Homeಮುಖಪುಟಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

ಬಿಲ್ಕೀಸ್‌ ಬಾನು ಪ್ರಕರಣ: ಪೆರೋಲ್‌ ಮೇಲೆ ಹೊರ ಬರುತ್ತಿರುವ ಅಪರಾಧಿಗಳು!

- Advertisement -
- Advertisement -

ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರ, ಕುಟುಂಬಸ್ಥರ ಕೊಲೆ ಪ್ರಕರಣದ ಅಪರಾಧಿ ರಮೇಶ್ ಚಂದನಾಗೆ ಗುಜರಾತ್ ಹೈಕೋರ್ಟ್ 10 ದಿನಗಳ ಕಾಲ ಪೆರೋಲ್ ನೀಡಿದ್ದು, ಮಾ.5ರಂದು ಆತನಿಗೆ ಸೋದರಳಿಯನ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಿದೆ. ಜನವರಿ 21ರಂದು ಎಲ್ಲಾ ಅಪರಾಧಿಗಳು ಶರಣಾದ ತಿಂಗಳೊಳಗೆ ಈತ ಜಾಮೀನಲ್ಲಿ ಬಿಡುಗಡೆಯಾದ ಎರಡನೇ ಅಪರಾಧಿಯಾಗಿದ್ದಾನೆ. ಹೇಯ ಕೃತ್ಯದ ಅಪರಾಧಿಗಳು ಒಬ್ಬರ ಹಿಂದೆ ಒಬ್ಬರಂತೆ ಪೆರೋಲ್‌ನಿಂದ ಹೊರ ಬರುತ್ತಿದ್ದು, ಜನರ ಟೀಕೆಗೆ ಕಾರಣವಾಗಿದೆ.

ಕಳೆದ ವಾರ ಪೆರೋಲ್‌ಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ರಮೇಶ್‌ ಚಂದನಾ, ಸುಪ್ರೀಂಕೋರ್ಟ್ ಆದೇಶದ ನಂತರ ಜನವರಿ 21ರಂದು ಗೋದ್ರಾ ಪಟ್ಟಣದ ಜೈಲಿನಲ್ಲಿ ಎಲ್ಲಾ 11 ಅಪರಾಧಿಗಳ ಜೊತೆ ಶರಣಾಗಿದ್ದ.  ಅಪರಾಧಿ ಸಹೋದರಿಯ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದ, ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ನೇತೃತ್ವದ ಗುಜರಾತ್‌ ಹೈಕೋರ್ಟ್‌ ಪೀಠ 10 ದಿನಗಳ ಕಾಲ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂಕೋರ್ಟ್‌ಗೆ ಗುಜರಾತ್ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಚಂದನಾ  2008ರಲ್ಲಿ ಸೆರೆವಾಸ ಘೋಷಿಸಿದ ಬಳಿಕ ಬರೊಬ್ಬರಿ 1,198 ದಿನಗಳವರೆಗೆ ಪೆರೋಲ್ ಅನುಭವಿಸಿದ್ದಾನೆ. ಇದಕ್ಕೂ ಮುನ್ನ, ಪ್ರಕರಣದ ಮತ್ತೊಬ್ಬ ಅಪರಾಧಿ ಪ್ರದೀಪ್ ಮೋಧಿಯಾ ಪೆರೋಲ್ ಅರ್ಜಿಯನ್ನು ಹೈಕೋರ್ಟ್ ಸ್ವೀಕರಿಸಿದ್ದು, ಫೆಬ್ರವರಿ 7ರಿಂದ 11ರವರೆಗೆ ಗೋಧ್ರಾ ಜೈಲಿನಿಂದ ಪೆರೋಲ್ ಮೇಲೆ ಆತನಿಗೆ ಬಿಡುಗಡೆ ಮಾಡಲಾಗಿತ್ತು.

2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಮಂದಿ ಅಪರಾಧಿಗಳಾಗಿದ್ದಾರೆ. ಈ ಕಿರಾತಕರಿಗೆ ಆಗಸ್ಟ್ 2022ರಲ್ಲಿ ರಾಜ್ಯ ಸರ್ಕಾರವು 1992ರ ನೀತಿಗೆ ಅನುಗುಣವಾಗಿ ಕ್ಷಮಾದಾನವನ್ನು ನೀಡಿ ಜೈಲಿನಿಂದ ಬಿಡುಗಡೆ ಮಾಡಿತ್ತು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದ್ದವು.

11 ಅಪರಾಧಿಗಳ ಬಿಡುಗಡೆಯ ನಂತರ ಬಿಲ್ಕಿಸ್ ಬಾನು ಅವರು ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಪೀಠ 11 ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರಕಾರದ ಆದೇಶವನ್ನು ರದ್ದುಗೊಳಿಸಿ, ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸುವ ಹಕ್ಕು ಗುಜರಾತ್‌ ಸರ್ಕಾರಕ್ಕಿಲ್ಲ ಎಂದು ಹೇಳಿತ್ತು. ಅಪರಾಧಿಗಳಾದ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್‌ನನ್ನು ಮತ್ತೆ ಜೈಲಿಗೆ ಕಳುಹಿಸಲಾಗಿತ್ತು.

ಜನವರಿ 8ರಂದು ತನ್ನ ಆದೇಶದಲ್ಲಿ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಸುಪ್ರೀಂಕೋರ್ಟ್ ಪೀಠವು, ಗುಜರಾತ್ ರಾಜ್ಯವು ಈ ನ್ಯಾಯಾಲಯವು ನೀಡಿದ ನಿರ್ದೇಶನದ ಆಧಾರದ ಮೇಲೆ ಕಾರ್ಯನಿರ್ವಹಿಸಿದೆ, ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದರು ಎಂದು ಹೇಳಿತ್ತು.

2002ರಲ್ಲಿ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ನಂತರ ನಡೆದ ಹಿಂಸಾಚಾರದ ವೇಳೆ ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಮೃತಪಟ್ಟ ಆಕೆಯ ಏಳು ಕುಟುಂಬ ಸದಸ್ಯರಲ್ಲಿ ಅವಳ ಮೂರು ವರ್ಷದ ಮಗು ಕೂಡ ಸೇರಿತ್ತು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...