Homeಮುಖಪುಟಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಎನ್ನುವವನು ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾದನು. ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಭಾರತೀಯ ಜನತಾ ಪಕ್ಷದ ಶಾಸಕರೊಂದಿಗೆ ಅತ್ಯಾಚಾರಿ ಶೈಲೇಶ್ ಚಿಮನ್‌ಲಾಲ್ ಭಟ್ ಕಾಣಿಸಿಕೊಂಡಿದ್ದಾನೆ.

2022ರ ಆಗಸ್ಟ್ 15ರಂದು ಜೈಲಿನಿಂದ ಬಿಡುಗಡೆಯಾದ ಶೈಲೇಶ್ ಚಿಮನ್‌ಲಾಲ್ ಭಟ್, ಮಾರ್ಚ್ 25ರಂದು ದಾಹೋದ್ ಸಂಸದ ಜಸ್ವಂತಸಿನ್ಹ್ ಭಭೋರ್ ಮತ್ತು ಅವರ ಸಹೋದರ, ಲಿಮ್ಖೇಡಾ ಶಾಸಕ ಶೈಲೇಶ್ ಭಭೋರ್ ಅವರೊಂದಿಗೆ ನೀರಿನ ಪೈಪ್‌ಲೈನ್ ಯೋಜನೆಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದಾನೆ. ಇಬ್ಬರು ಬಿಜೆಪಿ ನಾಯಕರೊಂದಿಗೆ ಭಟ್ ಫೋಟೋಗಳಿಗೆ ಪೋಸ್ ನೀಡಿದ್ದಾನೆ.

ಮಾರ್ಚ್ 3, 2002ರಂದು ಗುಜರಾತ್‌ನಲ್ಲಿ ನಡೆದ ಕೋಮುಗಲಭೆಗಳ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಕ್ಕಾಗಿ ಹನ್ನೊಂದು ಅಪರಾಧಿಗಳು ಶಿಕ್ಷೆಗೊಳಗಾದರು. ಆ ಸಮಯದಲ್ಲಿ ಅವಳಿಗೆ 19 ವರ್ಷ ವಯಸ್ಸು ಮತ್ತು ಆಗ ಆಕೆ ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಲ್ಲದೇ, ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಹದಿನಾಲ್ಕು ಸದಸ್ಯರನ್ನು ಹಿಂಸಾಚಾರದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಗುಜರಾತ್ ಸರ್ಕಾರವು ಸನ್ನಡತೆ ನೀತಿಯ ಅಡಿಯಲ್ಲಿ ಅವರ ಅರ್ಜಿಯನ್ನು ಅನುಮೋದಿಸಿದ ನಂತರ ಅಪರಾಧಿಗಳನ್ನು ಆಗಸ್ಟ್ 15ರಂದು ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಇವರ ಬಿಡುಗಡೆಗೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಅವರ ಬಿಡುಗಡೆ ವಿರುದ್ಧದ ಅರ್ಜಿಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ಪುರಸ್ಕರಿಸಿದ ಸುಪ್ರೀಂ, ವಿಶೇ‍ಷ ಪೀಠ ರಚನೆಗೆ ಒಪ್ಪಿಗೆ

ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಬಿಲ್ಕಿಸ್ ಬಾನೊ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳ ಬಿಡುಗಡೆ ವಿರುದ್ಧದ ಅರ್ಜಿಗಳ ವಿಚಾರಣೆಗೆ ಶೀಘ್ರದಲ್ಲಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿತು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸರಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಎಂ ಪಾಲಿಟ್‌ಬ್ಯೂರೊ ಸದಸ್ಯೆ ಸುಭಾಷಿಣಿ ಅಲಿ ಮತ್ತು ಇತರರು ಸೇರಿದ್ದಾರೆ. ಅವರ ಬಿಡುಗಡೆ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.

ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಟ್ವಿಟರ್‌ನಲ್ಲಿ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿದ್ದು, ”ಈ ರಾಕ್ಷಸರನ್ನು ಮತ್ತೆ ಜೈಲಿನಲ್ಲಿ ನೋಡಬೇಕಿದೆ, ಈಗಾಗಲೇ ಕೀಯನ್ನು ಎಸೆಯಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರ ಬಿಜೆಪಿ ನಾಯಕರೊಂದಿಗೆ ಅಪರಾಧಿ ಶೈಲೇಶ್ ಚಿಮನ್‌ಲಾಲ್ ಭಟ್ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಬಾನೊ ಅವರ ಪತಿ ಯಾಕೂಬ್ ರಸೂಲ್ ಅವರು, ”ಈ ಫೋಟೋಗಳಿಂದ ಆಶ್ಚರ್ಯವಾಗಲಿಲ್ಲ” ಎಂದು ಹೇಳಿದ್ದಾರೆ.

“ಈ ಜನರನ್ನು [ಅಪರಾಧಿಗಳು] ಜೈಲಿನಿಂದ ಹೊರಬಂದ ಕ್ಷಣದಲ್ಲೇ ಅವರು ಗೌರವಿಸಿದರು. ಅವರು ಅಧಿಕಾರದಲ್ಲಿರುವವರೊಂದಿಗೆ ವೇದಿಕೆ ಹಂಚಿಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯವಿಲ್ಲ. ನ್ಯಾಯಕ್ಕಾಗಿ ನಮ್ಮ ಏಕೈಕ ಭರವಸೆ ಎಂದರೆ ಸುಪ್ರೀಂ ಕೋರ್ಟ್ ಆಗಿದೆ” ಎಂದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...