬೆಂಗಳೂರು: ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಜೆಡಿಎಸ್‌ ಆಯ್ಕೆ ಮಾಡಿದೆ.

ನಾಜಿಯಾ ಶಕೀಲಾ ಅಂಗಡಿ ಅವರು ಎಂ.ಎ. ಬಿ.ಇಡಿ ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

“ಅನೇಕ ವರ್ಷಗಳಿಂದ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ. ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು” ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಶಕೀಲಾ ಅಂಗಡಿ

ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯನ್ನಾಗಿ ಬಿ.ಇ. ಎಂ.ಟೆಕ್‌‌ ಪದವೀಧರರಾಗಿರುವ ನಿಯಾಜ್ ಶೇಕ್ ಅವರನ್ನು ಎಚ್.ಡಿ.ಕುಮಾರಸ್ವಾಮಿ ಅವರು ಆಯ್ಕೆ ಮಾಡಿದ್ದಾರೆ.

ನಿಯಾಜ್ ಶೇಕ್

ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ.

ಬಿಜೆಪಿಯ ಅಭ್ಯರ್ಥಿ ಯಾರು?: ಸಿಂದಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾನಗಲ್‌ ಕ್ಷೇತ್ರಕ್ಕೆ ಗದಗ ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಉದಾಸಿ ಅವರನ್ನು ಕಣಕ್ಕಿಳಿಸಲಾಗುವುದು ಎನ್ನಲಾಗುತ್ತಿದೆ.

ಕಾಂಗ್ರೆಸ್‌ನಲ್ಲಿ ಬೆಳವಣಿಗೆ ಏನು?: ಹಾನಗಲ್ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಶೀಲ್ದಾರ ಸೇರಿದಂತೆ ಇನ್ನು ಆನೇಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಆರ್‌.ಧ್ರುವನಾರಾಯಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು (ಅ.2) ಸಭೆ ನಡೆದಿದೆ. ಸೆಪ್ಟೆಂಬರ್‌ 28ರಂದೇ ಕಾಂಗ್ರೆಸ್‌, ಸಿಂದಗಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅಶೋಕ್ ‌ಮನಗೂಳಿ‌ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಯಾರೆಂಬುದು ಇಂದು ಅಥವಾ ನಾಳೆ ಕಾಂಗ್ರೆಸ್‌ ಘೋಷಿಸುವ ಸಾಧ್ಯತೆ ಇದೆ.

ಅಶೋಕ್ ‌ಮನಗೂಳಿ‌

ಸಿಂಧಗಿಯ ಜೆಡಿಎಸ್‌ ಶಾಸಕ  ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ ಶಾಸಕ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ. 2018ರ ಚುನಾವಣೆಯಲ್ಲಿ ಎಂ.ಸಿ.ಮನಗೂಳಿ ಅವರು 70,865 ಮತಗಳನ್ನು ಪಡೆದು ಜಯಗಳಿಸಿದ್ದರು. ಪ್ರತಿಸ್ಪರ್ಧಿ ಬಿಜೆಪಿಯ ರಮೇಶ ಭೂಸನೂರ 61,560 ಮತಗಳನ್ನು ಪಡೆದು, 9305 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಎಂ.ಉದಾಸಿ 80,529 ಮತಗಳನ್ನು ಪಡೆದು ಜಯಭೇರಿ ಭಾರಿಸಿದ್ದರು. ಅವರ ವಿರುದ್ಧ ಕಾಂಗ್ರೆಸ್‌ನ ಮಾನೆ ಶ್ರೀನಿವಾಸ್‌ 74,015 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...