Homeಮುಖಪುಟಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

ಬಿಲ್ಲವ ಮುಖಂಡ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ: ಮಧ್ಯರಾತ್ರಿ ಕಾರ್ಯಾಚರಣೆಗೆ ಟೀಕೆ

- Advertisement -
- Advertisement -

ಬಿಲ್ಲವ ಮುಖಂಡ, ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ಫೇಸ್‌ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ತಡರಾತ್ರಿ ಅವರನ್ನು ಬಂಧಿಸಿ ಕರೆದೊಯ್ದಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

ನಮೀಬಿಯಾದಿಂದ ತರಿಸಿದ್ದ ಚೀತಾ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಸುನೀಲ್ ಬಜಲಕೇರಿಯವರು ಸೀಮಂತ ಮಾಡುವ ಕಾರ್ಯಕ್ರಮದ ಬಗ್ಗೆ ಫೇಸ್‌ಬುಕ್‌ನಲ್ಲಿ ವ್ಯಂಗ್ಯಭರಿತ ಪೋಸ್ಟ್ ಹಾಕಿದ್ದರು. ಈ ಕುರಿತು ಅವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಶುಕ್ರವಾರ ರಾತ್ರಿ 11 ಗಂಟೆಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಆನಂತರ ಅವರನ್ನು ಉರ್ವ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಘಪರಿವಾರದ ನಾಯಕರಾಗಿದ್ದ ಸುನೀಲ್ ಬಜಿಲಕೇರಿಯವರು ಸದ್ಯ ಅದರಿಂದ ಹೊರಬಂದು ಪ್ರಗತಿಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಸಂಘ ಪರಿವಾರವು ತಮ್ಮ ರಾಜಕೀಯ ಅಧಿಕಾರಕ್ಕಾಗಿ ಶೂದ್ರರನ್ನು ಬಲಿಕೊಟ್ಟು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಟೀಕಿಸುತ್ತಿದ್ದರು. ಅಲ್ಲದೆ ಹಿಂದುತ್ವದಿಂದ ಬಂಧುತ್ವದೆಡೆಗೆ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ರಾಜಕೀಯ ದ್ವೇಷದ ಕಾರಣಕ್ಕೆ ಬಂಧನ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಶಿವಮೊಗ್ಗದ ಹರ್ಷ ಕೊಲೆ, ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಕುರಿತು ಸುನೀಲ್ ಬಜಿಲಕೇರಿ ದನಿಯೆತ್ತಿದ್ದರು. ಬಿಜೆಪಿಯಿಂದ ನಾರಾಯಣಗುರುಗಳಿಗಾದ ಅವಮಾನ ಮರೆಸಲು ಹಿಜಾಬ್ ಗಲಭೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಮಧ್ಯರಾತ್ರಿ ಜೈಲಿಗಟ್ಟಲಾಗಿದೆ ಎಂದು ಆರೋಪಿಸಲಾಗಿದೆ.

ಸುನೀಲ್ ಬಜಿಲಕೇರಿಯವರ ಬಂಧನ ಅಕ್ರಮ ಮತ್ತು ಅನ್ಯಾಯದ ಪರಮಾವಧಿ ಎಂದು ಕರೆದಿರುವ ಡಿವೈಎಫ್ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳರವರು ಕೂಡಲೇ ಬಿಡುಗಡೆಗೆ ಆಗ್ರಹಿಸಿದ್ದಾರೆ. “ಮಂಗಳೂರು ನಗರದ ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಟೀಕಾತೀತರಾ? ನರೇಶ್ ಶೆಣೈ ಸೂಪರ್ ಶಾಸಕರಾ? ಇವರ ವಿರುದ್ದ ಮಾತಾಡಿದರೆ ಮಧ್ಯ ರಾತ್ರಿ ಮನೆ ನುಗ್ಗಿ ಸೀದಾ ಜೈಲಿಗಟ್ಟುವುದಾ? ಅದಕ್ಕಾಗಿ ಇಲ್ಲದ ಪ್ರಕರಣ ಸೃಷ್ಟಿಸುವುದಾ? ಕೋರ್ಟಿಗೆ ರಜಾ ಇರುವ ದಿನಗಳನ್ನೇ ಬಂಧನಕ್ಕಾಗಿ ಆಯ್ದು ಕೊಳ್ಳುವುದಾ ? ಮಂಗಳೂರು ಪೊಲೀಸು ಇಲಾಖೆ ಅಂದರೆ ಬಿಜೆಪಿ ಶಾಸಕರ ಕಚೇರಿಯಿಂದ ಬಂದ ಸ್ಕ್ರಿಪ್ಟ್ ಆಧಾರದಲ್ಲಿ ಅವರ ವಿರೋಧಿಗಳ ಬಾಯಿ ಮುಚ್ಚಿಸುವ ಹೊರ ಗುತ್ತಿಗೆ ಏಜನ್ಸಿಯಾ ? ಇವರಿಗೊಂದು ಸ್ವಂತಿಕೆ ಇಲ್ಲವಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸುನಿಲ್ ಬಜಿಲಕೇರಿ ಬಂಧನ ಅಕ್ರಮ, ಅನ್ಯಾಯದ ಪರಮಾವಧಿ. ಚೀತಾ ಗರ್ಭಿಣಿಯಾದ ವಿಷಯದಲ್ಲಿ ಯಾವುದೇ ರಾಜಕೀಯ ಉಲ್ಲೇಖ ಇಲ್ಲದ ಒಂದು ಸಾಮಾನ್ಯ ಹಾಸ್ಯ ಪೋಸ್ಟ್ ಹಾಕಿದರೆ ಹಿಡಿದು ಜೈಲಿಗೆ ತಳ್ಳುವುದು ಅಂದರೆ ಇದರ ಹುನ್ನಾರ ಅರ್ಥ ಆಗದೆ ಇರುವುದಿಲ್ಲ. ಇವರಿಗೆ ಭಯ ಹುಟ್ಟಿಸಲು ಒಂದು ನೆಪ ಬೇಕು ಅಷ್ಟೆ. ಇದು ಜನಸಾಮಾನ್ಯರಿಗೆ “ಬಾಯಿ ಮುಚ್ಚಿ ಕೂತುಕೊಳ್ಳಿ” ಎಂದು ಬಿಜೆಪಿ ಶಾಸಕರುಗಳು ಹಾಕಿದ ನೇರ ಬೆದರಿಕೆ. ಇದನ್ನು ಎಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕು, ಪ್ರತಿಭಟಿಸಬೇಕು. ಇಂದು ಬಜಿಲಕೇರಿ. ನಾಳೆ ನಾವು, ನೀವು ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಸುನೀಲ್ ಬಜಿಲಕೇರಿಯವರು ಇತ್ತೀಚೆಗೆ ಚೀತಾ ಗರ್ಭಿಣಿ ಆಗಿರುವುದು ಎಂಬ ಫೋಟೋ ಹಾಕಿದ್ದರು, ಇದರಲ್ಲಿ ಯಾರ ಭಾವನೆಗಳಿಗೆ ಧಕ್ಕೆ ಆಗುವಂತಹ ವಿಷಯವಿರಲಿಲ್ಲ‌‌. ಆದರೂ ಪೊಲೀಸರು ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸುನಿಲ್ ಬಜಿಲಕೇರಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಬಿಲ್ಲವ ಮುಖಂಡರಾದ ಸುನಿಲ್ ಅವರು ಬಿಜೆಪಿಯ ನೈಜ ಮುಖದ ಅನಾವರಣ ಮಾಡುತ್ತಿದ್ದರು. ಆದರೂ ಇಂತಹ ಕ್ಷುಲ್ಲಕ ಕೇಸಿನಲ್ಲಿ ಪೊಲೀಸರು ಬಂಧಿಸುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಆರ್ಡರ್ ಇದ್ದರೂ ಸಹ ಪೊಲೀಸರು ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಸುನಿಲ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತ ಜ್ಞಾನಿ ತಾವರೆಕೆರೆ ತಿಳಿಸಿದ್ದಾರೆ.

ಇದನ್ನೂ ಓದಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಮಾನಗೇಡಿ ಚಡ್ಡಿಗಳ ಪಾದ ಸೇವಕರಾಗಿ ಮಾರ್ಪಟ್ಟಿರುವ ಕರ್ನಾಟಕ ಪೋಲೀಸ್ ಇಲಾಖೆಯವ್ರು ತಮಗೆ ವಿದ್ಯೆ, ಬುದ್ಧಿ, ವಿವೇಕ,ವಿವೇಚನೆ ಯಾವುವೂ ಇಲ್ಲವೆಂಬುದನ್ನು ಪದೇ ಪದೆ ಸಾಬೀತು ಪಡಿಸುತ್ತಿದ್ದಾರೆ. ಸರಕಾರಗಳು ಬದಲಾಗುತ್ತಿರುತ್ತವೆ ಎಂಬುದನ್ನು ಇವರು ನೆನಪಿಟ್ಟುಕೊಳ್ಳಲಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...