Homeಮುಖಪುಟಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ...

ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಮುಂಚಿತ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಆ ಕುರಿತ ವಿಚಾರಣೆಗೆ ವಿಶೇ‍ಷ ಪೀಠ ರಚಿಸಲು ಒಪ್ಪಿಗೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಹೊಸ ಪೀಠವನ್ನು ರಚಿಸುವುದಾಗಿ ಬಿಲ್ಕಿಸ್ ಬಾನೋರವರನ್ನು ಪ್ರತಿನಿಧಿಸುವ ವಕೀಲೆ ಶೋಭಾ ಗುಪ್ತಾ ಮೂಲಕ ಬಾನೋ ಅವರಿಗೆ ಭರವಸೆ ನೀಡಿತು.

“ನಾವು ಪೀಠವನ್ನು ರಚಿಸುತ್ತೇನೆ. ಇಂದು ಸಂಜೆ ಆ ಕುರಿತು ಚರ್ಚಿಸಲಾಗುವುದು” ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೈದ 11 ಅಪರಾಧಿಗಳನ್ನು ಕ್ಷಮಾಧಾನ ನೀಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿದ ಕ್ರಮವನ್ನು ಪ್ರಶ್ನಿಸಿ ಸಂತಸ್ತೆ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶೆ ಬೇಲಾ ಎಂ ತ್ರಿವೇದಿ ಕಳೆದ ಡಿಸೆಂಬರ್‌ನಲ್ಲಿ ಹಿಂದೆ ಸರಿದಿದ್ದರು.

ನ್ಯಾಯಾಧೀಶೆ ತ್ರಿವೇದಿ ಮತ್ತು ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಬೇಕಿತ್ತು. ಆದರೆ ನ್ಯಾಯಮೂರ್ತಿ ರಸ್ತೋಗಿ ಅವರು ತಮ್ಮ ಸಹೋದರಿ ನ್ಯಾಯಾಧೀಶರು ಪ್ರಕರಣವನ್ನು ಆಲಿಸಲು ಇಷ್ಟಪಡುವುದಿಲ್ಲ. ಹಾಗಾಗಿ ಅವರ ಸದಸ್ಯರಲ್ಲದ ಪೀಠದ ಮುಂದೆ ಪ್ರಕರಣವನ್ನು ತನ್ನಿ ಎಂದು ಹೇಳಿದರು. ಅದರೆ ನ್ಯಾಯಾಧೀಶೆ ತ್ರಿವೇದಿ ಅವರು ಹಿಂದೆ ಸರಿದುದ್ದಕ್ಕೆ ನಿರ್ದಿಷ್ಟ ಕಾರಣವನ್ನು ಪೀಠವು ಸ್ಪಷ್ಟಪಡಿಸಿಲ್ಲ.

2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಮಾತ್ರವಲ್ಲದೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬಿಕರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೂ ಈ ವರ್ಷ ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿದೆ.

ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಪರ ವಕೀಲರು ನವೆಂಬರ್ 30 ರಂದು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಮುಂಚೆ ಈ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ ಎಂದಿತ್ತು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...