Homeಮುಖಪುಟಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ...

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ; 2 ವಾರಗಳಲ್ಲಿ ಜೈಲಿಗೆ ಮರಳುವಂತೆ 11 ಅಪರಾಧಿಗಳಿಗೆ ಸುಪ್ರೀಂ ಸೂಚನೆ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಹನ್ನೊಂದು ಅಪರಾಧಿಗಳನ್ನು 2022ರಲ್ಲಿ ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಇದೀಗ ಆ ಎಲ್ಲ ಅತ್ಯಾಚಾರಿಗಳು ಎರಡು ವಾರಗಳಲ್ಲಿ ಜೈಲಿಗೆ ಮರಳಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶದಲ್ಲಿ ಹೇಳಿದೆ.

11 ಜನ ಅತ್ಯಾಚಾರ ಅಪರಾಧಿಗಳಿಗೆ ಗುಜರಾತ್ ಸರ್ಕಾರ ನೀಡಿದ್ದ ಪರಿಹಾರವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ‘ಈ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಪರಿಹಾರ ನಿರ್ಧರಿಸಲು ಸಮರ್ಥವಾಗಿಲ್ಲ’ ಎಂದು ಹೇಳಿದೆ.

11 ಅಪರಾಧಿಗಳಿಗೆ ನೀಡಲಾಗಿರುವ ಕ್ಷಮಾಧಾನವನ್ನು ರದ್ದುಗೊಳಿಸುವಂತೆ ಬಾನು ಅವರು ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಆಕೆಯ ವಿನಂತಿಯು ಕ್ಷಮಾಧಾನವನ್ನು ಪ್ರಶ್ನಿಸಬಹುದು ಎಂದು ನ್ಯಾಯಾಲಯ ಹೇಳಿದೆ.

2022ರ ಮೇನಲ್ಲಿ ನ್ಯಾಯಮೂರ್ತಿ ಅಜಯ್ ರಸ್ತೋಗಿ (ನಿವೃತ್ತ) ನೀಡಿದ ತನ್ನದೇ ಆದ ತೀರ್ಪು, ಅಪರಾಧಿಗಳಿಗೆ ಗುಜರಾತ್ ಸರ್ಕಾರದ ಮುಂದೆ ತಮ್ಮ ಆರಂಭಿಕ ಪರಿಹಾರಕ್ಕಾಗಿ (ಕ್ಷಮಾಧಾನಕ್ಕಾಗಿ) ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತು. ‘ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ ಅಪರಾಧಿಗಳು ಮೋಸ ಮತ್ತು ನಿಜಾಂಶಗಳನ್ನು ಮುಚ್ಚಿಡುವ ವಿಧಾನವನ್ನು ಅನುಸರಿಸಿದ್ದರು’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬಿಲ್ಕಿಸ್ ಬಾನು ಪ್ರಕರಣವನ್ನು ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಯಿತು. ಆದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರವೇ ಹೊರತು ಗುಜರಾತ್ ಸರ್ಕಾರವು ಪರಿಹಾರ ನೀಡಲು ಸಮರ್ಥವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮುಗಲಭೆಗಳ ಭೀಕರತೆಯಿಂದ ತಪ್ಪಿಸಿಕೊಳ್ಳುವಾಗ ಅತ್ಯಾಚಾರಕ್ಕೊಳಗಾದಾಗ ಬಾನು ಅವರಿಗೆ ಆಗ 21 ವರ್ಷವಾಗಿತ್ತು. ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಸಾವನ್ನಪ್ಪಿದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಸ್ವತಂತ್ರ ಪತ್ರಕರ್ತೆ ರೇವತಿ ಲಾಲ್ ಮತ್ತು ಲಕ್ನೋ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸೇರಿದಂತೆ ಹಲವು ಅರ್ಜಿಗಳು ಗುಜರಾತ್ ಸರ್ಕಾರ ಅತ್ಯಾಚಾರ ಆರೋಪಿಗಳಿಗೆ ನೀಡಿದ್ದ ಪರಿಹಾರವನ್ನು ಪ್ರಶ್ನಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕ ಮಹುವಾ ಮೊಯಿತ್ರಾ ಕೂಡ ಅಪರಾಧಿಗಳ ಅವಧಿಪೂರ್ವ ಬಿಡುಗಡೆ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಇಂದು ಈ ಅರ್ಜಿಗಳ ವಿಚಾರಣೆ ನಡೆಸಲಿಲ್ಲ.

ಇದನ್ನೂ ಓದಿ; ಬಿಲ್ಕಿಸ್ ಬಾನು ಪ್ರಕರಣ: ಆರೋಪಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...