Homeಮುಖಪುಟಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

ಸುಪ್ರೀಂ ತೀರ್ಪು ಸಮಾಧಾನ ಕೊಟ್ಟರೂ, ವಿಜಯದ ಸಂತಸದಲ್ಲಿಲ್ಲ ಬಿಲ್ಕಿಸ್ ಬಾನು!

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ಇಂದು ಸುಪ್ರೀಂಕೋರ್ಟ್‌ ರದ್ದುಗೊಳಿಸಿ ತೀರ್ಪು ನೀಡಿತ್ತು, ಈ ಐತಿಹಾಸಿಕ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು  ಆಶಾಭಾವನೆಯನ್ನು ವ್ಯಕ್ತಪಡಿಸಿದ್ದಾರೆ, ಆದರೆ ವಿಜಯದ ಸಂತಸದಲ್ಲಿಲ್ಲ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿದೆ.

ಕ್ಷಮಾಧಾನ ನೀಡುವ ವಿಷಯದಲ್ಲಿ ಗುಜರಾತ್ ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದರಿಂದ ಕುಟುಂಬಕ್ಕೆ ನಿರಾಳವಾಗಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಯಾಲಯದ ಪ್ರಕ್ರಿಯೆಗಳು ಮುಕ್ತಾಯಗೊಳ್ಳದ ಕಾರಣ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕುಟುಂಬ ನಿರಾಕರಿಸಿದೆ.

ಬಿಲ್ಕಿಸ್‌ಗೆ ನಿಕಟವಾದ ಮೂಲವೊಂದು ಹೇಳುವಂತೆ, ಸುಪ್ರೀಂಕೋರ್ಟ್‌ ಆದೇಶವು ನ್ಯಾಯಾಂಗದಲ್ಲಿ ನಮ್ಮ ನಂಬಿಕೆಯನ್ನು ಮರುಸ್ಥಾಪಿಸಿದೆ ಮತ್ತು ನ್ಯಾಯವು ಜೀವಂತವಾಗಿದೆ ಎಂದು ನಮಗೆ ಸಮಾಧಾನವನ್ನು ನೀಡುತ್ತದೆ. ಆದರೆ ನಾವು ಇನ್ನೂ ವಿಜಯದ ಸಂತಸದಲ್ಲಿಲ್ಲ, ಏಕೆಂದರೆ ಅಪರಾಧಿಗಳು ಬೇರೆ ರಾಜ್ಯದಿಂದ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಸಿದ್ಧರಾಗುತ್ತಾರೆ. ಅಪರಾಧಿಗಳು ಕ್ಷಮಾಪಣೆಗಾಗಿ ಅರ್ಜಿ ಸಲ್ಲಿಸುವಾಗ ಜೈಲಿನ ಹೊರಗೆ ಉಳಿಯುವ ಬಗ್ಗೆ ಅಪರಾಧಿಗಳ ಮನವಿಯನ್ನು ನ್ಯಾಯಾಲಯವು ಪರಿಗಣಿಸುತ್ತದೆಯೇ ಎಂಬುದು ಸದ್ಯಕ್ಕೆ ನಮ್ಮ ಮನಸ್ಸಿನಲ್ಲಿರುವ ಒಂದು ಸಂದೇಹವಾಗಿದೆ. ಅವರನ್ನು ಮತ್ತೆ ಜೈಲಿಗೆ ಕಳುಹಿಸುವವರೆಗೂ ನಮ್ಮ ಹೋರಾಟ ಕೊನೆಗೊಂಡಂತೆ ಕಂಡು ಬರುವುದಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 2022ರಲ್ಲಿ ಅಪರಾಧಿಗಳನ್ನು ಕ್ಷಮಾದಾನದ ಮೂಲಕ ಗುಜರಾತ್‌ ಸರಕಾರ ಬಿಡುಗಡೆಗೊಳಿಸಿದ ಬಳಿಕ    ಬಿಲ್ಕಿಸ್ ಮತ್ತು ಅವರ ಕುಟುಂಬವು ಅಜ್ಞಾತ ಸ್ಥಳದಲ್ಲಿ ವಾಸಿಸುತ್ತಿದ್ದಾರೆ.

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14ಮಂದಿಯನ್ನು ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್‌ ಸರಕಾರ ಬಿಡುಗಡೆ ಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುಪ್ರೀಂ ಕೋರ್ಟ್‌ 11 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿದ್ದು, ಅಕ್ಟೋಬರ್‌ನಲ್ಲಿ ತೀರ್ಪು ಕಾಯ್ದಿರಿಸಿತ್ತು.

ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಇಂದು ಗುಜರಾತ್‌ ಸರಕಾರದ ಆದೇಶನ್ನು ರದ್ದುಗೊಳಿಸಿ, ಅಪರಾಧಿಗಳಿಗೆ ಎರಡು ವಾರಗಳಲ್ಲಿ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸೂಚಿಸಿದೆ. 1992ರ ನೀತಿಯ ಪ್ರಕಾರ ಕ್ಷಮಾಧಾನ ನಿರ್ಧರಿಸಲು ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿದ ಮೇ 13, 2022ರ ಸುಪ್ರೀಂಕೋರ್ಟ್‌ ಆದೇಶವನ್ನು ಸತ್ಯಗಳನ್ನು ಮರೆಮಾಚುವ ಮೂಲಕ ಪಡೆಯಲಾಗಿದೆ ಎಂದು ಪೀಠವು ಹೇಳಿದೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗುಜರಾತ್‌ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. 2002ರ ಕೋಮುಗಲಭೆಯಲ್ಲಿ ಮೃತಪಟ್ಟ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಇದನ್ನು ಓದಿ: ದಲಿತ ವ್ಯಕ್ತಿಯ ಹತ್ಯೆ: ಪ್ರಕರಣ ಹಿಂಪಡೆಯುವಂತೆ ಕುಟುಂಬಕ್ಕೆ ಒತ್ತಡ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...