Homeಕರ್ನಾಟಕಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ; ಆರೆಸ್ಸೆಸ್‌-ಬಿಜೆಪಿ ಬೆಂಬಲಿಗ ಶ್ಯಾಮ ಭಟ್‌ ವಿರುದ್ಧ FIR

- Advertisement -
- Advertisement -

ರಾಜ್ಯದ ಗಮನ ಸೆಳೆದಿದ್ದ ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಹೇಳಿಕೆ ನೀಡಿದ್ದ ಬಿಜೆಪಿ ಬೆಂಬಲಿಗ ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲಾಗಿದೆ.

ಸುರತ್ಕಲ್‌‌‌ನಲ್ಲಿ ಬುಧವಾರ ನಡೆದ ಬೃಹತ್‌ ಟೋಲ್‌ಗೇಟ್‌ ವಿರೋಧಿ ಹೋರಾಟದ ಸಮಯದಲ್ಲಿ ಬಿಲ್ಲವ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರು ತಮ್ಮ ಬಂಧನ ನಡೆಸುವ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಕೂಡಾ ಆಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿ ಶ್ಯಾಮ ಸುದರ್ಶನ ಭಟ್‌‌ ‘ಕಹಳೆ ನ್ಯೂಸ್‌’ ಎಂಬ ಬಿಜೆಪಿ ಪರ ಪ್ರೊಪಗಾಂಡ ಸೃಷ್ಟಿಸುವ ವೆಬ್‌ಸೈಟೊಂದರ ಸಂಪಾದಕರಾಗಿದ್ದು, ಪ್ರತಿಭಾ ಅವರು ಪೊಲೀಸರ ವಿರುದ್ಧ ಪ್ರತಿಭಟಿಸುತ್ತಿರುವ ವಿಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿ ಅವರ ಬಗ್ಗೆ ಅಶ್ಲೀಲವಾಗಿ ಬರೆದುಕೊಂಡು, ಅವರ ಘನತೆಗೆ ಕುಂದುಂಟು ಮಾಡುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟಗಾರರ ವಿರುದ್ಧ 2 ಪ್ರತ್ಯೇಕ FIR ದಾಖಲು

ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರು ನೀಡಿರುವ ದೂರಿನ ಅನ್ವಯ ಆರೋಪಿಯ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಮಹಿಳೆಯ ವಿರುದ್ಧ ಅನುಚಿತ ವರ್ತನೆ ಮತ್ತು ಸೈಬರ್‌ ಕ್ರೈಮ್ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಪ್ರತಿಭಾ ಕುಳಾಯಿ ಅವರು ಸುರತ್ಕಲ್‌ ಟೋಲ್‌ಗೇಟ್‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದರು. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್‌ನ ಮಾಜಿ ಕಾರ್ಪೋರೇಟರ್‌ ಕೂಡಾ ಆಗಿದ್ದಾರೆ.

ಶ್ಯಾಮ ಸುದರ್ಶನ ಭಟ್‌ ಹೊಸಮೂಲೆ ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕರ ಆಪ್ತ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ಭರತ್‌ ಶೆಟ್ಟಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಬಿಸಿ ನಾಗೇಶ್ ಮತ್ತು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸೇರಿದಂತೆ ಹಲವರ ಜೊತೆಗೆ ಇರುವ ಚಿತ್ರಗಳು ಕೂಡಾ ವೈರಲ್ ಆಗಿದೆ.

ಇದನ್ನೂ ಓದಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಭಾ ಕುಳಾಯಿ, “ನಾನು ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದು ಪ್ರತೀ ಬಾರಿಯೂ ನನ್ನ ಬಿಲ್ಲವ ಸಮುದಾಯ ನನ್ನ ಜೊತೆ ಬೆಂಗಾವಲಾಗಿ ನಿಂತಿದೆ. ನಾನು ಬಿಲ್ಲವ ಸಮುದಾಯದ ನನ್ನ ಅಣ್ಣ ತಮ್ಮಂದಿರಿಗೆ ಏನೇ ಸಮಸ್ಯೆ ಎದುರಾದರೂ ಅವರ ಜೊತೆ ಹಿಂದೆಯೂ ಇದ್ದೆ ಮುಂದೆಯೂ ಇದ್ದೇನೆ” ಎಂದು ಹೇಳಿದ್ದಾರೆ.

“ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುರತ್ಕಲ್ ಟೋಲ್ ವಿರೋಧಿ ಹೋರಾಟವನ್ನು ನೆಪವಾಗಿಟ್ಟು ತೀರಾ ಅಸಹ್ಯ ರೀತಿಯಲ್ಲಿ ಕಮೆಂಟ್ಸ್, ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ನನ್ನ ಸಮುದಾಯದ ಅಣ್ಣ ತಮ್ಮಂದಿರು ಮಾತ್ರವಲ್ಲದೆ ನನಗೆ ಪ್ರತೀ ಬಾರಿ ಸಹಕಾರ ನೀಡುತ್ತಾ ಬಂದಿರುವ ತುಳುನಾಡಿನ ವಿದ್ಯಾವಂತ ಯುವಜನತೆ ಒಮ್ಮೆ ಗಮನಿಸಿದರೆ ಸಾಕು. ಈ ರೀತಿ ಕಮೆಂಟ್ಸ್ ಮಾಡುವವರ ಮನೆಯಲ್ಲೂ ತಾಯಿ, ಅಕ್ಕ, ತಂಗಿ, ಅತ್ತಿಗೆ, ಪತ್ನಿ… ಹೀಗೆ ಯಾರಾದರೂ ‘ಹೆಣ್ಣು’ ಎಂಬ ಪವಿತ್ರ ಸ್ಥಾನ ಪಡೆದ ಜೀವವೊಂದು ಇದ್ದರೆ ಇಂತಹ ಕೆಟ್ಟ ಪದ ಬಳಕೆ ಮಾಡುತ್ತಿರಲಿಲ್ಲ” ಎಂದು ಹೇಳಿದ್ದಾರೆ.

“ನನ್ನ ಕೋರಿಕೆ ಇಷ್ಟೇ… ನನ್ನ ಹೋರಾಟ, ಸಮುದಾಯದ ಮೇಲಿನ ನನ್ನ ಪ್ರೀತಿ, ಅಭಿಮಾನ ನೀವೆಲ್ಲ ಕಂಡಿದ್ದರೆ ನನ್ನನ್ನು ಈ ಸಂದರ್ಭದಲ್ಲೂ ಬೆಂಬಲಿಸಬೇಕು” ಎಂದು ಪ್ರತಿಭಾ ಕುಳಾಯಿ ವಿನಂತಿಸಿದ್ದಾರೆ.

ಇದನ್ನೂ ಓದಿ: ನಾರಾಯಣಗುರುಗಳ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ: ಹೆದ್ದಾರಿ ಬಂದ್ ನಡೆಸಲು ಬಿಲ್ಲವ ಸಮಾಜದ ತಯಾರಿ

ಶ್ಯಾಮ್ ಸುದರ್ಶನ್ ಭಟ್‌‌ನ ಕೃತ್ಯವನ್ನು ಸುರತ್ಕಲ್ ಟೋಲ್‌ಗೇಟ್‌ ವಿರೋಧಿ ಸಮಿತಿ ಖಂಡಿಸಿದ್ದು, “ಟೋಲ್ ವಿರೋಧಿ ಹೋರಾಟದ ಜನ ಬೆಂಬಲ ಕಂಡು ಬಿಜೆಪಿ ಪರಿವಾರ ಎಷ್ಟು ಕ್ರದ್ಧ ಆಗಿದೆ ಅಂದರೆ, ಹೋರಾಟದಲ್ಲಿ ಭಾಗಿಯಾಗಿರುವ ತುಳುವ ಹೆಣ್ಣು ಮಕ್ಕಳ ಕುರಿತ ‘ಸಭ್ಯ’ ಮುಖವಾಡಗಳೂ ವಿಕಾರವಾಗಿ ಅರಚಾಡತೊಡಗಿದೆ. ಸಮಾಜ ಇದನ್ನೆಲ್ಲಾ ಗಮನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನ. ಸಮಿತಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಪ್ರತಿಭಾ ಕುಳಾಯಿ ಅವರ ಜೊತೆಗೆ ನಿಲ್ಲುತ್ತದೆ” ಎಂದು ಹೋರಾಟ ಸಮಿತಿ ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....