Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ತಡರಾತ್ರಿ ಜೈಲು ಅಧಿಕಾರಿಗಳಿಗೆ ಶರಣಾದ ಎಲ್ಲಾ11 ಅಪರಾಧಿಗಳು

ಬಿಲ್ಕಿಸ್ ಬಾನು ಪ್ರಕರಣ: ತಡರಾತ್ರಿ ಜೈಲು ಅಧಿಕಾರಿಗಳಿಗೆ ಶರಣಾದ ಎಲ್ಲಾ11 ಅಪರಾಧಿಗಳು

- Advertisement -
- Advertisement -

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಸುಪ್ರೀಂ ಕೋರ್ಟ್ ವಿಧಿಸಿದ ಗಡುವನ್ನು ಅನುಸರಿಸಿ ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಜೈಲಿಗೆ ಭಾನುವಾರ ತಡರಾತ್ರಿ ಶರಣಾಗಿದ್ದಾರೆ.

“ಎಲ್ಲಾ 11 ಅಪರಾಧಿಗಳು ಭಾನುವಾರ ತಡರಾತ್ರಿ ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಅವರು ಜನವರಿ 21 ರ ಮಧ್ಯರಾತ್ರಿಯ ಮೊದಲು ಜೈಲು ತಲುಪಿದ್ದಾರೆ, ಅದು ಅವರಿಗೆ ಶರಣಾಗಲು ನಿಗದಿಪಡಿಸಿದ ಗಡುವು” ಎಂದು ಸ್ಥಳೀಯ ಕ್ರೈಂ ಬ್ರಾಂಚ್ ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ಅವರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಒಟ್ಟು 11 ಅತ್ಯಾಚಾರಿಗಳ ಪೈಕಿ ಮೂವರು ಶರಣಾಗತಿ ಅವಧಿ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕಳೆದ ಶುಕ್ರವಾರ ಅವರ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌, ಜನವರಿ 8ರಂದು ನೀಡಿದ್ದ ತೀರ್ಪಿನಂತೆ ಜನವರಿ 21ರಂದು ಎಲ್ಲಾ 11 ಅಪರಾಧಿಗಳು ಜೈಲಿಗೆ ಮರಳಬೇಕು ಎಂದಿತ್ತು. ಅದರಂತೆ ಎಲ್ಲರೂ ಜೈಲಿಗೆ ಮರಳಿದ್ದಾರೆ.

ಒಟ್ಟು 11 ಅತ್ಯಾಚಾರಿಗಳ ಪೈಕಿ ಪ್ರಮುಖರಾದ ಗೋವಿಂದಭಾಯಿ ನಾಯ್, ರಮೇಶ್ ರೂಪಾಭಾಯ್ ಚಂದನ್ ಮತ್ತು ಮಿತೇಶ್ ಚಿಮನ್ಲಾಲ್ ಭಟ್ ಮಕ್ಕಳ ಮದುವೆ, ಅನಾರೋಗ್ಯ, ಚಳಿಗಾಲದ ಕೊಯ್ಲು ಇತ್ಯಾದಿ ಕಾರಣಗಳನ್ನು ನೀಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶರಣಾಗಲು 6 ವಾರಗಳ ಹೆಚ್ಚುವರಿ ಸಮಯ ನೀಡುವಂತೆ ಕೋರಿದ್ದರು.

11 ಮಂದಿ 2002ರ ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಕೊಲೆಯ ಅಪರಾಧಿಗಳಾಗಿದ್ದಾರೆ.

ಅಪರಾಧಿಗಳು 14 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ಬಳಿಕ, 2022ರ ಆಗಸ್ಟ್‌ನಲ್ಲಿ ಗುಜರಾತ್ ಸರ್ಕಾರ ಸನ್ನಡೆಯ ನೆಪ ಹೇಳಿ ಬಿಡುಗಡೆ ಮಾಡಿತ್ತು. ಇದರ ವಿರುದ್ದ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಜನವರಿ 8, 2024ರಂದು ತೀರ್ಪು ನೀಡಿದ್ದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಎರಡು ವಾರಗಳಲ್ಲಿ ಜೈಲಿಗೆ ಮರುಳುವಂತೆ ಅಪರಾಧಿಗಳಿಗೆ ಸೂಚಿಸಿತ್ತು.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ತೀರ್ಪು ನೀಡಿದ್ದ ಪೀಠದಲ್ಲಿದ್ದ ಓರ್ವ ಜಡ್ಜ್‌ !

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read