Homeಮುಖಪುಟಬಿಲ್ಕಿಸ್ ಬಾನೊ ಪ್ರಕರಣ: ಅಪರಾಧಿಗಳ ಕ್ಷಮಾಪಣೆ ವಿರೋಧಿಸಿ ಸಲ್ಲಿಸಲಾದ ಅರ್ಜಿ ಪರಿಶೀಲನೆ ನಡೆಸುತ್ತೇವೆಂದ ಸುಪ್ರೀಂ

ಬಿಲ್ಕಿಸ್ ಬಾನೊ ಪ್ರಕರಣ: ಅಪರಾಧಿಗಳ ಕ್ಷಮಾಪಣೆ ವಿರೋಧಿಸಿ ಸಲ್ಲಿಸಲಾದ ಅರ್ಜಿ ಪರಿಶೀಲನೆ ನಡೆಸುತ್ತೇವೆಂದ ಸುಪ್ರೀಂ

- Advertisement -
- Advertisement -

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ನೀಡಲಾದ ಕ್ಷಮಾದಾನ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮನವಿಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ. ವಕೀಲರಾದ ಅಪರ್ಣಾ ಭಟ್ ಅವರು ಈ ಅರ್ಜಿಗಳಲ್ಲಿ ಒಂದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಿದ್ದರು.

ಸಿಪಿಎಂ(ಎಂ) ನಾಯಕಿ ಸುಭಾಷಿಣಿ ಅಲಿ ಮತ್ತು ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಸೇರಿದಂತೆ ಮೂವರು ಅರ್ಜಿದಾರರು ಈ ಅರ್ಜಿ ಸಲ್ಲಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಕೂಡ ಎರಡನೇ ಅರ್ಜಿ ಸಲ್ಲಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ನ್ಯಾಯಾಲಯದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುಗಡೆಯಾಗಿದೆಯೇ ಎಂದು ಸಿಜೆಐ ಪ್ರಶ್ನಿಸಿದೆರು. ಸುಪ್ರೀಂ ಕೋರ್ಟ್ ಆದೇಶದ ಮೂಲಕ ನಿರ್ಧಾರ ತೆಗೆದುಕೊಳ್ಳುವ ವಿವೇಚನೆಯನ್ನು ಗುಜರಾತ್ ಸರ್ಕಾರಕ್ಕೆ ನೀಡಿದೆ ಎಂದು ಅಪರ್ಣಾ ಭಟ್ ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸವಾಲಿರುವುದು ವಿನಾಯಿತಿಯ ತತ್ವಗಳ ಮೇಲೆ ಎಂದು ಹೇಳಿದಾಗ, ಸಿಜೆಐ, “ನಾವು ನೋಡೋಣ” ಎಂದು ಹೇಳಿದ್ದಾರೆ.

ಬುಧವಾರ ಈ ವಿಷಯವನ್ನು ಪಟ್ಟಿ ಮಾಡಲು ನ್ಯಾಯಾಲಯವು ಪರಿಗಣಿಸುತ್ತದೆಯೇ ಎಂದು ವಕೀಲೆ ಅಪರ್ಣಾ ಭಟ್ ಕೇಳಿದಾಗ, ಸಿಜೆಐ “ನೋಡೋಣ” ಎಂದು ಉತ್ತರಿಸಿದರು.

2002 ರ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಗುಜರಾತ್ ಸರ್ಕಾರವು ಆಗಸ್ಟ್ 15 ರಂದು 11 ಅಪರಾಧಿಗಳನ್ನು ತನ್ನ ಕ್ಷಮಾದಾನ ಮತ್ತು ಅಕಾಲಿಕ ಬಿಡುಗಡೆ ನೀತಿಯ ಅಡಿಯಲ್ಲಿ ಬಿಡುಗಡೆ ಮಾಡಿತು. ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2008ರಲ್ಲಿ ಮುಂಬೈನ ಸಿಬಿಐ ನ್ಯಾಯಾಲಯ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಧೇಶ್ಯಾಮ್‌ ಶಾ 15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿದ್ದರು.

ಇದನ್ನೂ ಓದಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಗುಜರಾತ್ ಗಲಭೆಯ ಸಮಯದಲ್ಲಿ ಬಿಲ್ಕಿಸ್‌ರನ್ನು ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಲಾಯಿತು ಮತ್ತು ಅವರ ಮೂರು ವರ್ಷದ ಮಗಳು ಸಲೇಹಾ ಸೇರಿದಂತೆ 14 ಜನರನ್ನು ಮಾರ್ಚ್ 3, 2002 ರಂದು ದಾಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಜನಸಮೂಹವೊಂದು ಕೊಂದು ಹಾಕಿತ್ತು. ಆ ಸಮಯದಲ್ಲಿ ಬಿಲ್ಕಿಸ್ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...