Homeಮುಖಪುಟಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

ಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

‘ಚುನಾವಣಾ ಕಾನೂನುಗಳು (ತಿದ್ದುಪಡಿ ಮಸೂದೆ)’ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯು ಸೋಮವಾರ ಮತದಾರರ ಐಡಿ ಕಾರ್ಡ್‌ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಅನುವು ಮಾಡಿಕೊಡುವ ಚುನಾವಣಾ ಕಾನೂನುಗಳಿಗೆ ತಿದ್ದುಪಡಿಗಳನ್ನು ಅಂಗೀಕರಿಸಿದೆ. ಈ ಮಸೂದೆಯು ದೇಶದಲ್ಲಿ ನಾಗರಿಕರಲ್ಲದ ತುಂಬಾ ಜನರಿಗೆ ಮತ ಚಲಾಯಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರತಿಪಕ್ಷವು ಆರೋಪಿಸಿದೆ.

ಆಧಾರ್ ನಿವಾಸದ ಪುರಾವೆಯೇ ಹೊರತು ಪೌರತ್ವವಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ, ಈ ಕ್ರಮವು ನಾಗರಿಕರಲ್ಲದವರಿಗೆ ಮತದಾನದ ಹಕ್ಕನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಮತದಾನವು ಕಾನೂನುಬದ್ಧ ಹಕ್ಕು ಮತ್ತು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದು ತಪ್ಪು ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ಎಲ್ಲಾ ನಾಗರಿಕರಿಗೆ ಸರ್ಕಾರವು ಆಧಾರ್ ಕಾರ್ಡ್‌ಗಳನ್ನು ನೀಡುತ್ತದೆ ಎಂದು ಹೇಳಿದ ತೃಣಮೂಲ ಕಾಂಗ್ರೆಸ್ ನಾಯಕ ಸೌಗತೋ ರಾಯ್, ಒಕ್ಕೂಟ ಸರ್ಕಾರವು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

AIMIM ಮುಖ್ಯಸ್ಥ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡುವುದು ‘ದೊಡ್ಡ ತಪ್ಪು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೃಷಿ ಕಾಯಿದೆಗಳ ವಾಪಸಾತಿ; ದಣಿವರಿಯದ ಹೋರಾಟ ಕಲಿಸಿದ ಪಾಠಗಳೇನು?

“ಇದು ಪ್ರಜಾಪ್ರಭುತ್ವ ಮತ್ತು ನಾಗರಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ. ಆಧಾರ್ ಕಾರ್ಡ್‌ಗಳಲ್ಲಿ 8% ದಷ್ಟು ವ್ಯತ್ಯಾಸಗಳು ಕಂಡುಬಂದರೆ, ಮತದಾರರ ಪಟ್ಟಿಯಲ್ಲಿ ಕೇವಲ 3 ರಿಂದ 4% ದೋಷಗಳು ಕಂಡುಬಂದಿವೆ. ಮಸೂದೆ ಅಂಗೀಕಾರವಾದರೆ ಹೆಚ್ಚಿನ ಸಂಖ್ಯೆಯ ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಾರೆ” ಎಂದು ಒವೈಸಿ ಎಚ್ಚರಿಸಿದ್ದಾರೆ.

ವಿರೋಧ ಪಕ್ಷದ ಸಂಸದರ ಆಕ್ಷೇಪ ಮತ್ತು ಘೋಷಣೆಗಳ ನಡುವೆಯೇ ಈ ತಿದ್ದಪಡಿಗಳನ್ನು ಅಂಗೀಕರಿಸಲಾಗಿದೆ.

ಪ್ರತಿಪಕ್ಷಗಳ ಆಕ್ಷೇಪಣೆಗಳನ್ನು ‘ತಪ್ಪುದಾರಿ’ ಮತ್ತು ‘ಆಧಾರರಹಿತ’ ಎಂದು ಕರೆದ ಒಕ್ಕೂಸ ಸರ್ಕಾರದ ಸಚಿವ ಕಿರಣ್ ರಿಜಿಜು, ಸುಳ್ಳು ಮತದಾನ ಮತ್ತು ನಕಲಿ ಮತದಾನವನ್ನು ತಡೆಯಲು ಪ್ರತಿಪಕ್ಷಗಳು ಸರ್ಕಾರವನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..’; ಸುಪ್ರೀಂ ಕೋರ್ಟ್‌ ಸೂಚನೆ

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿದಿನ ಸಮಾಲೋಚನೆ ನಡೆಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು, ಇನ್ಸುಲಿನ್ ಅಗತ್ಯವಿದೆಯೇ ಅಥವಾ...