Homeಮುಖಪುಟ11 ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಲ್ಕಿಸ್ ಬಾನೋ

11 ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಲ್ಕಿಸ್ ಬಾನೋ

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೈದ 11 ಅಪರಾಧಿಗಳನ್ನು ಕ್ಷಮಾಧಾನ ನೀಡಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿದ ಕ್ರಮವನ್ನು ಪ್ರಶ್ನಿಸಿ ಸಂತಸ್ತೆ ಬಿಲ್ಕಿಸ್ ಬಾನೋ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ಗಮನವಹಿಸಲಾಗುವುದು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ಪ್ರತಿಕ್ರಿಯಿಸಿದ್ದಾರೆ.

2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಮಾತ್ರವಲ್ಲದೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬಿಕರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೂ ಈ ವರ್ಷ ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿದೆ.

ಇದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಪರ ವಕೀಲರು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಮುಂಚೆ ಈ ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ ಎಂದಿತ್ತು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸಹ ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದನ್ನೂ ಓದಿ; ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಹೊಸ ಅರ್ಜಿ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣ: ಅಕ್ಬರುದ್ದೀನ್ ಓವೈಸಿ ಹಂಗಾಮಿ ಸ್ಪೀಕರ್; ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ ಶಾಸಕರು

0
ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವುದನ್ನು ವಿರೋಧಿಸಿ ತೆಲಂಗಾಣ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ...