Homeಮುಖಪುಟಬಿಲ್ಕಿಸ್ ಪ್ರಕರಣದ ಅಪರಾಧಿ ಪೆರೋಲ್‌ನಲ್ಲಿದ್ದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಎದುರಿಸುತ್ತಿದ್ದಾನೆ

ಬಿಲ್ಕಿಸ್ ಪ್ರಕರಣದ ಅಪರಾಧಿ ಪೆರೋಲ್‌ನಲ್ಲಿದ್ದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಎದುರಿಸುತ್ತಿದ್ದಾನೆ

ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆ ಮಾಡುವ ಪ್ರಸ್ತಾಪ ಬಂದಾಗ ದಾಹೋದ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಮಾಹಿತಿ ನೀಡಿದ್ದಾರೆ. ಆದರೂ ಸಹ ಗುಜರಾತ್ ಸರ್ಕಾರ ಅಪರಾಧಿಯನ್ನು ಬಿಡುಗಡೆ ಮಾಡಿದೆ!

- Advertisement -
- Advertisement -

ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾಗಿದ್ದ ಸದ್ಯ ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಯಾಗಿರುವ ಮಿತೇಶ್ ಚಿಮನ್‌ಲಾಲ್ ಭಟ್ ಎಂಬಾತ ಜೂನ್ 19, 2020ರಂದು ಪೆರೋಲ್‌ನಲ್ಲಿ ಹೊರಗಿರುವಾಗ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾನೆ ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ.

ಗುಜರಾತ್ ಸರ್ಕಾರದಿಂದ ಬಿಲ್ಕಿಸ್ ಪ್ರಕರಣದ ಅಪರಾಧಿಗಳನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆ ಮಾಡುವ ಪ್ರಸ್ತಾಪ ಬಂದಾಗ ದಾಹೋದ್ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಮಾಹಿತಿ ನೀಡಿದ್ದಾರೆ. ಆದರೂ ಸಹ ಗುಜರಾತ್ ಸರ್ಕಾರ ಅಪರಾಧಿಯನ್ನು ಬಿಡುಗಡೆ ಮಾಡಿದೆ!.

ಚಿಮನ್ ಲಾಲ್ ಭಟ್ ಮೇಲೆ IPC ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವಿಚಾರಣೆಯು ಬಾಕಿ ಉಳಿದಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ಅನುಬಂಧದಲ್ಲಿದೆ ಎಂದು ಲೈವ್ ಲಾ ವರದಿ ಮಾಡಿದೆ.

57 ವರ್ಷದ ಆರೋಪಿ ವಿರುದ್ಧ ಜೂನ್ 2020 ರಲ್ಲಿ ಐಪಿಸಿಯ ಸೆಕ್ಷನ್ 354, 504, 506 (2) ರ ಅಡಿಯಲ್ಲಿ ರಾಂಧಿಕ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಅಧಿಕೃತ ದಾಖಲೆಗಳ ಪ್ರಕಾರ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ವರ್ಷದ ಮೇ 25 ರವರೆಗೂ ಬಿಲ್ಕಿಸ್ ಬಾನೋ ಪ್ರಕರನದಲ್ಲಿ ಅಪರಾಧಿಯು 954 ಪೆರೋಲ್ ರಜೆಗಳನ್ನು ಅನುಭವಿಸಿದ್ದಾನೆ. 2020 ರಲ್ಲಿ ಎಫ್‌ಐಆರ್ ದಾಖಲಾದ ನಂತರವೂ ಅವರು 281 ದಿನಗಳ ಕಾಲ ಜೈಲಿನಿಂದ ಹೊರಗಿದ್ದರು ಎನ್ನಲಾಗಿದೆ.

ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಅವಧಿಪೂರ್ವ ಬಿಡುಗಡೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಇತರರು ವಿರೋಧಿಸಿದ್ದರು. ಅದರೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಅದಕ್ಕೆ ಅನುಮತಿ ನೀಡಿತ್ತು ಎಂದು ಗುಜರಾತಿನ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಗುಜರಾತ್ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, “ಅಪರಾಧಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು ಏಕೆಂದರೆ, ಅವರು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ವಾಸವನ್ನು ಪೂರ್ಣಗೊಳಿಸಿದ್ದಾರೆ… ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಒಕ್ಕೂಟ ಸರ್ಕಾರ ಕೂಡಾ ಇದಕ್ಕೆ ಸಹಮತ ವ್ಯಕ್ತಪಡಿಸಿದೆ’’ ಎಂದು ಹೇಳಿದೆ.

ಗುಜರಾತ್ ಸರ್ಕಾರ ಗೋಧ್ರಾ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಬ್ಬರು ಬಿಜೆಪಿ ಶಾಸಕರು, ಬಿಜೆಪಿ ಕೌನ್ಸಿಲರ್ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯನ್ನೊಳಗೊಂಡ ಸಮಿತಿಯನ್ನು ರಚಿಸಿತು. ಆ ಸಮಿತಿಯು ಬಿಲ್ಕಿಸ್ ಪ್ರಕರಣದ ಎಲ್ಲಾ ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡುವಂತೆ ಸರ್ವಾನುಮತದಿಂದ ರಾಜ್ಯ ಗೃಹ ಇಲಾಖೆಗೆ ವರದಿ ಸಲ್ಲಿಸಿತು. ಅಪರಾಧಿಗಳು ಹೊರಬಂದಾಗ ಸಮಿತಿಯಲ್ಲಿದ್ದ ಬಿಜೆಪಿ ಶಾಸಕ ಸಿ.ಕೆ ರೌಲ್ಜಿ ಎಂಬುವವರು, “ಅವರು ಬ್ರಾಹ್ಮಣರು ಉತ್ತಮ ಸಂಸ್ಕಾರವುಳ್ಳವರು, ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಎಂದು ಸಮರ್ಥಿಸಿಕೊಂಡಿದ್ದರು. ಈಗ ಅದೇ ಸಂಸ್ಕಾರವಂತರು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಸಂದರ್ಭದಲ್ಲಿ ಪೆರೋಲ್ ಮೇಲೆ ಹೊರಬಂದಾಗ ಮತ್ತೊಬ್ಬ ಮಹಿಳೆಯ ಮೇಲೆ ದೌರ್ಜನ್ಯ ಎಸಗಿರುವುದು ಏನನ್ನು ಸೂಚಿಸುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ.

ಇದನ್ನೂ ಓದಿ; ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read