Homeಮುಖಪುಟಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್...

ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಬಿಲ್ಕಿಸ್‌ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿದೆ.

- Advertisement -
- Advertisement -

2002ರ ಗೋಧ್ರೋತ್ತರ ಘಟನೆಯಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಬಿಲ್ಕಿಸ್‌ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾದ ಎಲ್ಲಾ 11 ಅಪರಾಧಿಗಳನ್ನು ಸೋಮವಾರ ಗೋಧ್ರಾ ಸಬ್‌ಜೈಲ್‌ನಿಂದ ಬಿಡುಗಡೆ ಮಾಡಲಾಗಿದೆ. ಗುಜರಾತ್ ಸರ್ಕಾರವು ತನ್ನ ಕ್ಷಮಾದಾನ ನೀತಿಯ ಅಡಿಯಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನವರಿ 21, 2008ರಂದು ಮುಂಬೈನ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಹಾಗೂ ಅವರ ಕುಟುಂಬದ ಏಳು ಸದಸ್ಯರ ಹತ್ಯೆಯ ಆರೋಪದ ಮೇಲೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಈ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು.

ಈ ಅಪರಾಧಿಗಳು 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿದ್ದರು. ನಂತರ ಅವರಲ್ಲಿ ಒಬ್ಬಾತ ತನ್ನ ಅವಧಿಪೂರ್ವ ಬಿಡುಗಡೆಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ವಿಷಯವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಪಂಚಮಹಲ್ ಜಿಲ್ಲಾಧಿಕಾರಿ ಸುಜಲ್ ಮಾಯಾತ್ರಾ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

“ಕೆಲವು ತಿಂಗಳ ಹಿಂದೆ ರಚಿಸಲಾದ ಸಮಿತಿಯು ಪ್ರಕರಣದಲ್ಲಿ ಎಲ್ಲಾ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಸರ್ವಾನುಮತದ ನಿರ್ಧಾರ ತೆಗೆದುಕೊಂಡಿದೆ. ಶಿಫಾರಸನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ನಿನ್ನೆ ನಾವು ಅವರ ಬಿಡುಗಡೆಯ ಆದೇಶವನ್ನು ಸ್ವೀಕರಿಸಿದ್ದೇವೆ” ಎಂದು ಮಾಯಾತ್ರಾ ಹೇಳಿದ್ದಾರೆ.

ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿರುವ ವಕೀಲ ಶಂಶಾದ್ ಪಠಾಣ್ ಪ್ರತಿಕ್ರಿಯೆ ನೀಡಿದ್ದು, “ಬಿಲ್ಕಿಸ್ ಬಾನು ಪ್ರಕರಣಕ್ಕಿಂತ ಕಡಿಮೆ ಘೋರ ಅಪರಾಧ ಎಸಗಿದ ಹೆಚ್ಚಿನ ಸಂಖ್ಯೆಯ ಅಪರಾಧಿಗಳು ಯಾವುದೇ ಪರಿಹಾರವಿಲ್ಲದೆ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿರಿ: ಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸರ್ಕಾರವು ಇಂತಹ ನಿರ್ಧಾರವನ್ನು ತೆಗೆದುಕೊಂಡಾಗ ಸಂತ್ರಸ್ತರಾದವರಿಗೆ ನ್ಯಾಯದ ಮೇಲಿನ ಭರವಸೆ ಕಡಿಮೆಯಾಗುತ್ತದೆ ಎಂದು ಪಠಾಣ್ ಆತಂಕ ವ್ಯಕ್ತಪಡಿಸಿದ್ದಾರೆ.

ಅಪರಾಧಿಗಳಾದ ಜಸ್ವಂತ್ ಭಾಯ್ ನಾಯ್, ಗೋವಿಂದಭಾಯಿ ನಾಯ್, ಶೈಲೇಶ್ ಭಟ್, ರಾಧೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅಕಾಲಿಕ ಬಿಡುಗಡೆಯಾಗಿದ್ದಾರೆ.

ಏನಿದು ಪ್ರಕರಣ?

ಫೆಬ್ರವರಿ 27, 2002ರಂದು ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನಲ್ಲಿದ್ದ 59 ಕರಸೇವಕರನ್ನು ಕೊಂದ ಬಳಿಕ ಗುಜರಾತ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು. ಆ ಸಮಯದಲ್ಲಿ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ತನ್ನ ಅಂಬೆಗಾಲಿಡುವ ಮಗು ಮತ್ತು ಇತರ 15 ಜನರೊಂದಿಗೆ ಊರು ತೊರೆದಿದ್ದರು.

ಮಾರ್ಚ್ 3ರಂದು ಮಾರಾಕಾಸ್ತ್ರಗಳಿಂದ ಶಸ್ತ್ರಸಜ್ಜಿತವಾದ 20-30 ಜನರ ಗುಂಪೊಂದು ಅವರ ಮೇಲೆ ದಾಳಿ ಮಾಡಿದಾಗ ಅವರು ಹೊಲದಲ್ಲಿ ಆಶ್ರಯ ಪಡೆದ್ದರು. ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಬಾನೋ ಅವರ ಕುಟುಂಬದ ಏಳು ಸದಸ್ಯರನ್ನು ಕೊಲ್ಲಲಾಯಿತು. ಇತರ ಆರು ಜನರು ತಪ್ಪಿಸಿಕೊಂಡು ಬದುಕುಳಿದರು.

ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತು. ಪ್ರಕರಣದ ಆರೋಪಿಗಳನ್ನು 2004ರಲ್ಲಿ ಬಂಧಿಸಲಾಗಿತ್ತು. ಅಹಮದಾಬಾದ್‌ನಲ್ಲಿ ವಿಚಾರಣೆ ಆರಂಭವಾಯಿತು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶ ಮಾಡಬಹುದು, ಸಿಬಿಐ ಸಂಗ್ರಹಿಸಿದ ಸಾಕ್ಷ್ಯವನ್ನು ತಿರುಚಬಹುದು ಎಂಬ ಆತಂಕವನ್ನು ಬಿಲ್ಕಿಸ್ ಬಾನೊ ವ್ಯಕ್ತಪಡಿಸಿದ ನಂತರ, ಸುಪ್ರೀಂ ಕೋರ್ಟ್ ಆಗಸ್ಟ್ 2004ರಲ್ಲಿ ಪ್ರಕರಣವನ್ನು ಮುಂಬೈಗೆ ವರ್ಗಾಯಿಸಿತು.

ಜನವರಿ 21, 2008ರಂದು ವಿಶೇಷ ಸಿಬಿಐ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಹನ್ನೊಂದು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಮತ್ತು ಕಾನೂನುಬಾಹಿರ ಸಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿರಿ: ದೆಹಲಿ ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ರೈಲ್ವೆ ಸಿಬ್ಬಂದಿ ಬಂಧನ

ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಇತರ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದೆ. ವಿಚಾರಣೆ ವೇಳೆ ಒಬ್ಬ ಆರೋಪಿ ಸಾವನ್ನಪ್ಪಿದ್ದಾನೆ. 2019ರ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್, “ಬಿಲ್ಕಿಸ್ ಬಾನೊ ಅವರಿಗೆ ₹ 50 ಲಕ್ಷ ಪರಿಹಾರ, ಉದ್ಯೋಗ ಮತ್ತು ಮನೆ ನೀಡಬೇಕು” ಎಂದು ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅಪರಾಧಿಗಳಲ್ಲಿ ಒಬ್ಬನಾದ ರಾಧೇಶ್ಯಾಮ್ ಷಾ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 432 ಮತ್ತು 433 ರ ಅಡಿಯಲ್ಲಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವಂತೆ ಗುಜರಾತ್ ಹೈಕೋರ್ಟ್‌ಗೆ ಮೊರೆ ಹೋಗಿದ್ದನು.

ಈ ಕುರಿತು ನಿರ್ಧರಿಸಬೇಕಾದದ್ದು ಮಹಾರಾಷ್ಟ್ರವೇ ಹೊರತು ಗುಜರಾತ್ ಅಲ್ಲ ಎಂದು ಅಭಿಪ್ರಾಯ ತಾಳಿದ ಹೈಕೋರ್ಟ್ ಆತನ ಮನವಿಯನ್ನು ರದ್ದುಗೊಳಿಸಿತ್ತು.

2022ರ ಏಪ್ರಿಲ್ 1ರವರೆಗೆ 15 ವರ್ಷ, 4 ತಿಂಗಳ ಕಾಲ ಯಾವುದೇ ವಿನಾಯಿತಿ ಇಲ್ಲದೆ ಜೈಲಿನಲ್ಲಿರುವುದಾಗಿ ರಾಧೇಶ್ಯಾಮ್‌ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದ್ದನು.

ಮೇ 13ರ ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್, “ಗುಜರಾತ್‌ನಲ್ಲಿ ಅಪರಾಧ ನಡೆದಿರುವುದರಿಂದ, ರಾಧೇಶ್ಯಾಮ್‌ನ ಅರ್ಜಿಯನ್ನು ಪರಿಶೀಲಿಸಲು ಗುಜರಾತ್ ರಾಜ್ಯವೇ ಸೂಕ್ತ ಸರ್ಕಾರ” ಎಂದಿತ್ತು.

ಇದನ್ನೂ ಓದಿರಿ: ಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

ಜುಲೈ 9, 1992ರ ನೀತಿಯ ಪ್ರಕಾರ ಅವಧಿಪೂರ್ವ ಬಿಡುಗಡೆಗಾಗಿ ಅರ್ಜಿಯನ್ನು ಪರಿಗಣಿಸಿ, ಎರಡು ತಿಂಗಳೊಳಗೆ ನಿರ್ಧರಿಸಬಹುದು ಎಂದು ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶಿ‌ಸಿತ್ತು.

“ಅನೇಕ ಅಪರಾಧಿಗಳು ಶಿಕ್ಷೆಯ ಅವಧಿ ಮುಗಿದಿದ್ದರೂ ಜೈಲಿನಿಂದ ಬಿಡುಗಡೆಯಾಗುವುದಿಲ್ಲ. ಯಾಕೆಂದರೆ ಇವರು ಕೆಲವು ಗ್ಯಾಂಗ್‌ನ ಭಾಗವಾಗಿರುತ್ತಾರೆ. ಒಂದು ಅಥವಾ ಎರಡು ಕೊಲೆಗಳಲ್ಲಿ ಭಾಗಿಯಾಗಿರುತ್ತಾರೆ. ಆದರೆ ಇಂತಹ ಹೇಯ ಪ್ರಕರಣಗಳಲ್ಲಿ ಗುಜರಾತ್ ಸರ್ಕಾರವು ಸುಲಭವಾಗಿ ಕ್ಷಮಾದಾನವನ್ನು ನೀಡಿದೆ. ಅಪರಾಧಿಗಳು ಜೈಲಿನಿಂದ ಹೊರಬರಲು ಅವಕಾಶ ನೀಡಿದೆ” ಎಂದು ವಕೀಲ ಪಠಾಣ್ ಬೇಸರ ವ್ಯಕ್ತಪಡಿಸಿದ್ದಾರೆ.

“ಇದು ಕೇವಲ ಕೊಲೆಯ ಪ್ರಕರಣವಲ್ಲ, ಘೋರ ರೀತಿಯ ಸಾಮೂಹಿಕ ಅತ್ಯಾಚಾರವೂ ಆಗಿದೆ. ಸರ್ಕಾರವು ಅಂತಹ ನಿರ್ಧಾರವನ್ನು ತೆಗೆದುಕೊಂಡಾಗ ಸಂತ್ರಸ್ತರಲ್ಲಿ ಭರವಸೆ ಕಡಿಮೆಯಾಗುತ್ತದೆ. ಸುಪ್ರೀಂ ಕೋರ್ಟ್ ಕೂಡ ಇದನ್ನು ಯೋಚಿಸಬೇಕಿತ್ತು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. In his Independence day speech Modi talked about respecting the feelings of women. But here in Gujarat his own BJP govt has released the worst rapists & murderers. What a contradictory mentality of Feku.

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...