Homeಮುಖಪುಟದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಬಿಲ್ ಪಾಸ್: ಜನತೆಗೆ ಅವಮಾನ ಎಂದ ಕೇಜ್ರಿವಾಲ್

ಚುನಾಯಿತ ಸರ್ಕಾರ ತನ್ನ ಎಲ್ಲ ಪ್ರಮುಖ ನಿರ್ಧಾರಗಳಿಗೆ ಲೆಫ್ಟಿನೆಂಟ್ ಜನರಲ್ ಒಪ್ಪಿಗೆ ಪಡೆಯಬೇಕಾಗುತ್ತದೆ. ಒಂದರ್ಥದಲ್ಲಿ ಎಲ್-ಜಿ ಅವರೇ ಸರ್ಕಾರವಾಗುತ್ತಾರೆ ಎನ್ನಲಾಗಿದೆ.

- Advertisement -
- Advertisement -

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶ ಹೊಂದಿರುವ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರ ಮತ್ತು ನಾಮನಿರ್ದೇಶಿತ ಲೆಫ್ಟಿನೆಂಟ್ ಗವರ್ನರ್ ಪಾತ್ರಗಳನ್ನು ನಿರ್ದಿಷ್ಟಪಡಿಸುವ ಕಾಯಿದೆಯ ತಿದ್ದುಪಡಿಗಳನ್ನು ಮಸೂದೆ ಸೂಚಿಸುತ್ತದೆ.

ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸುವುದು ದೆಹಲಿ ಜನರಿಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಏಕೆಂದರೆ ಇದು ಜನರಿಂದ ಚುನಾಯಿತರಾದವರ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ ಮತ್ತು ಸೋಲಿಸಲ್ಪಟ್ಟವರಿಗೆ ನಿಯಂತ್ರಣವನ್ನು ನೀಡುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಈ ತಿದ್ದುಪಡಿಗಳು ದೆಹಲಿಯಲ್ಲಿ ಚುನಾವಣೆಗಳು ಮತ್ತು ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ವ್ಯವಹಾರಗಳನ್ನು ನಡೆಸುವಲ್ಲಿನ ಅಸ್ಪಷ್ಟತೆಯನ್ನು ಕೊನೆಗೊಳಿಸಲು ಈ ಮಸೂದೆಯನ್ನು ತರಲಾಗಿದೆ ಎಂದು ಕೇಂದ್ರವು ಹೇಳಿದೆ. ಇದು ನಗರದ ಜನರಿಗೆ ಪ್ರಯೋಜನಕಾರಿ ಆಗುವುದರಿಂದ ಇದನ್ನು “ರಾಜಕೀಯ ನಡೆ” ಎಂದು ಕರೆಯಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ.

ಎರಡು ಪ್ರಸ್ತಾವಿತ ತಿದ್ದುಪಡಿಗಳು, ನಿರ್ದಿಷ್ಟವಾಗಿ, ಚುನಾಯಿತ ಸರ್ಕಾರವನ್ನು ಅಪ್ರಸ್ತುತಗೊಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಕಾರ್ಯಾಂಗೀಯ ಕ್ರಮಕ್ಕೆ ಲೆಫ್ಟಿನೆಂಟ್ ಜನರಲ್ ಅಭಿಪ್ರಾಯವನ್ನು ಪಡೆಯಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಕೇಂದ್ರವು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ಮಸೂದೆಯನ್ನು ತಂದಿದೆ. ಎಲ್-ಜಿ ಅವರೇ ಸರ್ಕಾರ ಎಂದು ಅದು ಹೇಳುತ್ತದೆ. ಎಲ್ಲಾ ನಿರ್ಧಾರಗಳು ಮತ್ತು ಫೈಲ್‌ಗಳನ್ನು ಅವರ ಮೂಲಕ ರವಾನಿಸಬೇಕಾಗಿದೆ” ಎಂದು ಸಿಸೋಡಿಯಾ ಸೋಮವಾರ ಹೇಳಿದ್ದಾರೆ. “ಈ ಮಸೂದೆ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಆದೇಶಕ್ಕೆ ವಿರುದ್ಧವಾಗಿದೆ. ಕೇಂದ್ರವು ಇದನ್ನೇ ಮಾಡಲು ಬಯಸಿದರೆ, ಚುನಾವಣೆಗಳನ್ನು ನಡೆಸುವ ಮತ್ತು ರಾಜ್ಯದಲ್ಲಿ ಚುನಾಯಿತ ಸರ್ಕಾರ ರಚನೆಯ ಅರ್ಥವೇನು? ಕೇಂದ್ರವು ತಾನು ಪ್ರಜಾತಾಂತ್ರಿಕ ಎಂದು ಏಕೆ ನಟಿಸುತ್ತದೆ? ” ಎಂದು ಅವರು ಪ್ರಶ್ನಿಸಿದ್ದಾರೆ.

ಮಾರ್ಚ್ 15 ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಪರಿಚಯಿಸಲಾಯಿತು. ಇದರ ನಂತರ ದೆಹಲಿ ಮಂತ್ರಿಗಳು ಮತ್ತು ಎಎಪಿ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಇದರ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು, ಇದು ಎಲ್-ಜಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅಪಾದಿಸಿದ್ದರು.

ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪರಿಚಯಿಸಿದ 2021 ರ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 1991 ರ ಕಾಯಿದೆಯ ನಾಲ್ಕು ಷರತ್ತುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ.

ಮೊದಲನೆಯದು ಸೆಕ್ಷನ್ 21, ಅಂದರೆ ಇದು ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಶಾಸಕಾಂಗವು ಅಂಗೀಕರಿಸಿದ ಕಾನೂನುಗಳ ಮೇಲಿನ ನಿರ್ಬಂಧಗಳನ್ನು ಸೂಚಿಸುತ್ತದೆ. ಶಾಸಕಾಂಗವು ಮಾಡಬೇಕಾದ ಯಾವುದೇ ಕಾನೂನಿನಲ್ಲಿ ಉಲ್ಲೇಖಿಸಲಾದ “ಸರ್ಕಾರ” ಎಂಬ ಅಭಿವ್ಯಕ್ತಿ ಲೆಫ್ಟಿನೆಂಟ್ ಗವರ್ನರ್ ಎಂದು ಅರ್ಥೈಸುತ್ತದೆ” ಎಂದು ಸ್ಪಷ್ಟಪಡಿಸುವ ಮೂಲಕ ಉಪವಿಭಾಗವನ್ನು ಸೇರಿಸಲು ಮಸೂದೆ ಪ್ರಯತ್ನಿಸುತ್ತದೆ.

ಎರಡನೇ ತಿದ್ದುಪಡಿಯನ್ನು ಸೆಕ್ಷನ್ 24 ರಲ್ಲಿ ಕೋರಲಾಗಿದೆ, ಇದು ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುತ್ತದೆ. ಶಾಸಕಾಂಗ ಸಭೆಗೆ ನೀಡಲಾಗಿರುವ ಅಧಿಕಾರಗಳ ವ್ಯಾಪ್ತಿಯಿಂದ ಹೊರಗುಳಿಯುವ ಯಾವುದೇ ವಿಷಯಗಳನ್ನು ಒಳಗೊಳ್ಳುವ ಯಾವುದೇ ಮಸೂದೆಯನ್ನು ಪರಿಗಣಿಸಲು ಮತ್ತು ರಾಷ್ಟ್ರಪತಿಗೆ ರವಾನಿಸಲು ಎಲ್-ಜಿ ಒಪ್ಪದಿರುವ ಅಧಿಕಾರವನ್ನು ನೀಡಲಾಗಿದೆ.

ಮೂರನೆಯದಾಗಿ, ಮಸೂದೆಯು ಸೆಕ್ಷನ್ 33, ಕಾರ್ಯವಿಧಾನದ ನಿಯಮಗಳು ಮಾರ್ಪಾಟಿಗೆ ಬಯಸಿದೆ. ಅದರ ವಿಧಾನ ಮತ್ತು ಸದನ ನಡವಳಿಕೆಯನ್ನು ನಿಯಂತ್ರಿಸಲು ಅಸೆಂಬ್ಲಿ ಮಾಡಿದ ನಿಯಮಗಳ ಮೇಲೆ ಇದು ನಿಯಂತ್ರಣ ಸಾಧಿಸುತ್ತದೆ.

ಅಲ್ಲದೆ, “ ಹೊಸ ಮಸೂದೆ ಜಾರಿಗೆ ಬರುವ ಮುನ್ನ ರಾಜಧಾನಿಯ ದಿನನಿತ್ಯದ ಆಡಳಿತದ ವಿಷಯಗಳನ್ನು ಪರಿಗಣಿಸಲು ಅಥವಾ ಆಡಳಿತಾತ್ಮಕ ನಿರ್ಧಾರಗಳಿಗೆ ಸಂಬಂಧಿಸಿದಂತೆ ವಿಚಾರಣೆಗಳನ್ನು ನಡೆಸಲು ಮತ್ತು ಯಾವುದೇ ನಿಯಮದಲ್ಲಿ ಶಾಸಕಾಂಗವು ತನ್ನನ್ನು ಅಥವಾ ಅದರ ಸಮಿತಿಗಳನ್ನು ಸಕ್ರಿಯಗೊಳಿಸಲು ಯಾವುದೇ ನಿಯಮವನ್ನು ಮಾಡಬಾರದು. ಎಂದು ನಿರ್ಬಂಧಿಸಿದೆ.

ತಿದ್ದುಪಡಿ ಮಸೂದೆಯು, “ಮಂತ್ರಿ ಮಂಡಲ ಅಥವಾ ಸಚಿವರ ನಿರ್ಧಾರದ ಅನುಸಾರ” ಅಥವಾ “ಸರ್ಕಾರದ ಅಧಿಕಾರವನ್ನು ಚಲಾಯಿಸಲು” ಯಾವುದೇ ಕಾರ್ಯಕಾರಿ ಕ್ರಮ ತೆಗೆದುಕೊಳ್ಳುವ ಮೊದಲು, ಎಲ್-ಜಿ ಅಭಿಪ್ರಾಯವನ್ನು ಪಡೆಯಬೇಕಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...