Homeಮುಖಪುಟಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

ಬಿಲ್ಕಿಸ್‌ ಬಾನೋ ಪ್ರಕರಣ: ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳನ್ನು ಶಿಕ್ಷೆಯ ಅವಧಿ ಮುಗಿಯುವ ಮುನ್ನವೇ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಗುಜರಾತ್ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಲ್ಕಿಸ್‌ ಬಾನೊ ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. ”ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. ಅವರನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ಮುತುವರ್ಜಿ ವಹಿಸಿತ್ತು. ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಕಾಲ ಜೈಲಿನಲ್ಲಿದ್ದವರನ್ನು ಹೇಗೆ ಬಿಡುಗಡೆ ಮಾಡಲಾಯಿತು? ಇತರ ಕೈದಿಗಳನ್ನು ಯಾಕೆ ಬಿಡುಗಡೆ ಮಾಡಿಲ್ಲ. ಈ ಅಪರಾಧಿಗಳಿಗೆ ಮಾತ್ರ ಏಕೆ ನೀತಿಯ ಪ್ರಯೋಜನವನ್ನು ನೀಡಲಾಗಿದೆ? ಎಂದು ಗುಜರಾತ್ ಸರ್ಕಾರವನ್ನು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ತರಾಟೆ ತೆಗೆದುಕೊಂಡಿತು.

ಬಿಲ್ಕಿಸ್ ಅಪರಾಧಿಗಳಿಗಾಗಿ ಜೈಲು ಸಲಹಾ ಸಮಿತಿಯನ್ನು ಯಾವ ಆಧಾರದ ಮೇಲೆ ರಚಿಸಲಾಗಿದೆ ಎಂದು ಪ್ರಶ್ನಿಸಿದ ನ್ಯಾಯಾಲಯ, ವಿವರಗಳನ್ನು ನೀಡುವಂತೆ ರಾಜ್ಯಕ್ಕೆ ಆದೇಶಿಸಿದೆ. ಗೋಧ್ರಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯದ ಕಾರಣ ಅದರ ಅಭಿಪ್ರಾಯವನ್ನು ಏಕೆ ಕೇಳಲಾಗಿದೆ ಎಂದೂ ಅದು ಕೇಳಿದೆ.

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು. ಕಳೆದ ವರ್ಷ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ 11 ಮಂದಿಗೆ ಮಹಾರಾಷ್ಟ್ರದ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು. ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಧೀಶರು ಅಪರಾಧಿಗಳನ್ನು ಬಿಡುಗಡೆ ಮಾಡಬೇಕೇ ಎಂಬ ರಾಜ್ಯದ ಪ್ರಶ್ನೆಗೆ ನಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೋ ಪರ ವಕೀಲ ಶೋಭಾ ಗುಪ್ತಾ, ಅಪರಾಧಿಗಳ ಬಿಡುಗಡೆ ಕುರಿತು ಗುಜರಾತ್ ಸರ್ಕಾರದ ನಿರ್ಧಾರ ತಪ್ಪು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ಮಹಾರಾಷ್ಟ್ರ ರಾಜ್ಯವನ್ನು ಕೇಳಲಿಲ್ಲ, ಕೇಂದ್ರವನ್ನು ಇದರಲ್ಲಿ ಪಕ್ಷವನ್ನಾಗಿ ಮಾಡಿಲ್ಲ. ಸುಪ್ರೀಂಕೋರ್ಟ್‌ನ ಆದೇಶವು ಅಪರಾಧಿ ರಾಧೇಶ್ಯಾಮ್‌ನ ಅರ್ಜಿಗೆ ಸಂಬಂಧಿಸಿದಂತೆ ಮಾತ್ರ, ಆದರೆ ಗುಜರಾತ್ ಸರ್ಕಾರವು ಎಲ್ಲಾ 11 ಅಪರಾಧಿಗಳಿಗೆ ವಿನಾಯಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

15 ವರ್ಷ 4 ತಿಂಗಳ ಜೈಲು ವಾಸವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಪರಾಧಿ ರಾಧೇಶ್ಯಾಮ್ ಷಾ ವಿನಾಯತಿ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಗುಜರಾತ್ ಸರ್ಕಾರವನ್ನು ಈ ವಿಷಯವನ್ನು ಪರಿಶೀಲಿಸಲು ಮತ್ತು ಎರಡು ತಿಂಗಳೊಳಗೆ ಅವರಿಗೆ ವಿನಾಯಿತಿ ನೀಡಬಹುದೇ ಎಂದು ನಿರ್ಧರಿಸಲು ಕೇಳಿದೆ. ಇದಕ್ಕೆ ಪ್ರತಿಯಾಗಿ ಗುಜರಾತ್ ಸರ್ಕಾರ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿದೆ.

ಆಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಪುರುಷರನ್ನು ಸುಸಂಸ್ಕೃತ ಬ್ರಾಹ್ಮಣರು ಎಂದು ಕರೆದ ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಯ ಬಗ್ಗೆ ತನಗೆ ಸೂಚನೆ ನೀಡಿಲ್ಲ ಎಂದು ಬಿಲ್ಕಿಸ್ ಬಾನೋ ವಾದಿಸಿದ್ದಾರೆ. ಆಕೆಯ ಅರ್ಜಿಯ ವಿಚಾರಣೆ ಆಗಸ್ಟ್ 24 ರಂದು ನಡೆಯಲಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

0
ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು...